Latest

ಕುಂದಾಪುರದಲ್ಲಿ ಅಂಗಡಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ನಾಲ್ವರು ಆರೋಪಿಗಳು ಬಂಧನ.

ಕುಂದಾಪುರ: ಇಲ್ಲಿನ ಸಂತೆ ಮಾರುಕಟ್ಟೆ ಬಳಿ ಜುಲೈ 14ರ ಮಧ್ಯರಾತ್ರಿ ನಡೆದ ಅಂಗಡಿ ಕಳ್ಳತನ ಪ್ರಕರಣವನ್ನು ಕುಂದಾಪುರ ಪೊಲೀಸರು ಯಶಸ್ವಿಯಾಗಿ ಭೇದಿಸಿ, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಲಕ್ಷಾಂತರ ಮೌಲ್ಯದ ವಸ್ತುಗಳು ಮತ್ತು ಕೃತ್ಯಕ್ಕೆ ಬಳಸಲಾಗಿದ್ದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

ಮಧ್ಯರಾತ್ರಿ 2.30ರ ಸುಮಾರಿಗೆ ಅಂಗಡಿಯ ಶಟರ್ ಬೀಗ ಒಡೆದು ಕಳ್ಳರು ದಾಳಿ ನಡೆಸಿದ್ದರು. ಅಂಗಡಿಯೊಳಗಿದ್ದ ಸುಮಾರು ₹95,000 ಮೌಲ್ಯದ ತಾಮ್ರ, ಹಿತ್ತಾಳೆ, ಅಲ್ಯೂಮಿನಿಯಂ ವಸ್ತುಗಳು ಹಾಗೂ ಇತರ ಸಾಮಗ್ರಿಗಳನ್ನು ಕಳ್ಳತನ ಮಾಡಲಾಗಿತ್ತು.

ಪೊಲೀಸರು ನಡೆಸಿದ ತನಿಖೆಯಲ್ಲಿ ಮಂಗಳೂರಿನ ಸರ್ಫರಾಜ್ (33), ಜಾಕೀರ್ (36), ಮೊಹಮ್ಮದ್ ಅಲ್ಫಾಜ್ (26) ಮತ್ತು ಮಂಜನಾಡಿಯ ಮೊಹಮ್ಮದ್ ರಿಯಾಜ್ (44) ಎಂಬವರನ್ನು ಉಡುಪಿಯ ಸಂತೆಕಟ್ಟೆ ಬಳಿ ಶುಕ್ರವಾರ ಬಂಧಿಸಲಾಗಿದೆ.

ಬಂಧಿತರಿಂದ 50 ಕೆಜಿ ತಾಮ್ರದ ಸರಿಗೆ, 34 ಕೆಜಿ ತಾಮ್ರದ ಮತ್ತೊಂದು ಸರಿಗೆ, 64 ಕೆಜಿ ಹಿತ್ತಾಳೆಯ ವಸ್ತು, 20 ಕೆಜಿ ಅಲ್ಯೂಮಿನಿಯಂ ವಸ್ತು, ಫ್ರಿಜ್ ಕಂಪ್ರೆಸರ್, 45 ಹಳೆಯ ಮೊಬೈಲ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ ಕಾರು ವಶಕ್ಕೆ ಪಡೆಯಲಾಗಿದೆ.

ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಕುಂದಾಪುರ ನಗರ ಪೊಲೀಸ್ ಉಪನಿರೀಕ್ಷಕರಾದ ನಂಜಾ ನಾಯ್ಕ್ ಮತ್ತು ಪುಷ್ಪಾ, ಸಂಚಾರ ಎಸ್‌ಐ ನೂತನ್ ಮತ್ತು ಸಿಬ್ಬಂದಿಗಳಾದ ಮೋಹನ್, ಸಂತೋಷ್, ಪ್ರೀನ್ಸ್, ನಾಗೇಶ್, ಮಹಾಬಲ, ರೇವತಿ, ಘನಶ್ಯಾಮ್ ಹಾಗೂ ಸತೀಶ್‌ ಸಕ್ರಿಯವಾಗಿ ಪಾಲ್ಗೊಂಡಿದ್ದರು.

ಇದೀಗ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಪ್ರಕರಣ ಕುರಿತು ತನಿಖೆ ಮುಂದುವರಿದಿದೆ.

nazeer ahamad

Recent Posts

ಮನೆ ಬಳಕೆಗೆ ಸಿಗದ ಗೃಹಬಳಕೆಯ ಸಿಲಿಂಡರ್‌ಗಳು ಹೋಟೆಲ್‌ಗಳಲ್ಲಿ , ಅಧಿಕಾರಿಗಳ ನಿರ್ಲಕ್ಷ್ಯ

ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ…

3 hours ago

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

8 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

8 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

8 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

8 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

9 hours ago