ನಂಜನಗೂಡು (ಜು.28): ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಆಘಾತಕಾರಿ ಘಟನೆ ಒಂದರಲ್ಲಿ ಪೊಲೀಸ್ ಪೇದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರನ್ನು ಬೀರೇಶ್ (37) ಎಂದು ಗುರುತಿಸಲಾಗಿದ್ದು, ಅವರು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಚಿಕ್ಕಾಟಿ ಗ್ರಾಮದ ನಿವಾಸಿ. ಪ್ರಸ್ತುತ ಮೈಸೂರು ಜಿಲ್ಲೆ ಸಶಸ್ತ್ರ ಮೀಸಲು ಪೊಲೀಸ್ ಪಡೆಗೆ ಮುಖ್ಯಪೇದೆಯಾಗಿ ಸೇವೆ ಸಲ್ಲಿಸುತ್ತಿದ್ದರು.
ಬೀರೇಶ್ ಅವರು ಪತ್ನಿ ಮತ್ತು ಮಕ್ಕಳೊಂದಿಗೆ ನಂಜನಗೂಡು ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ವಾಸವಾಗಿದ್ದರು. ಇತ್ತೀಚೆಗೆ ಕುಟುಂಬದಲ್ಲಿ ನಿರಂತರ ಗಲಾಟೆ ನಡೆಯುತ್ತಿದ್ದು, ಇದರಿಂದ ಮನನೊಂದು ಅವರು ತಮ್ಮ ಮನೆಯ ಕೋಣೆಯ ಫ್ಯಾನಿಗೆ ನೇಣು ಹಾಕಿಕೊಂಡಿದ್ದಾರೆ ಎನ್ನಲಾಗಿದೆ.
ಘಟನೆಯ ಮಾಹಿತಿ ಲಭುತ್ತಿದ್ದಂತೆ ನಂಜನಗೂಡು ಪಟ್ಟಣ ಠಾಣೆಯ ಇನ್ಸ್ಪೆಕ್ಟರ್ ರವೀಂದ್ರ ಹಾಗೂ ಪಿಎಸ್‌ಐ ಕೃಷ್ಣಕಾಂತ ಕೋಳಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಶವವನ್ನು ಮರಣೋತ್ತರ ಪರೀಕ್ಷೆಗೆ ನಂಜನಗೂಡು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.
ಈ ಘಟನೆ ಪೊಲೀಸ್ ಇಲಾಖೆಯಲ್ಲಿಯೇ ಬೇಸರದ ಛಾಯೆ ಮೂಡಿಸಿದೆ.
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…