Latest

ಪೊಲೀಸ್ ಪೇದೆಯ ದುಃಖದ ಅಂತ್ಯ: ಕುಟುಂಬ ಕಲಹದ ಬೆನೆಯಲ್ಲಿ ಆತ್ಮಹತ್ಯೆ

ಗದಗ: ಕೌಟುಂಬಿಕ ಕಲಹದಿಂದ ಬೇಸತ್ತು ಪೊಲೀಸ್ ಪೇದೆಯೊಬ್ಬರು ನೇಣಿಗೆ ಶರಣಾಗಿರುವ ದಾರುಣ ಘಟನೆ ಗದಗದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರು ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಹನುಮನಾಳ ಗ್ರಾಮದ ಪ್ರಶಾಂತ ಕಂಚೇರಿ (33) ಎಂದು ಗುರುತಿಸಲಾಗಿದೆ. ಅವರು 2012ರ ಬ್ಯಾಚ್‌ನ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ (DSRP) ಪೊಲೀಸ್ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದು, ಇತ್ತೀಚೆಗೆ (ASC) ಬಾಂಬ್ ನಿಷ್ಕ್ರಿಯ ದಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಅನಿರೀಕ್ಷಿತ ನಿರ್ಧಾರ

ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ವಸತಿ ಗೃಹದಲ್ಲಿ ವಾಸಿಸುತ್ತಿದ್ದ ಪ್ರಶಾಂತ, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕ್ರಿಯಾಶೀಲ ಪೊಲೀಸ್ ಸಿಬ್ಬಂದಿಯಾಗಿದ್ದ ಅವರು ಈ ರೀತಿ ಸಾವಿಗೆ ಶರಣಾಗಿರುವುದು ಸಹೋದ್ಯೋಗಿಗಳು ಮತ್ತು ಸ್ನೇಹಿತರನ್ನು ಮರುಗುಗೊಳಿಸಿದೆ.

ಪೊಲೀಸ್ ಇಲಾಖೆಯಲ್ಲಿ ಶೋಕದ ಛಾಯೆ

ಈ ದುಃಖದ ಘಟನೆಗೆ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಸಶಸ್ತ್ರ ಮೀಸಲು ಪಡೆಯ ಹಿರಿಯ ಅಧಿಕಾರಿಗಳು ಹಾಗೂ ಸಹೋದ್ಯೋಗಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ. ತಮ್ಮ ಪತ್ನಿ ಹಾಗೂ ಮಗುವನ್ನು ಅಗಲಿರುವ ಪ್ರಶಾಂತ ಅವರ ನಿಧನದಿಂದ ಕುಟುಂಬದವರೂ ಆಘಾತಕ್ಕೊಳಗಾಗಿದ್ದಾರೆ.

ಈ ಕುರಿತು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago