Latest

ಪೋಕ್ಸೊ ಆರೋಪಿಯಿಂದ ಪೊಲೀಸರಿಗೆ ಹಲ್ಲೆ – ಸ್ಥಳ ಮಹಜರು ವೇಳೆ ನಡೆದ ತೀವ್ರ ಗಲಾಟೆ

ಉಡುಪಿ, ಜುಲೈ 13: ಅಪ್ರಾಪ್ತ ಬಾಲಕಿಯ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿದ್ದ ವ್ಯಕ್ತಿ, ಸ್ಥಳ ಮಹಜರು ವೇಳೆ ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಉತ್ತರ ಪ್ರದೇಶ ಮೂಲದ 29 ವರ್ಷದ ಮುಹಮ್ಮದ್ ದಾನಿಶ್ ಎನ್ನುವ ವ್ಯಕ್ತಿ, ರವಿವಾರ ಮಣಿಪಾಲದ ಟ್ಯಾಂಗೋಡು ಹಳ್ಳಿಯಲ್ಲಿ ಮಹಜರು ವೇಳೆ ಪರಾರಿಯಾಗಲು ಯತ್ನಿಸಿದ್ದು, ಈ ಸಂದರ್ಭ ಹೊಡೆದಾಡುವ ಹಂತಕ್ಕೇರಿದಿದ್ದಾನೆ.

ಮಹಜರು ವೇಳೆ ಆತನನ್ನು ಹಿಡಿದುಕೊಂಡಿದ್ದ ಪೊಲೀಸ್ ಸಿಬ್ಬಂದಿ ರಿತೇಶ್‌ ಮೇಲೆ ದಾನಿಶ್ ದಾಳಿ ನಡೆಸಿ, ಎದೆಗೆ ತಳ್ಳಿದ ಬಳಿಕ ನೆಲಕ್ಕೆ ದೂಡಿದ್ದಾನೆ. ಹತ್ತಿರವೇ ಇದ್ದ ಕಲ್ಲನ್ನು ಎತ್ತಿ ಹೊಡೆಯಲು ಯತ್ನಿಸಿದಾಗ, ಸ್ಥಳದಲ್ಲಿದ್ದ ಇನ್‌ಸ್ಪೆಕ್ಟರ್ ರಾಮಚಂದ್ರ ನಾಯಕ್ ತಡೆದಿದ್ದಾರೆ. ಆದರೆ ದಾನಿಶ್‌ ಅವರುಗಳ ಮೇಲೆಯೂ ಹಲ್ಲೆಗೆ ಮುಂದಾಗಿದ್ದಾನೆ. ಆಗ ಪೊಲೀಸರ ಲಾಠಿಚಾರ್ಜ್‌ಗೆ ಒಳಪಟ್ಟು ಎರಡೂ ಕಾಲುಗಳಿಗೆ ಗಾಯಗೊಂಡ ದಾನಿಶ್‌ನನ್ನು ವಶಕ್ಕೆ ಪಡೆಯಲಾಗಿದೆ.

ಘಟನೆಯಲ್ಲಿ ಗಾಯಗೊಂಡ ರಿತೇಶ್ ಹಾಗೂ ದಾನಿಶ್ ಅವರನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣದ ಬಗ್ಗೆ ಅರಿವು ಪಡೆದ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಅವರು ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳು ಸಿಬ್ಬಂದಿಯ ಆರೋಗ್ಯ ವಿಚಾರಿಸಿದ್ದಾರೆ. ಈ ಸಂದರ್ಭ ಹೆಚ್ಚುವರಿ ಎಸ್‌ಪಿ ಸುಧಾಕರ್ ಎಸ್. ನಾಯ್ಕ್, ಡಿವೈಎಸ್‌ಪಿ ಪ್ರಭು ಡಿ.ಟಿ. ಹಾಗೂ ಇನ್‌ಸ್ಪೆಕ್ಟರ್ ರಾಮಚಂದ್ರ ನಾಯಕ್ ಉಪಸ್ಥಿತರಿದ್ದರು.

ಆರು ಮಂದಿ ಆರೋಪಿಗಳ ಬಂಧನ

ಜುಲೈ 8ರಂದು ಎಂಟು ವರ್ಷದ ಬಾಲಕಿಯ ಮೇಲೆ ಮಣಿಪಾಲದ ಟ್ಯಾಪ್ಮಿ ರಸ್ತೆಯ ಹಳ್ಳಿಯಲ್ಲಿ ಲೈಂಗಿಕ ದೌರ್ಜನ್ಯ ನಡೆದಿದ್ದು, ಜುಲೈ 11ರಂದು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಯಲ್ಲಿ ಉಡುಪಿ ಪೊಲೀಸರ ತಂಡ ದಾನಿಶ್ ಸೇರಿದಂತೆ ಶಾಮಿ, ಮೌಸೀನ್ ಹಾಗೂ ಅಬಿದಾ ಎಂಬ ನಾಲ್ವರನ್ನು ಜುಲೈ 12ರಂದು ಬಂಧಿಸಿದೆ. ಅವರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ.

ಈ ಪ್ರಕರಣ ಸಂಬಂಧ ತನಿಖೆ ಮುಂದುವರಿದಿದ್ದು, ಆರೋಪಿಗಳ ವಿರುದ್ಧ ಕಾನೂನು ಪ್ರಕ್ರಿಯೆ ಜಾರಿಯಲ್ಲಿದೆ.

nazeer ahamad

Recent Posts

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

4 hours ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

6 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

11 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

1 day ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago