ಕಾಡಾನೆಯಿಂದ ಮಹಿಳೆ ಸಾವಿಗೀಡಾದ ಪ್ರದೇಶಕ್ಕೆ ತೆರಳಿದ್ದ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಮೇಲೆ ಗುಂಪೊಂದು ದಾಳಿ ನಡೆಸಿದ್ದು, ಅವರ ಬಟ್ಟೆಯನ್ನೂ ಹರಿದು ಹಾಕಿದೆ. ಅಲ್ಲಿಂದ ಕೊನೆಗೂ ಅವರನ್ನು ಹರಸಾಹಸಪಟ್ಟು ಪೊಲೀಸರು ರಕ್ಷಿಸಿ ಕರೆದೊಯ್ದಿದ್ದಾರೆ.
ನಡೆದ ಘಟನೆ ಬಗ್ಗೆ ಶಾಸಕ ಕುಮಾರಸ್ವಾಮಿ ಹರಿದ ಬಟ್ಟೆಯಲ್ಲಿ ಹೇಳಿಕೆ ನೀಡಿದ್ದಾರೆ. ಬೇಕು ಅಂತ ಗುಂಪುಗೂಡಿ ಹಲ್ಲೆ ಮಾಡಿದ್ದಾರೆ. ನಾನು ಅಲ್ಲೇ ಇರುತ್ತಿದ್ದೆ, ನನ್ನನ್ನು ಪೊಲೀಸರು ಮಿಸ್ಗೈಡ್ ಮಾಡಿ ಹೊರಗೆ ಕಳಿಸಿದ್ದರು ಎಂದಿರುವ ಶಾಸಕರು, ಪೊಲೀಸರ ವೈಫಲ್ಯ ಎಂದೂ ಹೇಳಿದ್ದಾರೆ. ಶಾಸಕರು ಆನೆ ಸಾಕಿದ್ದಾರೆ ಎಂದು ಜನರು ಹೊಡೆದು ಕಳುಹಿಸಿದ್ದಾರೆ. ಕೋರ್ಟ್, ಸರ್ಕಾರ ಏನು ಹೇಳುತ್ತದೆ ಎನ್ನುವುದು ರಾಜ್ಯಕ್ಕೆ-ದೇಶಕ್ಕೆ ಗೊತ್ತಿದೆ. ಅದಾಗ್ಯೂ ಸಂಚು ಮಾಡಿ ಹಲ್ಲೆ ಮಾಡಲಾಗಿದೆ. ಸಾರ್ವಜನಿಕರ ಸೇವೆ ಮಾಡುವವರು ಎಲ್ಲ ತಾಗ್ಯಕ್ಕೂ ಸಜ್ಜಾಗಿರ್ತೀವಿ ಎಂದೂ ಅವರು ಹೇಳಿದ್ದಾರೆ.
ಮೂಡಿಗೆರೆ ತಾಲೂಕಿನ ಹುಲ್ಲೇಮನೆಯಲ್ಲಿ ಮಹಿಳೆಯೊಬ್ಬರು ಕಾಡಾನೆ ದಾಳಿಗೆ ಒಳಗಾಗಿ ಮೃತಪಟ್ಟಿದ್ದಾರೆ. ಈ ಹಿಂದೆಯೂ ಜನರು ಕಾಡಾನೆ ದಾಳಿಗೆ ಬಲಿಯಾಗಿದ್ದು, ಆಗ ಉದ್ರಿಕ್ತ ಸಾರ್ವಜನಿಕರು ಪೊಲೀಸ್ ಜೀಪ್ ಅಲುಗಿಸಿದ್ದರು. ಈ ಸಲ ಶಾಸಕರ ಮೇಲೇ ಹಲ್ಲೆ ಮಾಡಿದ್ದಾರೆ. ಶಾಸಕರನ್ನು ವಾಪಸ್ ಕರೆದೊಯ್ಯಲು ಪೊಲೀಸರು ಹರಸಾಹಸ ಪಡಬೇಕಾಯಿತು. ತಲೆ ಮೇಲೆ ಕೈ ಇಟ್ಟುಕೊಂಡು ಪೊಲೀಸ್ ಜೀಪ್ನಲ್ಲಿ ಶಾಸಕರು ಹೋಗುವಂತಾಗಿತ್ತು.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…