ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕ್ರೂರ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮಂಜುನಾಥ್ ಅಲಿಯಾಸ್ ಚಳಿ ಮಂಜ (41) ಎಂಬಾತನನ್ನು ಪೊಲೀಸರು ಫೈರಿಂಗ್ ಮೂಲಕ ವಶಕ್ಕೆ ಪಡೆದಿದ್ದಾರೆ.
ಇತ್ತೀಚೆಗೆ ಹೊಳೆಹೊನ್ನೂರು ಸಮೀಪದ ಹೊಸಕೊಪ್ಪ ರಸ್ತೆಯಲ್ಲಿ ಅಡಿಕೆ ವ್ಯಾಪಾರಿ ಹೇಮಣ್ಣ (68) ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ನಡೆದಿದೆ. ಈ ದಾಳಿಗೆ ಶಂಕಿತರಾಗಿ ಮಂಜುನಾಥ್ ಹಾಗೂ ಇನ್ನೊಬ್ಬ ಆರೋಪಿ ಚೆನ್ನಪ್ಪ ಎಂಬವರ ವಿರುದ್ಧ ಪ್ರಕರಣ ದಾಖಲಾಗಿತ್ತು.
ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯ ಮೇರೆಗೆ, ಮಂಜುನಾಥ್ ಶಿವಮೊಗ್ಗ ತಾಲೂಕಿನ ಹೊಳಲೂರು ಬಳಿ ಅಡಗಿಕೊಂಡಿರುವುದು ತಿಳಿದುಬಂದಿತು. ಇನ್ಸ್ಪೆಕ್ಟರ್ ಲಕ್ಷ್ಮಿಪತಿ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಲು ಸ್ಥಳಕ್ಕೆ ಧಾವಿಸಿತು.
ಬಂಧನೆಯ ಸಂದರ್ಭದಲ್ಲಿ ಮಂಜುನಾಥ್ ಪೊಲೀಸ್ ಸಿಬ್ಬಂದಿಗೆ ಪ್ರತಿರೋಧ ತೋರಿದನು ಮತ್ತು ಪರಾರಿಯಾಗಲು ಯತ್ನಿಸಿದ ಸಂದರ್ಭದಲ್ಲಿ ಇನ್ಸ್ಪೆಕ್ಟರ್ ಲಕ್ಷ್ಮಿಪತಿ ಆತ್ಮರಕ್ಷಣೆಗೆ ಕಾಲಿಗೆ ಗುಂಡು ಹಾರಿಸಿದರು. ಗಾಯಗೊಂಡ ಮಂಜುನಾಥ್‌ನ್ನು ಪೊಲೀಸರ ತಂಡ ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿತು.
ಇನ್ನೊಬ್ಬ ಆರೋಪಿ ಚೆನ್ನಪ್ಪನನ್ನೂ ಈ ವೇಳೆ ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್ ವಿರುದ್ಧ ವಿವಿಧ ಠಾಣೆಗಳಲ್ಲಿ ಒಟ್ಟು 9 ಪ್ರಕರಣಗಳು ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…