ಹುಬ್ಬಳ್ಳಿ: ಧಾರಾಕಾರ ಮಳೆಯಿಂದಾಗಿ ವ್ಯಕ್ತಿಯೋರ್ವನು ಚರಂಡಿಯಲ್ಲಿ ಕೊಚ್ಚಿ ಹೋಗಿರುವ ದುರ್ಘಟನೆ ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಗಲಿ ರಸ್ತೆಯಲ್ಲಿ ನಡೆದಿದೆ.

ಬೀರಬಂದ ಓಣಿಯ ನಿವಾಸಿ, 55 ವರ್ಷದ ಹುಸೇನ್ ಕಳಸ ಎಂಬವರು ಈ ದುರ್ಘಟನೆಯು ನಡೆದ ವ್ಯಕ್ತಿ ಎಂದು ಗುರುತಿಸಲಾಗಿದೆ. ಮಾಹಿತಿ ಪ್ರಕಾರ, ರಾತ್ರಿ 10 ಗಂಟೆಯ ಸುಮಾರಿಗೆ ಹೊಲದಿಂದ ಮನೆ ಕಡೆಗೆ ದ್ವಿಚಕ್ರ ವಾಹನದಲ್ಲಿ ಮರಳುತ್ತಿದ್ದಾಗ, ಏಕಾಏಕಿ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದು ಅವರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ ಎನ್ನಲಾಗಿದೆ.

ಘಟನೆ ನಡೆದ ತಕ್ಷಣವೇ ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಕೊಚ್ಚಿ ಹೋಗಿರುವ ವ್ಯಕ್ತಿಯನ್ನು ಹುಡುಕುವ ಕಾರ್ಯದಲ್ಲಿ ತೊಡಗಿದ್ದಾರೆ. ವರದಿ: ಶಿವು ಪಿ.ಆರ್.

error: Content is protected !!