ಬೆಂಗಳೂರು ನಾಳೆ ಪ್ರಧಾನಿ ನರೇಂದ್ರ ಮೋದಿ ಅವರ ವಿಶೇಷ ಭೇಟಿಗೆ ಸಜ್ಜಾಗಿದೆ. ಅವರು ಬೊಮ್ಮಸಂದ್ರ–ರಾಗಿಗುಡ್ಡ ಮಾರ್ಗದ ಹಳದಿ ಮೆಟ್ರೋ ರೈಲು ಸೇವೆಯನ್ನು ಅಧಿಕೃತವಾಗಿ ಉದ್ಘಾಟಿಸುವುದರ ಜೊತೆಗೆ, ಬೆಳಗಾವಿ–ಬೆಂಗಳೂರು–ಬೆಳಗಾವಿ ನಡುವೆ ಸಂಚರಿಸಲಿರುವ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಹಸಿರು ನಿಶಾನೆ ತೋರಲಿದ್ದಾರೆ.
ನಗರದ ಪ್ರಮುಖ ಭಾಗಗಳಾದ ಸೌತ್ ಎಂಡ್ ಸರ್ಕಲ್, ರಾಗಿಗುಡ್ಡ, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ಹಲವು ಕಡೆಗಳಲ್ಲಿ ಪ್ರಧಾನಿ ಅವರಿಗೆ ಭಾರೀ ಸ್ವಾಗತ ಕೋರಲು ಬಿಜೆಪಿ ಕಾರ್ಯಕರ್ತರು ತಯಾರಾಗಿದ್ದಾರೆ. ಬೊಮ್ಮಸಂದ್ರದಿಂದ ರಾಗಿಗುಡ್ಡದವರೆಗೆ ಸ್ವತಃ ಮೆಟ್ರೋ ಪ್ರಯಾಣ ಮಾಡುವ ಮೋದಿ, ಈ ವೇಳೆ ಪ್ರಯಾಣಿಕರ ಜೊತೆ ಮಾತುಕತೆ ನಡೆಸುವ ಸಾಧ್ಯತೆಯಿದೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಮಾಹಿತಿ ಪ್ರಕಾರ, ಇದೇ ಸಂದರ್ಭದಲ್ಲಿ ಪ್ರಧಾನಿ ಮೂರು ಹೊಸ ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಿದ್ದಾರೆ. ಅವುಗಳಲ್ಲಿ —
ಬೆಂಗಳೂರಿನಿಂದ ಬೆಳಗಾವಿಗೆ
ಮಹಾರಾಷ್ಟ್ರದ ನಾಗ್ಪುರದ ಅಜ್ನಿಯಿಂದ ಪುಣೆ
ಪಂಜಾಬಿನ ಅಮೃತಸರದಿಂದ ಜಮ್ಮು-ಕಾಶ್ಮೀರದ ಶ್ರೀ ಮಾತಾ ವೈಷ್ಣೋ ದೇವಿ ಕತ್ರಾ ನಡುವೆ ಸಂಚರಿಸುವ ರೈಲುಗಳು ಸೇರಿವೆ.
ಈ ಯೋಜನೆಗಳಿಂದ ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳ ಪ್ರಯಾಣಿಕರಿಗೆ ವೇಗವಾದ ಹಾಗೂ ಸುಗಮ ರೈಲು ಸೇವೆಯ ಅನುಭವ ದೊರಕಲಿದೆ ಎಂದು ಕೇಂದ್ರ ಸರ್ಕಾರ ವಿಶ್ವಾಸ ವ್ಯಕ್ತಪಡಿಸಿದೆ.
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…