Latest

ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆಗೆ ಐ.ಲವ್.ಯು ಎಂದು ಮೆಸೇಜ್ ಕಳುಹಿಸಿದ ಪಿಡಿಓ!:ಪಿಡಿಓ ಸೇರಿದಂತೆ ನಾಲ್ವರ ವಿರುದ್ ದೂರು ದಾಖಲು.

ಚಿಕ್ಕಬಳ್ಳಾಪುರ ಜಿಲ್ಲೆಯ ರಾಶ್ಚೆರುವು ಗ್ರಾಮದಲ್ಲಿ ಪಿಡಿಓ ಹಾಗೂ ಇತರ ಸದಸ್ಯರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಗ್ರಾಮ ಪಂಚಾಯತಿ ಅಧ್ಯಕ್ಷೆಯೊಬ್ಬರಿಗೆ ಪಿಡಿಓ ಅಶೋಕ್ ಅಶ್ಲೀಲ ಮೆಸೇಜ್‌ ಕಳುಹಿಸಿ “ನಾನು ನಿನ್ನ ಪ್ರೀತಿಸುತ್ತೇನೆ” ಎಂದು ಸಂದೇಶ ರವಾನಿಸಿರುವುದಾಗಿ ಆರೋಪ ಕೇಳಿ ಬಂದಿದೆ.

ಅಧ್ಯಕ್ಷೆಯೂ ಪಿಡಿಓ ಅಶೋಕ್‌ಗೂ ವಿವಾಹಿತರಾಗಿದ್ದು, ಇದರ ನಡುವೆಯೂ ಈ ರೀತಿಯ ಸಂದೇಶ ಕಳುಹಿಸಿದ್ದು ಅಧ್ಯಕ್ಷೆಯಲ್ಲಿ ಆಕ್ರೋಶ ಉಂಟುಮಾಡಿದೆ. ಅಶ್ಲೀಲ ಮೆಸೇಜ್‌ ಪ್ರಕರಣದ ಜೊತೆಗೆ ಇನ್ನೂ ಹಲವು ಆರೋಪಗಳು ಲಗ್ಗೆ ಇಟ್ಟಿವೆ.

ಅಧ್ಯಕ್ಷೆ ನೀಡಿರುವ ದೂರಿನಲ್ಲಿ, ಪಿಡಿಓ ಅಶೋಕ್ ಮತ್ತು ಮಾಜಿ ಅಧ್ಯಕ್ಷೆಯ ಪತಿ ಎ.ಎನ್. ಬಾಬು ರೆಡ್ಡಿ, ಹಾಲಿ ಸದಸ್ಯ ನಾಗೇಶ್ ಮತ್ತು ಮತ್ತೊಬ್ಬ ಭಾನು ಪ್ರಕಾಶ್ ಎಂಬವರು ಖಾಲಿ ಚೆಕ್ಗಳಿಗೆ ಸಹಿ ಹಾಕುವಂತೆ ಬಲವಂತ ಮಾಡಿರುವುದು, ಅವರ ವಿರುದ್ಧ ಜಾತಿ ನಿಂದನೆ ಮಾಡಿರುವುದೂ ಸೇರಿದೆ ಎಂದು ದೂರಲಾಗಿದೆ.

ಈ ಸಂಬಂಧ ಚೇಳೂರು ಪೊಲೀಸ್ ಠಾಣೆಯಲ್ಲಿ ಪಿಡಿಓ ಸೇರಿದಂತೆ ನಾಲ್ವರು ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೊಲೀಸರು ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ.

nazeer ahamad

Recent Posts

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

12 minutes ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

4 hours ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

7 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

12 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

1 day ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago