Latest

ಮಾಲೂರಿನಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ; 6 ಜನರ ಗುಂಪು ಪೊಲೀಸರ ವಶಕ್ಕೆ.

ಮಾಲೂರು ಠಾಣಾ ಸರಹದ್ದಿನ ಅಗ್ರಹಾರ ಗ್ರಾಮದ ಬಳಿ ಇರುವ ಮಧು ರವರ ನೀಲಗಿರಿ ತೋಪಿನಲ್ಲಿ ಅಂದರ್ ಬಾಹರ್ ಜೂಜಾಟ ಆಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ ಹರೀಶ್ ಕುಮಾರ್, ನಾಗರಾಜ್ , ಅವಿನಾಸ್, ಮಂಜುನಾತ, ಮುನಿಯಪ್ಪ , ಮತ್ತು ವೆಂಕಟೇಶಪ್ಪ 06 ಜನರನ್ನು ವಶಕ್ಕೆ ಪಡೆದು ಅಂದರ್ ಬಾಹರ್ ಜೂಜಾಟಕ್ಕೆ ಪಣವಾಗಿಟ್ಟಿದ್ದ ರೂ. 6200/- ನಗದು. 52 ಇಸ್ಪೀಟ್ ಎಲೆಗಳನ್ನು ಮತ್ತು ಒಂದು ಪ್ಲಾಸ್ಟಿಕ್ ಟಾರ್ಪಲ್ ಅನ್ನು ವಶಕ್ಕೆ ಪಡೆದು ಒಟ್ಟು 06 ಜನರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕೋಲಾರ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ನಿಖಿಲ್ ಬಿ. ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಜಗದೀಶ್ ಮತ್ತು ರವಿಶಂಕರ್ ರವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಎಂ.ಹೆಚ್ ನಾಗ್ತೇ ಪೊಲೀಸ್ ಉಪಾಧೀಕ್ಷಕರು, ಕೋಲಾರ ಉಪ-ವಿಭಾಗ ರವರ ನೇತೃತ್ವದಲ್ಲಿದಲ್ಲಿ ಪಿ.ಐ ವಸಂತ್ ಕುಮಾರ್ ಮಾಲೂರು ಪೊಲೀಸ್ ಠಾಣೆ ಸಿಬ್ಬಂದಿಗಳಾದ ಎ.ಎಸ್.ಐ ಶ್ರೀಮತಿ ವರಲಕ್ಷ್ಮಿ, ಕೋದಂಡಪಾಣಿ, ವೆಂಕಟೇಶ್, ರಾಜ್ ಕುಮಾರ್, ನವೀನ್ ಕುಮಾರ್, ಸಚಿನ್ ರವರು ಈ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದು ಅಧಿಕಾರಿ ಮತ್ತು ಸಿಬ್ಬಂದಿಯವರ ಈ ಕಾರ್ಯವನ್ನು ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘಿಸಿದ್ದಾರೆ. ವರದಿ: ರೋಶನ್ ಜಮೀರ್

nazeer ahamad

Recent Posts

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

3 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

8 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

23 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago