ನಂಜನಗೂಡು (ಜು.28): ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಆಘಾತಕಾರಿ ಘಟನೆ ಒಂದರಲ್ಲಿ ಪೊಲೀಸ್ ಪೇದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರನ್ನು ಬೀರೇಶ್ (37) ಎಂದು ಗುರುತಿಸಲಾಗಿದ್ದು, ಅವರು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಚಿಕ್ಕಾಟಿ ಗ್ರಾಮದ ನಿವಾಸಿ. ಪ್ರಸ್ತುತ ಮೈಸೂರು ಜಿಲ್ಲೆ ಸಶಸ್ತ್ರ ಮೀಸಲು ಪೊಲೀಸ್ ಪಡೆಗೆ ಮುಖ್ಯಪೇದೆಯಾಗಿ ಸೇವೆ ಸಲ್ಲಿಸುತ್ತಿದ್ದರು.

ಬೀರೇಶ್ ಅವರು ಪತ್ನಿ ಮತ್ತು ಮಕ್ಕಳೊಂದಿಗೆ ನಂಜನಗೂಡು ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ವಾಸವಾಗಿದ್ದರು. ಇತ್ತೀಚೆಗೆ ಕುಟುಂಬದಲ್ಲಿ ನಿರಂತರ ಗಲಾಟೆ ನಡೆಯುತ್ತಿದ್ದು, ಇದರಿಂದ ಮನನೊಂದು ಅವರು ತಮ್ಮ ಮನೆಯ ಕೋಣೆಯ ಫ್ಯಾನಿಗೆ ನೇಣು ಹಾಕಿಕೊಂಡಿದ್ದಾರೆ ಎನ್ನಲಾಗಿದೆ.

ಘಟನೆಯ ಮಾಹಿತಿ ಲಭುತ್ತಿದ್ದಂತೆ ನಂಜನಗೂಡು ಪಟ್ಟಣ ಠಾಣೆಯ ಇನ್ಸ್ಪೆಕ್ಟರ್ ರವೀಂದ್ರ ಹಾಗೂ ಪಿಎಸ್‌ಐ ಕೃಷ್ಣಕಾಂತ ಕೋಳಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಶವವನ್ನು ಮರಣೋತ್ತರ ಪರೀಕ್ಷೆಗೆ ನಂಜನಗೂಡು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.

ಈ ಘಟನೆ ಪೊಲೀಸ್ ಇಲಾಖೆಯಲ್ಲಿಯೇ ಬೇಸರದ ಛಾಯೆ ಮೂಡಿಸಿದೆ.

Related News

error: Content is protected !!