Latest

ನಿಯಮ ಉಲ್ಲಂಘನೆ ಆರೋಪ: ಪಿಡಿಒ ಅಮಾನತು

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಪುರ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಬಿ.ಎಸ್. ಶುಭಲಕ್ಷ್ಮಿಯವರನ್ನು ಕರ್ತವ್ಯ ಲೋಪ ಮತ್ತು ಹಣ ದುರುಪಯೋಗ ಆರೋಪದ ಮೇಲೆ ಸೇವೆಯಿಂದ ಅಮಾನತು ಮಾಡಲಾಗಿದೆ. ಈ ಸಂಬಂಧ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್‌.ಎಸ್. ಕೀರ್ತನಾ ಅವರು ಆದೇಶ ಹೊರಡಿಸಿದ್ದಾರೆ.

ಶುಭಲಕ್ಷ್ಮಿಯವರು ಪ್ರಸ್ತುತ ಕುಂಕಾನಾಡು ಗ್ರಾಮ ಪಂಚಾಯಿತಿಯಲ್ಲಿ ಪಿಡಿಒ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ ವಿರುದ್ಧ ಕುಂಕಾನಾಡು ಗ್ರಾಮದ ಆರ್. ಮಂಜುನಾಥ್ ಎಂಬುವವರು ನೀಡಿದ್ದ ದೂರು ಅನ್ವಯ ತನಿಖೆ ಕೈಗೊಳ್ಳಲಾಗಿತ್ತು.

ತಕ್ಷಣದ ಹಿಂದೆ ಅವರು ಪುರ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ, 2023–24ನೇ ಸಾಲಿನಲ್ಲಿ ವರ್ಗ-1 ನಡವಳಿ ಖಾತೆಯಿಂದ ₹4.62 ಲಕ್ಷ ಮೊತ್ತವನ್ನು ನೀರುಗಂಟಿಗಳ ಖರೀದಿಗೆ ನಿಯಮ ಉಲ್ಲಂಘನೆಯಿಂದ ಚೆಕ್‌ ಮೂಲಕ ಪಾವತಿಸಿದ್ದಾಗಿ ಆರೋಪವಾಗಿದೆ. ಅಲ್ಲದೆ, ಚುನಾವಣಾ ವೆಚ್ಚದ ಹಣ ಪಾವತಿಸಿದರೂ ಅದರ ರಶೀದಿಗೆ ಸಹಿ ಪಡೆಯದೆ, ಖರೀದಿ ದಾಖಲಾತಿ, ಸಾಮಗ್ರಿಗಳ ಸಂಗ್ರಹ ಮತ್ತು ವಿತರಣೆ ದಾಖಲೆಯನ್ನೂ ಸೂಕ್ತವಾಗಿ ನಿರ್ವಹಿಸಿಲ್ಲ ಎಂದು ತನಿಖೆಯಲ್ಲಿ ತಿಳಿದು ಬಂದಿದೆ.

ಈ ಎಲ್ಲಾ ಅನಿಯಮಿತತೆಗಳನ್ನು ಗಮನಿಸಿದ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗೆ ವರದಿ ಸಲ್ಲಿಸಿದ್ದು, ಮುಂದಿನ ತನಿಖೆಗೆ ಪಿಡಿಒ ವಿರುದ್ಧ ಇಲಾಖೆ ಕ್ರಮ ಕೈಗೊಳ್ಳಲಾಗಿದೆ.

ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳ ಅನ್ವಯ, ಬಿ.ಎಸ್. ಶುಭಲಕ್ಷ್ಮಿಯವರನ್ನು ತಾತ್ಕಾಲಿಕವಾಗಿ ಸೇವೆಯಿಂದ ಅಮಾನತುಗೊಳಿಸಿ ಕ್ರಮ ಜರುಗಿಸಲಾಗಿದೆ.

nazeer ahamad

Recent Posts

ಸಾಲ ಮರುಪಾವತಿ ಪ್ರಕರಣ: ಶಿರಸಿಯ ರವೀಶ ಹೆಗಡೆ ಭಟ್ಕಳ ಪೊಲೀಸರ ವಶಕ್ಕೆ

ಭಟ್ಕಳ: ಸಾಲ ಪಡೆದ ಹಣವನ್ನು ಮರುಪಾವತಿಸದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಶಿರಸಿ ಮೂಲದ ರವೀಶ ವೆಂಕಟ್ರಮಣ ಹೆಗಡೆ ಅವರನ್ನು ಭಟ್ಕಳ…

4 hours ago

52ರಲ್ಲೂ ಮಲೈಕಾ ಅರೋರಾ ಲವ್ ಲೈಫ್‌ ಸದ್ದು: ನಬೀಲ್ ನದ್ಲವಿ ಜೊತೆ ಫೋಟೋ ವೈರಲ್, ಹೊಸ ಸಂಬಂಧದ ಗುಸುಗುಸು!

ಮುಂಬೈ: ಬಾಲಿವುಡ್‌ನ ಫಿಟ್ನೆಸ್ ಹಾಗೂ ಫ್ಯಾಷನ್ ಐಕಾನ್ ಮಲೈಕಾ ಅರೋರಾ ತಮ್ಮ ವೈಯಕ್ತಿಕ ಜೀವನದ ವಿಚಾರವಾಗಿಯೂ ಆಗಾಗ್ಗೆ ಸುದ್ದಿಯಾಗುತ್ತಾರೆ. ಇದೀಗ…

5 hours ago

ಬೈಕ್‌ಗೆ ಬೆಂಕಿ ಹಾಕಿದ್ದು ರಾಜಕೀಯ ದ್ವೇಷಕ್ಕಲ್ಲ; ಪತಿಯನ್ನೇ ಕೊಲ್ಲಲು ಪತ್ನಿಯ ಸಂಚು! 6 ಮಂದಿ ಬಂಧನ

ಚಂದ್ರಗಿರಿ (ತಿರುಪತಿ): ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಬೈಕ್‌ಗೆ ಬೆಂಕಿ ಹಚ್ಚಲಾಗಿದೆ ಎಂದು ಭಾವಿಸಲಾಗಿದ್ದ ಪ್ರಕರಣವೊಂದು ತನಿಖೆಯ ಬಳಿಕ ಬೇರೆಯದೇ ತಿರುವು…

5 hours ago

ಪ್ರೀತಿಸಿ ಮದುವೆಯಾದ ಪತಿಯೇ ಪತ್ನಿಯ ಪಾಲಿಗೆ ಯಮನಾದ: 6 ದಿನದ ಹಸುಗೂಸಿನೊಂದಿಗೆ ಪರಾರಿ!

ದಾವಣಗೆರೆ: ಪ್ರೀತಿಸಿ ಮದುವೆಯಾದ ಪತಿಯೇ ಪತ್ನಿಯ ಸಾವಿಗೆ ಕಾರಣನಾದ ಆರೋಪ ಕೇಳಿಬಂದಿದ್ದು, ಮೃತದೇಹವನ್ನು ಪೊಲೀಸ್ ಠಾಣೆ ಬಳಿಯ ರಸ್ತೆಯಲ್ಲಿ ಬಿಟ್ಟು…

5 hours ago

ಹಾಡಹಗಲೇ ಪಡಿತರ ಅಕ್ಕಿ ಸಾಗಾಟ: ಆಹಾರ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ..!

ಬಾಗಲಕೋಟೆ: ಬಡ ಹಾಗೂ ಅರ್ಹ ಫಲಾನುಭವಿಗಳಿಗೆ ವಿತರಿಸಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪಗಳು…

1 day ago

₹5 ಸಾವಿರಕ್ಕೆ ರೂಮ್‌ಗೆ ಬಂದ ಯುವತಿ; ಬಿಯರ್‌ನಲ್ಲಿ ಅಮಲು ಬೆರೆಸಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶಾಕ್!

ಪ್ರವಾಸಕ್ಕೆಂದು ಹೋಗಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹೋಟೆಲ್‌ನಲ್ಲಿ ಯುವತಿಯೊಬ್ಬಳ ಮೋಸದ ಜಾಲಕ್ಕೆ ಸಿಲುಕಿ ಹಣ ಹಾಗೂ ಚಿನ್ನ ಕಳೆದುಕೊಂಡಿರುವ ಘಟನೆ…

1 day ago