ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಬಿಜನಗೇರಾ ಗ್ರಾಮದ ಮೆಹಬೂಬ್ ಅಲಿ ಅವರು ಲೇಔಟ್ ನಿರ್ಮಾಣ ಉದ್ದೇಶಕ್ಕಾಗಿ ತಮ್ಮ ಎರಡು ಎಕರೆ ಜಮೀನಿನ ಖಾತಾ ಉತಾರ ನೀಡುವಂತೆ ಅರ್ಜಿ ಸಲ್ಲಿಸಿದ್ದರು. ಈ ಪ್ರಕ್ರಿಯೆ ಪೂರ್ಣಗೊಳಿಸಲು ಪಿಡಿಒ ಲಕ್ಷ್ಮೀ ಪ್ಯಾಟಿ ಅವರು ₹2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಲಂಚದ ಬೇಡಿಕೆಯಿಂದ ಬೇಸತ್ತ ಮೆಹಬೂಬ್ ಅಲಿ ಅವರು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಕಾರ್ಯಾಚರಣೆ ರೂಪಿಸಿದ ಅಧಿಕಾರಿಗಳು, ಇಂದು ಪಿಡಿಒ ಲಕ್ಷ್ಮೀ ಪ್ಯಾಟಿ ಅವರು ತಮ್ಮ ಪತಿಯ ಬ್ಯಾಂಕ್ ಖಾತೆಗೆ ಫೋನ್‌ಪೇ ಮೂಲಕ ₹1.50 ಲಕ್ಷ ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದ ವೇಳೆ ದಾಳಿ ನಡೆಸಿದರು.
ಹಣ ವರ್ಗಾವಣೆಗೊಂಡ ತಕ್ಷಣ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಲಕ್ಷ್ಮೀ ಪ್ಯಾಟಿ ಅವರನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…
ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…