Latest

ಉಡುಪಿಯಲ್ಲಿ ಮಟ್ಕಾ ಜಾಲ ಭೇದಿಸಿದ ಪೊಲೀಸರು: ಬೃಹತ್ ಕಾರ್ಯಾಚರಣೆಯಲ್ಲಿ 12 ಮಂದಿ ಅರೆಸ್ಟ್.

ಉಡುಪಿ, ಜೂನ್ 2: ಜಿಲ್ಲೆಯಲ್ಲಿ ಮಟ್ಕಾ ದಂಧೆ ವಿರುದ್ಧ ಪೊಲೀಸರು ತೀವ್ರ ಕಾರ್ಯಾಚರಣೆ ಮುಂದುವರಿಸಿದ್ದು, ಸೋಮವಾರದಂದು ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಒಟ್ಟು 12 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಅವರು ಅಧಿಕಾರ ಸ್ವೀಕರಿಸಿದ ನಂತರ ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಇದಕ್ಕೆ ಭಾಗವಾಗಿ, ಮಟ್ಕಾ ದಂಧೆ ಮೇಲೆ ಬಿರುಸಿನ ದಾಳಿ ನಡೆದಿದೆ.

ಇದೇ ದಂಧೆಯ ಸಂಬಂಧ ಶಿರ್ವ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಹಿಂದಿನ ದಿನದಂದು ಬಂಧಿತನಾಗಿದ್ದ ಲಿಯೋ ಕರ್ನೆಲಿಯೋ ಎಂಬ ಮಟ್ಕಾ ಬುಕ್ಕಿಯಿಂದ ಲಭಿಸಿದ ಮಾಹಿತಿಯ ಆಧಾರದ ಮೇಲೆ ಪೊಲೀಸರು ಉಡುಪಿಯ ವಿವಿಧ ಠಾಣೆ ವ್ಯಾಪ್ತಿಗಳಲ್ಲಿ ಮುಂದುವರೆದ ಕಾರ್ಯಾಚರಣೆಯಲ್ಲಿ 12 ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಬಂಧಿತರು ಈ ಕೆಳಗಿನವರು:

ಮಲ್ಪೆ ಠಾಣೆ ವ್ಯಾಪ್ತಿಯಿಂದ: ಹಿರಿಯಡ್ಕ ಪಂಚನಬೆಟ್ಟುವಿನ ಪ್ರಕಾಶ್ ಮೂಲ್ಯ (43) ಮತ್ತು ಮಲ್ಪೆಯ ರತ್ನಾಕರ ಅಮೀನ್ (48)

ಮಣಿಪಾಲದಿಂದ: ಇಂದಿರಾನಗರದ ನಾಗೇಶ್ (56)

ಕೋಟ ಠಾಣೆಯಿಂದ: ಕಾರ್ಕಡದ ವಿಜಯ ನಾಯರಿ (50)

ಉಡುಪಿ ನಗರ ಠಾಣೆಯಿಂದ: ಪೇತ್ರಿಯ ದಿವಾಕರ ಪೂಜಾರಿ (42), ಶಿರಿಬೀಡು ಮಠದ ಬೆಟ್ಟುವಿನ ರಾಮ್‌ರಾಜ್ (44), ಮೂಡಸಗ್ರಿಯ ಜಗದೀಶ್ (39), ಕೊಪ್ಪಳ ಮೂಲದ ಅಂಬಾಗಿಲಿನ ಚಿದಾನಂದ (35), ಮಧ್ವನಗರದ ತಿಪ್ಪೆಸ್ವಾಮಿ (52), ಬಾಬು ನಾಯಕ್ ನಗರದ ರಾಘವೇಂದ್ರ (41), ಉಡುಪಿ ಪುತ್ತೂರಿನ ಉದಯ ಎಸ್. ಭಂಡಾರಿ (45)

ಪಡುಬಿದ್ರಿ ಠಾಣೆಯಿಂದ: ಉಚ್ಚಿಲದ ಮನೋಜ್ ಕುಮಾರ್ (39)

ಈ ಸಂಬಂಧ ಇನ್ನಷ್ಟು ತನಿಖೆ ಮುಂದುವರಿದಿದೆ. ಜಿಲ್ಲೆಯಾದ್ಯಂತ ಮಟ್ಕಾ ಸೇರಿದಂತೆ ಇತರ ಅಕ್ರಮ ಚಟುವಟಿಕೆಗಳ ಮೇಲೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ನಿಗಾ ವಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

12 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

24 hours ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

1 day ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

1 day ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

1 day ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago