ಮುಂಡಗೋಡ: ಪಟ್ಟಣದ ಬಸ್ ನಿಲ್ದಾಣದ ಎದುರಿನ ರಾಜಲಕ್ಷ್ಮಿ ಜ್ಯುವೆಲ್ಲರ್ಸ್ ಅಂಗಡಿಯಲ್ಲಿ ನಡೆದಿದ್ದ ಬೆಳ್ಳಿ ಆಭರಣ ಕಳವು ಪ್ರಕರಣವನ್ನು ಮುಂಡಗೋಡ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಇಬ್ಬರು ಅಂತರ್ ಜಿಲ್ಲಾ ಮಹಿಳಾ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು ₹1.30 ಲಕ್ಷ ಮೌಲ್ಯದ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅಕ್ಟೋಬರ್ 17ರಂದು ಮಧ್ಯಾಹ್ನ ಇಬ್ಬರು ಮಹಿಳೆಯರು ಗ್ರಾಹಕರ ಸೋಗಿನಲ್ಲಿ ರಾಜಲಕ್ಷ್ಮಿ ಜ್ಯುವೆಲ್ಲರ್ಸ್ ಅಂಗಡಿಗೆ ಬಂದಿದ್ದರು. ಈ ವೇಳೆ ಅಂಗಡಿಯಲ್ಲಿದ್ದ ವ್ಯಕ್ತಿಯ ಗಮನಕ್ಕೆ ಬಾರದಂತೆ ಸುಮಾರು 700 ಗ್ರಾಂ ತೂಕದ, ಅಂದಾಜು ₹1.30 ಲಕ್ಷ ಮೌಲ್ಯದ ನಾಲ್ಕು ಜೋಡಿ ಬೆಳ್ಳಿಯ ಕಾಲುಚೈನ್‌ಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು.
ಘಟನೆಗೆ ಸಂಬಂಧಿಸಿದಂತೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಗಂಭೀರತೆ ಅರಿತ ಪೊಲೀಸರು ತನಿಖೆ ಕೈಗೊಂಡು, ಖಚಿತ ಮಾಹಿತಿ ಹಾಗೂ ಲಭ್ಯವಿದ್ದ ಸುಳಿವುಗಳ ಆಧಾರದ ಮೇಲೆ ವಿಶೇಷ ತಂಡ ರಚಿಸಿ ಕಾರ್ಯಾಚರಣೆ ನಡೆಸಿದರು. ಈ ವೇಳೆ ಕೃತ್ಯದಲ್ಲಿ ಭಾಗಿಯಾಗಿದ್ದ ಬೆಳಗಾವಿ ಜಿಲ್ಲೆಯ ಬಾಳೇಕುಂದ್ರಿ ಮೂಲದ ಇಬ್ಬರು ಮಹಿಳೆಯರನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಶಾಂತಾ ಮದನ ಪೂಜಾರಿ (52) ಹಾಗೂ ಶಾಂತಾ ಮೂರ್ತಿ ಅಂಗಡಿ (46) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಕಳವು ಮಾಡಲಾಗಿದ್ದ ಬೆಳ್ಳಿ ಆಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಜಿ. ಹಾಗೂ ಶಿರಸಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕಿ ಗೀತಾ ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಮುಂಡಗೋಡ ಪೊಲೀಸ್ ನಿರೀಕ್ಷಕ ರಮೇಶ್ ಹಾನಾಪುರ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.
ಪಿಎಸ್‌ಐಗಳಾದ ಮಂಜುನಾಥ ಗೌಡರ, ನಿಂಗರಾಜು ಕರಡಿಗುಡ್ಡಿ, ಎಎಸ್‌ಐ ಸೋಮಶೇಖರ ಮೇತ್ರಿ ಹಾಗೂ ಅಪರಾಧ ಪತ್ತೆ ವಿಭಾಗದ ಸಿಬ್ಬಂದಿಗಳಾದ ಮಂಜಪ್ಪ ಚಂಚಲ, ತಿರುಪತಿ ಚೌಡಣ್ಣವರ, ಮಹೇಶ ಹತ್ತಳ್ಳಿ, ಶಿವಾನಂದ ದಾನಣ್ಣನವರ ಮತ್ತು ಮಹಿಳಾ ಪೊಲೀಸ್ ಸಿಬ್ಬಂದಿ ರೇಖಾ ಹುಳ್ಳಣ್ಣವರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಕಳವು ಪ್ರಕರಣವನ್ನು ತ್ವರಿತವಾಗಿ ಭೇದಿಸಿ ಆರೋಪಿಗಳನ್ನು ಬಂಧಿಸಿದ ಮುಂಡಗೋಡ ಪೊಲೀಸರ ಕಾರ್ಯಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಧಾರವಾಡ: ತಾಲೂಕಿನ ಮಾದನಬಾವಿ ಗ್ರಾಮದ ಗೋಶಾಲೆಯಲ್ಲಿ ಗೋವುಗಳ ನಿರ್ವಹಣೆ ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದ್ದು, ಗೋಶಾಲೆಯ ಅವ್ಯವಸ್ಥೆ ಸರಿಪಡಿಸಿ…
ಕುಮಟಾ: ಮೊಬೈಲ್ ಖರೀದಿಸಿ ಫೋನ್‌ಪೇ ಮೂಲಕ ಹಣ ಪಾವತಿಸಿರುವುದಾಗಿ ನಕಲಿ ಸಂದೇಶ ತೋರಿಸಿ ಅಂಗಡಿ ಮಾಲೀಕರಿಗೆ ವಂಚಿಸಿ ಪರಾರಿಯಾಗಿದ್ದ ಆರೋಪಿಯನ್ನು…
ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಬಹುಗ್ರಾಮ ಕುಡಿಯುವ ನೀರು ಸರಬರಾಜು (MVS) ಯೋಜನೆಯ ಕಾಮಗಾರಿಯನ್ನು ಉತ್ತರ…
ಕೌಟುಂಬಿಕ ಕಲಹಕ್ಕೆ ಏಳು ಜೀವಗಳ ಬಲಿ; ಕ್ಯಾಬ್ ಚಾಲಕ ಇಂದುಶೇಖರ್ ಬಂಧನ, ವಿಚಾರಣೆಯಲ್ಲಿ ಬಯಲಾಯ್ತು ನರಮೇಧದ ರಹಸ್ಯ ಬೆಂಗಳೂರು: ಸಿಲಿಕಾನ್…
ಪ್ರಕರಣದಲ್ಲಿ ಬಂಧಿತರ ಸಂಖ್ಯೆ 13ಕ್ಕೆ ಏರಿಕೆ; ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಕೈವಾಡದ ಶಂಕೆ ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್‌ಗೆ…
ಅಂಗಡಿಗಳು, ನಂದಿನಿ ಬೂತ್, ಪಾರ್ಲರ್‌ಗಳೇ ಕಳ್ಳರ ಟಾರ್ಗೆಟ್ – ರಾತ್ರಿ ಗಸ್ತು ಹೆಚ್ಚಿಸಲು ಸ್ಥಳೀಯರ ಆಗ್ರಹ ಗೌರಿಬಿದನೂರು: ನಗರದ ಪ್ರಶಾಂತ್…