Crime

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ ಬಡಾವಣೆಯ ಕಡೆಗೆ ಸ್ಕೂಟರ್ ನಲ್ಲಿ ಸೌಮ್ಯ ಎಂಬುವರು ಸುಮಾರು ಬೆಳಗ್ಗೆ 9 ಗಂಟೆಗೆ ಮಕ್ಕಳನ್ನು ಶಾಲೆಗೆ ಬಿಟ್ಟು ಹೋಗುತ್ತಿರುವ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿ ಒಬ್ಬ ಕಣ್ಣಿಗೆ ಕಾರದಪುಡಿ ಎರಚಿ ಮಹಿಳೆಯ ಕುತ್ತಿಗೆಯಲ್ಲಿದ್ದ 40 ಗ್ರಾಂ ಚಿನ್ನದ ಮಾಂಗಲ್ಯ ಸರವನ್ನು ದೋಚಲು ಯತ್ನಿಸಿದ್ದಾನೆ ಅದನ್ನು ಕಿತ್ತುಕೊಳ್ಳಲು ವಿಫಲವಾದ ಬೆನ್ನೆಲು 20 ಗ್ರಾಂ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದರು. ಆರೋಪಿಯನ್ನು ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು 26-10-25 ರಂದು ಬೆಳಗ್ಗೆ 8:00 ಯಲ್ಲಿ ಲಲಿತಾದ್ರಿಪುರ ಗುಡ್ಡದಿಂದ ಲಲಿತಾದ್ರಿಪುರ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ಪ್ರಕರಣದ ಆರೋಪಿಯನ್ನು ವಶಕ್ಕೆ ಪಡೆದುಕೊಂಡು ಠಾಣೆಗೆ ಹಾಜರುಪಡಿಸಿರುತ್ತಾರೆ. ಆರೋಪಿ ರಾಜೇಶ್ ನಾಯಕನ ವಿಚಾರಣೆ ಮಾಡಿ ಕಿತ್ತುಕೊಂಡಿದ್ದ 20 ಗ್ರಾಂ ತೂಕದ ಸುಮಾರು 2 ಲಕ್ಷ ಬೆಲೆಬಾಳುವ ಸರವನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ್ದಾರೆ.
ವರದಿ: ಬಸವಣ್ಣ

ಭ್ರಷ್ಟರ ಬೇಟೆ

Recent Posts

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

7 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

8 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

20 hours ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

20 hours ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

20 hours ago

ಕೊನೆಗೂ 21 ದಿನಗಳ ಬಳಿಕ ಅಣುಸ್ಥಾವರದ ಮೇಲೆ ಅಮೆರಿಕ ದಾಳಿ! ಇರಾನ್ ಅಣು ಕೇಂದ್ರ ವಿಕಿರಣ ಸೋರಿಕೆ ಭೀತಿ ಹೆಚ್ಚಳ?

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…

20 hours ago