ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಉಟಕನೂರು ಗ್ರಾಮ ಪಂಚಾಯಿತಿಯಲ್ಲಿ ಸೇವೆ ನಿರ್ವಹಿಸುತ್ತಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಶ್ವೇತಾ ಕುಲಕರ್ಣಿ ಅವರನ್ನು ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿರುವ ಹಿನ್ನೆಲೆಯಲ್ಲಿ ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಈ ಸಂಬಂಧ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ರಾಹುಲ್ ತುಕಾರಾಂ ಪಾಂಡ್ವೆ ಅವರು ಗುರುವಾರದಂದು ಅಮಾನತು ಆದೇಶ ಹೊರಡಿಸಿದ್ದಾರೆ.
ಪಿಡಿಒ ಶ್ವೇತಾ ಕುಲಕರ್ಣಿ ಅವರು ಮೇಲಧಿಕಾರಿಗಳ ಸೂಚನೆಗಳನ್ನು ಪಾಲಿಸದೇ, ತಮ್ಮಸ್ವಂತ ಮೆಚ್ಚಿನಂತೆ ಆರ್ಥಿಕ ವ್ಯವಹಾರಗಳಲ್ಲಿ ತೊಡಗಿದ್ದು, ಕೆಲ ಹಣಕಾಸು ವ್ಯವಹಾರಗಳಲ್ಲಿ ದುರ್ನಿಯೋಗ ನಡೆಸಿರುವುದು ತನಿಖೆಯಿಂದ ಪತ್ತೆಯಾಗಿದೆ. ಈ ಕುರಿತು ಮಾನ್ವಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಲ್ಲಿಸಿದ ವರದಿಯನ್ನಾಧಾರವಾಗಿಸಿಕೊಂಡು ಕ್ರಮ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಈ ಪ್ರಕ್ರಿಯೆ ಹಿನ್ನೆಲೆಯಲ್ಲಿ ಶ್ವೇತಾ ಕುಲಕರ್ಣಿಯವರ ವಿರುದ್ಧ ಮುಂದಿನ ತನಿಖೆ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…