Latest

ಗಜೇಂದ್ರಗಡದಲ್ಲಿ ಅಕ್ರಮ ಪಡಿತರ ಅಕ್ಕಿ ದಂಧೆಗೆ ಪೊಲೀಸರು ಬ್ರೇಕ್

ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಣೆ ಮಾಡಲಾಗುತ್ತಿರುವ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಸುಮಾರು 75 ಪ್ಯಾಕೆಟ್‌ಗಳಷ್ಟು ಪಡಿತರ ಅಕ್ಕಿ ವಶಪಡಿಸಿಕೊಳ್ಳಲಾಗಿದೆ.

ಆಹಾರ ಇಲಾಖೆ ಮತ್ತು ಪೊಲೀಸರ ಸಂಯುಕ್ತ ದಾಳಿ

ಅಕ್ರಮ ಅಕ್ಕಿ ಸಾಗಾಟದ ಬಗ್ಗೆ ಖಚಿತ ಮಾಹಿತಿ ಪಡೆದ ರೋಣ ತಾಲೂಕಿನ ಆಹಾರ ಇಲಾಖೆ ಅಧಿಕಾರಿ ಶಾಂತಾ ಚವಡಿ, ಗಜೇಂದ್ರಗಡ ಠಾಣೆ ಪಿಎಸ್‌ಐ ಸೋಮನಗೌಡ ಮತ್ತು ಅವರ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ದಾಳಿಯಲ್ಲಿ ಬಾಲಪ್ಪ ಗೌಡ್ರ ಎಂಬುವವರು ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿ ಪತ್ತೆಯಾಗಿದೆ.

ಬಡಜನರ ಪಡಿತರ ಕಾಳ ಸಂತೆಯಲ್ಲಿ ಮಾರಾಟ

ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಬಡವರ ಹೊಟ್ಟೆ ತುಂಬಲು ಪಡಿತರ ಯೋಜನೆಗಳನ್ನು ರೂಪಿಸುತ್ತಿದೆ. ಆದರೆ ಗಜೇಂದ್ರಗಡ, ಕೊಪ್ಪಳ ಮತ್ತು ಸುತ್ತಮುತ್ತಲಿನ ಭಾಗಗಳಲ್ಲಿ ಈ ಪಡಿತರ ಧಾನ್ಯಗಳು ಕಾಳಬಜಾರಿನಲ್ಲಿ ಮಾರಾಟವಾಗುತ್ತಿರುವುದು ಗಂಭೀರ ಆತಂಕ ಹುಟ್ಟಿಸಿದೆ.

ಅಕ್ರಮ ಅಕ್ಕಿ ಸಾಗಾಟದ ಮಾಫಿಯಾಗೆ ಬಲೆ ಬೀಸಿದ ಪೊಲೀಸರು

ಈ ಪ್ರಕರಣದಲ್ಲಿ ಇನ್ನಷ್ಟು ಕಿಂಗ್‌ಪಿನ್‌ಗಳು ಇದ್ದ ಸಾಧ್ಯತೆ ಇದ್ದು, ಪೊಲೀಸರ ತಂಡ ಈಗ ಅಕ್ರಮ ಪಡಿತರ ಅಕ್ಕಿ ಸಾಗಾಟದ ಜಾಲವನ್ನು ಪತ್ತೆ ಹಚ್ಚಲು ಮುಂದಾಗಿದೆ. ಗಜೇಂದ್ರಗಡದಲ್ಲಿ ಈ ರೀತಿಯ ದಂಧೆ ತಡೆಯಲು ಕಾನೂನು ರಕ್ಷಣಾ ಸಂಸ್ಥೆಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿವೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

22 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

3 days ago