Latest

ಹುಬ್ಬಳ್ಳಿ ಧಾರವಾಡ ಅವಳಿ ನಗರದ 45 ಜನರ ಗಡಿಪಾರು ಮಾಡಿದ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್.

ವಿವಿಧ ಪ್ರಕರಣಗಳಲ್ಲಿ ಪಾಲ್ಗೊಂಡ ಹುಬ್ಬಳ್ಳಿ ಧಾರವಾಡ ನಗರದ 45 ಜನರನ್ನು ಆರು ತಿಂಗಳವರೆಗೆ ಗಡಿಪಾರು ಮಾಡಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ ರವರು ಹೇಳಿದರು. 8 ಕೊಲೆ, 12 ಕೊಲೆಗೆ ಪ್ರಯತ್ನ, 3 ಸುಲಿಗೆ, 1 ಮನೆಗಳ್ಳತನ, 1 ಮಾನಭಂಗ, 1 ಅಪಹರಣ, 9 ಎನ್ ಡಿ ಪಿ ಎಸ್ ಕಾಯ್ದೆ, 1 ಅಬಕಾರಿ ಕಾಯ್ದೆ, 6 ಓಸಿ ಮಟ್ಕಾ/ಕ್ರಿಕೆಟ್ ಬೆಟ್ಟಿಂಗ್ ಜೂಜಾಟ, 1 ಹಲ್ಲೆ, 2 ದೊಂಬಿ ಪ್ರಕರಣಗಳಲ್ಲಿ ಪಾಲ್ಗೊಂಡ ಒಟ್ಟು 45 ಜನರನ್ನು 1996, 55 ಕಾಯ್ದೆಯ ಅಡಿ ಗಡಿಪಾರು ಮಾಡಲಾಗಿದೆ ಎಂದರು.
ಸಾಮಾನ್ಯವಾಗಿ ಚುನಾವಣಾ ಗಲಭೆಗಳಂತ ಪ್ರಕರಣ ನಡೆದಾಗ ಗಡಿಪಾರು ಮಾಡಲಾಗುತ್ತಿತ್ತು. ಈಗ ಅವಳ ನಗರದಲ್ಲಿ ಕಾನೂನು ವ್ಯವಸ್ಥೆ ಹಾಗೂ ಅಪರಾಧ ತಡೆಯುವ ಉದ್ದೇಶದಿಂದ ಮಾಡಲಾಗುತ್ತಿದೆ. ಆದ್ದರಿಂದ ಗಡಿಪಾರು ಮಾಡುವ ಮೂಲಕ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
45 ಅಪರಾಧಿಗಳನ್ನು ಬೀದರ್, ಯಾದಗಿರಿ, ಕಲಬುರಗಿ, ದಕ್ಷಿಣ ಕನ್ನಡ, ಹಾಗೂ ಚಾಮರಾಜನಗರ ಗಳಿಗೆ ಗಡಿಪಾರು ಮಾಡಲಾಗಿದೆ. ಗಡಿಪಾರು ಆದಂತಹ ಅಪರಾಧಿಗಳು ಜಿಲ್ಲೆ ನಿಗದಿಪಡಿಸಿದ್ದ ಠಾಣೆಯಲ್ಲಿ ವರದಿ ಮಾಡಿಕೊಳ್ಳಬೇಕು. ಆದೇಶ ಉಲ್ಲಂಘಿಸಿ ಮತ್ತೆ ನಗರಕ್ಕೆ ಬಂದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು. ಇನ್ನು ಹಲವು ಅಪರಾಧಿಗಳು ನಾಪತ್ತೆಯಾಗಿದ್ದು, ಅವರಿಗಾಗಿಯೂ ಶೋಧ ನಡೆಸಲಾಗುತ್ತಿದೆ.
ಅಷ್ಟೇ ಅಲ್ಲದೆ ಗೂಂಡಾ ಕಾಯ್ದೆ ಹಾಕಲು ಸಹ ಠಾಣಾ ವ್ಯಾಪ್ತಿಯಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳಲು ಠಾಣಾ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ ಸೇರಿದಂತೆ ಹೆಚ್ಚುವರಿ ಪೊಲೀಸ್ ಆಯುಕ್ತರಾದ, ಸಂಚಾರ ಮತ್ತು ಅಪರಾಧ ವಿಭಾಗದ ರವೀಶ್ ಸಿ. ಆರ್. ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಮಹಾನಿಂಗ ನಂದಗಾಂವಿ, ಸಹಾಯಕ ಪೊಲೀಸ್ ಆಯುಕ್ತರಾದ ಪ್ರಶಾಂತ್ ಸಿದ್ದನಗೌಡರ್, ವಿಜಯಕುಮಾರ್ ತಳವಾರ್, ಉಮೇಶ್ ಚಿಕ್ಕಮಠ, ಶಿವಪ್ರಕಾಶ್ ನಾಯಕ್ ಹಾಗೂ ಪೊಲೀಸ್ ಇನ್ಸಪೆಕ್ಟರ್ ಗಳು ಉಪಸ್ಥಿತರಿದ್ದರು.
ವರದಿ: ಶಿವರಾಜ್ ಪಿ.ಆರ್.

ಭ್ರಷ್ಟರ ಬೇಟೆ

Recent Posts

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

8 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

10 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

21 hours ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

21 hours ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

21 hours ago

ಕೊನೆಗೂ 21 ದಿನಗಳ ಬಳಿಕ ಅಣುಸ್ಥಾವರದ ಮೇಲೆ ಅಮೆರಿಕ ದಾಳಿ! ಇರಾನ್ ಅಣು ಕೇಂದ್ರ ವಿಕಿರಣ ಸೋರಿಕೆ ಭೀತಿ ಹೆಚ್ಚಳ?

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…

22 hours ago