ಚಿಕ್ಕಮಗಳೂರು, ಜುಲೈ 8: ರಾಜ್ಯದ ಪಡಿತರ ವ್ಯವಸ್ಥೆಯಲ್ಲಿ ಮತ್ತೊಮ್ಮೆ ಭಾರೀ ಅವ್ಯವಹಾರದ ಆರೋಪ ಕೇಳಿಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬೊಮ್ಮೇನಹಳ್ಳಿ ಹಾಗೂ ನೆರಲಕೆರೆ ಸೇರಿದಂತೆ ಹಲವು ಗ್ರಾಮಗಳ ನ್ಯಾಯಬೆಲೆ ಅಂಗಡಿಗಳಲ್ಲಿ ಫಲಾನುಭವಿಗಳಿಗೆ ಪ್ಲಾಸ್ಟಿಕ್ ಅಕ್ಕಿ ವಿತರಣೆ ಮಾಡಲಾಗಿದೆ ಎಂಬ ಆರೋಪಗಳು ಬೆಳಕಿಗೆ ಬಂದಿವೆ.
ಸ್ಥಳೀಯರ ಹೇಳಿಕೆಯಂತೆ, ಅಂಗಡಿಗಳಿಂದ ಪಡೆದ ಅಕ್ಕಿಯನ್ನು ನೀರಿಗೆ ಹಾಕಿದಾಗ ಅದು ಸಾಮಾನ್ಯ ಅಕ್ಕಿಯಂತೆ ನೆನೆಯದೆ ಪ್ಲಾಸ್ಟಿಕ್ ಮಾದರಿಯಲ್ಲಿ ಮೇಲಕ್ಕೆ ತೇಲುತ್ತಿದೆ. ಕೆಲವೊಂದು ಪ್ಯಾಕೆಟ್ಟಿನಲ್ಲಿ ಅಕ್ಕಿಯ ಅರ್ಧದಷ್ಟು ಭಾಗ ಈ ಶಂಕಾಸ್ಪದ ಅಂಶದಿಂದ ಕೂಡಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಜನರಲ್ಲಿ ಆತಂಕ ಮನೆಮಾಡಿದೆ.
ಪ್ಲಾಸ್ಟಿಕ್ ಅಕ್ಕಿ ಸೇವನೆಯಿಂದ ಆರೋಗ್ಯಕ್ಕೆ ಗಂಭೀರ ಪರಿಣಾಮ ಉಂಟಾಗುವ ಸಾಧ್ಯತೆ ಇರುವುದರಿಂದ, ಪಡಿತರದಾರರು ತಕ್ಷಣವೇ ಸ್ಥಳೀಯ ತಹಶೀಲ್ದಾರ್ ಕಚೇರಿಗೆ ದೂರು ಸಲ್ಲಿಸಿದ್ದಾರೆ. ಪ್ರಾಥಮಿಕ ತನಿಖೆ ಕೈಗೊಂಡ ಅಧಿಕಾರಿಗಳು ಪ್ರಕರಣದ ಗಂಭೀರತೆಯನ್ನು ಗಮನಿಸಿ ಹೆಚ್ಚಿನ ಪರಿಶೀಲನೆ ಮಾಡಲು ಕ್ರಮ ಆರಂಭಿಸಿದ್ದಾರೆ.
ಈ ಸಂಬಂಧ ನೊಂದಿಗೆ ಮಾತನಾಡಿದ ಅಧಿಕಾರಿಯೊಬ್ಬರು, “ಆಪತ್ತಿನ ವೇಳೆ ಪಡಿತರ ವ್ಯವಸ್ಥೆ ಬಡ ಜನತೆಗೆ ಆಶಾದೀಪವಾಗಬೇಕು. ಆದರೆ ಈ ರೀತಿಯ ಅಕ್ರಮ ಘಟನೆಯು ಖಂಡನೀಯ. ನಾವು ಪ್ರಕರಣದ ಹಿನ್ನೆಲೆಯನ್ನು ಸಂಪೂರ್ಣವಾಗಿ ತನಿಖೆ ಮಾಡುತ್ತೇವೆ,” ಎಂದಿದ್ದಾರೆ.
ಜನತಾ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಪಡಿತರ ಆಹಾರದ ಗುಣಮಟ್ಟದ ಬಗ್ಗೆ ಸಾರ್ವಜನಿಕರಲ್ಲಿ ಮತ್ತೆ ಅನುಮಾನಗಳು ಮೂಡಿರುವುದು ನಿಜ. ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಜನರು ಆಗ್ರಹಿಸುತ್ತಿದ್ದಾರೆ.
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…