ಎಲ್ಲಾ ರೀತಿಯ ಸಮಸ್ಯೆಗಳನ್ನು ಫೋನ್‌ನಲ್ಲಿ ಪರಿಹರಿಸಲಾಗುವುದು ಎಂಬುದಾಗಿ Pandit Modi Bettappa Astrology ಎಂಬ ಹೆಸರಿನ ಫೇಸ್ ಬುಕ್ ಪೇಜ್ ನಲ್ಲಿದ್ದ ಜಾಹಿರಾತನ್ನು ನೋಡಿ ಕೌಟುಂಬಿಕ ಸಮಸ್ಯೆ ಇದ್ದಂತಹ ಮಹಿಳೆ ಜಾಹಿರಾತಿನಲ್ಲಿದ್ದ ಫೋನ್ ನಂಬರ್ ಗಳಿಗೆ ಕರೆ ಮಾಡಿ ಸಮಸ್ಯೆ ಸರಿ ಮಾಡಿಕೊಡಿ ಎಂದು ಕೇಳಿಕೊಂಡಾಗ, ನಿಮ್ಮ ಹೆಸರಿನಲ್ಲಿ ಪೂಜೆ ಮಾಡುತ್ತೇನೆ ರೂ. 7,000.00 ಹಣ ಖರ್ಚಾಗುತ್ತೆ ಎಂದು ಹೇಳಿ ಗೂಗಲ್ ಪೇ ಮೂಲಕ ಹಣ ವರ್ಗಾವಣೆ ಮಾಡಿಸಿಕೊಂಡು, ಪುನಃ ಬೇರೆ ಬೇರೆ ಪೂಜೆ ಮಾಡಬೇಕು ಸಮಸ್ಯೆ ಸರಿ ಆಗುತ್ತೆ ಎಂದು ಹಂತ ಹಂತವಾಗಿ ಒಟ್ಟು ರೂ. 1,16,001.00 ಹಣ ವರ್ಗಾವಣೆ ಮಾಡಿಸಿಕೊಂಡು, ಇನ್ನು ಹಲವು ಸಮಸ್ಯೆ ಗಳಿವೆ ಎಂದು ಹೇಳಿ ಪೂಜೆ ಖರ್ಚಿಗೆ ಹಣ ಕಳುಹಿಸಿ ಎಂದು ಹೇಳಿದಾಗ ಮಹಿಳೆ ಅನುಮಾನಗೊಂಡು ಚಿಕ್ಕಮಗಳೂರು ಜಿಲ್ಲಾ ಸಿ.ಇ.ಎನ್. ಅಪರಾಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಮೇರೆಗೆ ಪ್ರಕರಣ ದಾಖಲಿಸಿದ್ದು.
ಮೇಲ್ಕಂಡಂತೆ ಎಲ್ಲಾ ರೀತಿಯ ಸಮಸ್ಯೆಗಳನ್ನು ಫೋನ್‌ನಲ್ಲಿ ಪರಿಹರಿಸಲಾಗುವುದೆಂದು ನಂಬಿಸಿ ಹಣ ವರ್ಗಾಯಿಸಿಕೊಂಡು ಮೋಸ ಮಾಡಿದ್ದ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು, ಆತನಿಂದ ರೂ. 87,500.00 ನಗದು, ಒಂದು ಮೊಬೈಲ್ ಫೋನ್ ಮತ್ತು ಎರಡು ಎಟಿಎಂ ಕಾರ್ಡ್‌ಗಳನ್ನು ವಶಪಡಿಸಿಕೊಂಡಿರುತ್ತಾರೆ.
ಸದರಿ ಪ್ರಕರಣದಲ್ಲಿ ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸ್ ತಂಡದಲ್ಲಿ ಪಿ.ಐ. ಶ್ರೀ. ಮುತ್ತರಾಜ್, ಪಿ.ಎಸ್.ಐ. ಶ್ರೀ. ನಾಸೀರ್ ಹುಸೇನ್ ಮತ್ತು ಶ್ರೀ. ರಘುನಾಥ್ ಎಸ್. ವಿ., ಎ.ಎಸ್.ಐ. ಶ್ರೀ. ಎಂ. ಸಿ. ಪ್ರಕಾಶ್ ಮತ್ತು ಸಿಬ್ಬಂದಿಗಳಾದ ಶ್ರೀ. ವಿನಾಯಕ ಮತ್ತು ಶ್ರೀ. ಅನ್ವರ್ ಪಾಷಾ ರವರು ಕಾರ್ಯನಿರ್ವಹಿಸಿರುತ್ತಾರೆ.
ಸಾರ್ವಜನಿಕರು ಇಂತಹ ವಂಚನೆಗಳ ಜಾಲಕ್ಕೆ ಬೀಳದೇ ಎಚ್ಚರ ವಹಿಸಲು ತಿಳಿಸಲಾಗಿದೆ.
ಕೊಟ್ಟೂರು:- ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಾಳು ಗ್ರಾಮದ ದುಮ್ಮಾಡಿ ಕೆಂಚಮ್ಮ ಎಂಬ ಮಹಿಳೆಯೋರ್ವರು ತಮ್ಮ…
ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…