Categories: CrimeLatest

ಭಟ್ಕಳದಲ್ಲಿ ಗಾಂಜಾ ಜಾಲಕ್ಕೆ ಪೊಲೀಸ್ ಬ್ರೇಕ್: ಕಾರು ಸಮೇತ ಯುವಕ ಅರೆಸ್ಟ್

ಭಟ್ಕಳ: ಅಕ್ರಮ ಗಾಂಜಾ ಮಾರಾಟ ಜಾಲದ ವಿರುದ್ಧ ಭಟ್ಕಳ ಶಹರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಯುವಕನೊಬ್ಬನನ್ನು ಬಂಧಿಸಿ, ಗಾಂಜಾ ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಹೆಬಳೆ ನಿವಾಸಿ 24 ವರ್ಷದ ಅಬ್ರಾರ್ ಶೇಖ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಭಟ್ಕಳ ನಗರದ ಮುಗ್ಗುಂಕಾಲೋನಿಯ ಮೌಂಟೆನ್ ಗ್ರೌಂಡ್ ಸಮೀಪ ಈ ದಾಳಿ ನಡೆಸಲಾಗಿದೆ.

ಆರೋಪಿಯು ಯಾವುದೇ ಕಾನೂನುಬದ್ಧ ಪರವಾನಿಗೆ ಇಲ್ಲದೆ ಸಾರ್ವಜನಿಕರಿಗೆ ಮಾರಾಟ ಮಾಡುವ ಉದ್ದೇಶದಿಂದ ಗಾಂಜಾವನ್ನು ಸಂಗ್ರಹಿಸಿ ಇಟ್ಟಿದ್ದಾನೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ವೇಳೆ ಸುಮಾರು 84 ಗ್ರಾಂ ತೂಕದ, ಅಂದಾಜು ₹5,000 ಮೌಲ್ಯದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ ಗಾಂಜಾವನ್ನು ಸಣ್ಣ ಪ್ಯಾಕೆಟ್‌ಗಳಾಗಿ ಪ್ಯಾಕ್ ಮಾಡಲು ಬಳಸಲಾಗುತ್ತಿದ್ದ 12 ಖಾಲಿ ಪ್ಲಾಸ್ಟಿಕ್ ಸ್ಯಾಚೆಟ್‌ಗಳನ್ನೂ ಪೊಲೀಸರು ಜಪ್ತಿ ಮಾಡಿದ್ದಾರೆ.

ಇದೇ ವೇಳೆ ಗಾಂಜಾ ಸಾಗಾಟ ಹಾಗೂ ಸಂಗ್ರಹಕ್ಕಾಗಿ ಬಳಸಲಾಗುತ್ತಿದ್ದ ಅಂದಾಜು ₹5 ಲಕ್ಷ ಮೌಲ್ಯದ ಬಿಳಿ ಬಣ್ಣದ ಹೊಂಡಾ ಸಿಟಿ ಕಾರನ್ನೂ ವಶಕ್ಕೆ ಪಡೆಯಲಾಗಿದೆ.

ಈ ಸಂಬಂಧ ಭಟ್ಕಳ ಶಹರ ಪೊಲೀಸ್ ಠಾಣೆಯ ಉಪ ನಿರೀಕ್ಷಕ ನವೀನ್ ಎಸ್. ನಾಯ್ಕ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಪ್ರಕರಣದ ಮುಂದಿನ ತನಿಖೆಯನ್ನು ಪಿಎಸ್‌ಐ ಸೋಮರಾಜ ಟಿ. ರಾಠೋಡ್ ಅವರು ಮುಂದುವರಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್‌ಗಳ ಸಂಚಾರ, ಅಧಿಕಾರಿಗಳು ಮೌನ!?

ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…

1 day ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ

ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…

1 day ago

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

5 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

5 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

5 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

5 days ago