Categories: Latest

ಸಿವಿಲ್‌ ವ್ಯಾಜ್ಯದಲ್ಲಿ ಪೊಲೀಸ್‌ ಹಸ್ತಕ್ಷೇಪ: ಮಂಗಳೂರು ತನಿಖಾಧಿಕಾರಿಗೆ ಹೈಕೋರ್ಟ್‌ ತೀವ್ರ ಚಾಟಿ

ಮಂಗಳೂರು: ಸಿವಿಲ್‌ ವ್ಯಾಜ್ಯಗಳಲ್ಲಿ ಪೊಲೀಸರು ಹಸ್ತಕ್ಷೇಪ ಮಾಡಬಾರದು ಎಂದು ನ್ಯಾಯಾಲಯಗಳು ಹಲವು ಬಾರಿ ಸ್ಪಷ್ಟಪಡಿಸಿದ್ದರೂ, ಇಂತಹ ಪ್ರಕರಣಗಳು ಮುಂದುವರಿಯುತ್ತಿವೆ. ಇದೀಗ ₹60 ಲಕ್ಷ ಪಾವತಿ ವಿವಾದಕ್ಕೆ ಸಂಬಂಧಿಸಿದಂತೆ ಖಾಸಗಿ ಕಂಪನಿಯ ನಿರ್ದೇಶಕರು ಹಾಗೂ ಉದ್ಯೋಗಿಗಳ ಬ್ಯಾಂಕ್‌ ಖಾತೆಗಳನ್ನು ಸ್ಥಗಿತಗೊಳಿಸಿದ ಆರೋಪ ಎದುರಿಸುತ್ತಿರುವ ಮಂಗಳೂರಿನ ಉಲ್ಲಾಳ ಠಾಣೆಯ ತನಿಖಾಧಿಕಾರಿಗೆ ಹೈಕೋರ್ಟ್‌ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

ವಾಣಿಜ್ಯ ಕಟ್ಟಡವೊಂದರಲ್ಲಿ ವಿದ್ಯುತ್‌ ಕಾಮಗಾರಿ ಪೂರ್ಣಗೊಳಿಸಿದರೂ ಒಪ್ಪಂದದಂತೆ ₹60 ಲಕ್ಷ ಪಾವತಿಸಿಲ್ಲ ಎಂದು ಗುತ್ತಿಗೆದಾರ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಝೈಟ್‌ ಇಂಟೀರಿಯರ್ಸ್‌ ಪ್ರೈವೇಟ್‌ ಲಿಮಿಟೆಡ್‌ ಕಂಪನಿಯ ನಿರ್ದೇಶಕರು ಮತ್ತು ಉದ್ಯೋಗಿಗಳ ಬ್ಯಾಂಕ್‌ ಖಾತೆಗಳನ್ನು ಪೊಲೀಸರು ಫ್ರೀಜ್‌ ಮಾಡಿದ್ದರು. ಈ ಕ್ರಮ ಪ್ರಶ್ನಿಸಿ ಕಂಪನಿ ಹಾಗೂ ಅದರ ನಿರ್ದೇಶಕರು ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ. ಶ್ರೀಷಾನಂದ ಅವರ ಪೀಠ, ಪ್ರಕರಣದ ತನಿಖಾಧಿಕಾರಿ ವಿರೂಪಾಕ್ಷಯ್ಯ ಅವರ ವಿರುದ್ಧ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಮಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ಸೂಚಿಸಿದೆ. ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್‌ 14ಕ್ಕೆ ಮುಂದೂಡಲಾಗಿದೆ.

‘ಇದು ಸಿವಿಲ್‌ ವ್ಯಾಜ್ಯ, ಪೊಲೀಸರಿಗೆ ಹಸ್ತಕ್ಷೇಪದ ಅಧಿಕಾರ ಎಲ್ಲಿದೆ?’

ವಿಚಾರಣೆ ವೇಳೆ ಕಂಪನಿ ಪರ ಹಿರಿಯ ವಕೀಲ ಪಿ.ಪಿ. ಹೆಗ್ಡೆ ವಾದ ಮಂಡಿಸಿ, ಎಲೆಕ್ಟ್ರಿಕಲ್‌ ಗುತ್ತಿಗೆದಾರ ಸುನೀಲ್‌ ಕುಮಾರ್‌ ಪೈಸ್‌ ಕಂಪನಿಯಿಂದ ₹60,39,046 ಬಾಕಿ ಇದೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ಆದರೆ ಒಪ್ಪಂದದಂತೆ ಈಗಾಗಲೇ ₹50,11,983 ಪಾವತಿಸಲಾಗಿದೆ. ಈ ಅಂಶವನ್ನು ದೂರಿನಲ್ಲಿ ಮರೆಮಾಚಲಾಗಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ಒಪ್ಪಂದದಲ್ಲಿಯೇ ಯಾವುದೇ ವಿವಾದ ಉಂಟಾದರೆ ಸಿವಿಲ್‌ ನ್ಯಾಯಾಲಯ ಅಥವಾ ಮಧ್ಯಸ್ಥಿಕೆ ಮೂಲಕ ಪರಿಹರಿಸಿಕೊಳ್ಳುವ ಅವಕಾಶವಿದೆ. ಹೀಗಿದ್ದರೂ ಪೊಲೀಸರು ಕಂಪನಿಯ ನಿರ್ದೇಶಕರು ಮತ್ತು ಉದ್ಯೋಗಿಗಳ ಬ್ಯಾಂಕ್‌ ಖಾತೆಗಳನ್ನು ಸ್ಥಗಿತಗೊಳಿಸಿರುವುದರಿಂದ ಉದ್ಯೋಗಿಗಳಿಗೆ ವೇತನ ಪಾವತಿಸಲು ಸಾಧ್ಯವಾಗುತ್ತಿಲ್ಲ ಎಂದು ವಕೀಲರು ಆಕ್ಷೇಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, “ಇದು ಸಂಪೂರ್ಣವಾಗಿ ಸಿವಿಲ್‌ ವ್ಯಾಜ್ಯವಾಗಿದ್ದರೆ ಪೊಲೀಸರು ಮಧ್ಯಪ್ರವೇಶಿಸುವ ಅಧಿಕಾರ ಎಲ್ಲಿದೆ?” ಎಂದು ಪ್ರಶ್ನಿಸಿದರು. ಸಿವಿಲ್‌ ವಿವಾದದ ಕುರಿತು ದೂರು ಬಂದಾಗ ಸಂಬಂಧಪಟ್ಟವರನ್ನು ಸಿವಿಲ್‌ ನ್ಯಾಯಾಲಯದ ಮೊರೆ ಹೋಗುವಂತೆ ಸೂಚಿಸಬೇಕಿತ್ತು ಎಂದು ಅಭಿಪ್ರಾಯಪಟ್ಟರು.

ತನಿಖಾಧಿಕಾರಿಗೆ ಕೋರ್ಟ್‌ ತೀವ್ರ ತರಾಟೆ

ತನಿಖಾಧಿಕಾರಿ ವಿರೂಪಾಕ್ಷಯ್ಯ ಖುದ್ದಾಗಿ ಹಾಗೂ ಮಂಗಳೂರು ನಗರ ಪೊಲೀಸ್‌ ಆಯುಕ್ತರು ವಿಡಿಯೋ ಕಾನ್ಫರೆನ್ಸ್‌ ಮೂಲಕ ವಿಚಾರಣೆಗೆ ಹಾಜರಾಗಿದ್ದರು.

ಈ ವೇಳೆ ತನಿಖಾಧಿಕಾರಿಯ ಕ್ರಮದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯ, ಬ್ಯಾಂಕ್‌ ಖಾತೆಗಳನ್ನು ಫ್ರೀಜ್‌ ಮಾಡುವಂತಹ ಕಠಿಣ ಕ್ರಮವನ್ನು ಏಕೆ ಕೈಗೊಂಡಿದ್ದೀರಿ? ಎಂದು ಪ್ರಶ್ನಿಸಿತು. ಪೊಲೀಸರ ಅಧಿಕಾರದ ಬಳಕೆಯ ಬಗ್ಗೆಯೂ ನ್ಯಾಯಾಲಯ ತೀವ್ರ ಆಕ್ಷೇಪ ವ್ಯಕ್ತಪಡಿಸಿತು.

ತನಿಖಾಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸುವ ಆದೇಶ ಹೊರಡಿಸುವ ಹಂತಕ್ಕೂ ನ್ಯಾಯಾಲಯ ಮುಂದಾಗಿತ್ತು. ಆದರೆ ರಾಜ್ಯ ಸರ್ಕಾರಿ ಅಭಿಯೋಜಕರು ಹಾಗೂ ಮಂಗಳೂರು ನಗರ ಪೊಲೀಸ್‌ ಆಯುಕ್ತರು ನೀಡಿದ ಭರವಸೆಯ ಹಿನ್ನೆಲೆಯಲ್ಲಿ ತಕ್ಷಣ ಅಮಾನತು ಆದೇಶ ಹೊರಡಿಸುವ ನಿರ್ಧಾರದಿಂದ ನ್ಯಾಯಾಲಯ ಹಿಂದೆ ಸರಿಯಿತು.

“ಪೊಲೀಸರು ತಮ್ಮ ಅಧಿಕಾರವನ್ನು ತೋರಿಸಿದರೆ, ನ್ಯಾಯಾಲಯದ ಅಧಿಕಾರವನ್ನೂ ತೋರಿಸಬೇಕಾಗುತ್ತದೆ” ಎಂದು ನ್ಯಾಯಮೂರ್ತಿಗಳು ಕಠಿಣವಾಗಿ ಎಚ್ಚರಿಕೆ ನೀಡಿದರು.

ಪ್ರಕರಣದಲ್ಲಿ ಪೊಲೀಸರು ಕೈಗೊಂಡ ಕ್ರಮಗಳ ಕುರಿತು ಮಂಗಳೂರು ನಗರ ಪೊಲೀಸ್‌ ಆಯುಕ್ತರಿಂದ ವರದಿ ಪಡೆದು ಮುಂದಿನ ವಿಚಾರಣೆಯಲ್ಲಿ ಪರಿಶೀಲಿಸಲು ಹೈಕೋರ್ಟ್‌ ಸೂಚಿಸಿದೆ.

ಭ್ರಷ್ಟರ ಬೇಟೆ

Recent Posts

ರೈಲ್ವೇ ನಿಲ್ದಾಣದಲ್ಲಿ ಪತಿಯ ಕಣ್ಣೆದುರೇ ಪ್ರಿಯಕರನನ್ನು ತಬ್ಬಿದ ಇಬ್ಬರು ಮಕ್ಕಳ ತಾಯಿ! 20 ವರ್ಷದ ಯುವಕನ ಜೊತೆ ಹೋಗುತ್ತೇನೆಂದು ಹಠ.

ವಾರಣಾಸಿ (ಉತ್ತರ ಪ್ರದೇಶ): ಇಬ್ಬರು ಮಕ್ಕಳ ತಾಯಿಯೊಬ್ಬಳು ತನ್ನ 20 ವರ್ಷದ ಪ್ರಿಯಕರನೊಂದಿಗೆ ಹೋಗುವುದಾಗಿ ಪತಿಯ ಎದುರೇ ಹಠ ಹಿಡಿದು,…

19 minutes ago

ಲೈಂಗಿಕ ಕಿರುಕುಳಕ್ಕೆ ಬೇಸತ್ತು ಸ್ನೇಹಿತನ ಜೊತೆ ಸೇರಿ ವ್ಯಕ್ತಿಯ ಕೊಲೆ: ಮಹಿಳೆ ಸೇರಿ ಇಬ್ಬರು ಅರೆಸ್ಟ್

ಅಥಣಿ: ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊಬ್ಬನನ್ನು ಮಹಿಳೆಯೊಬ್ಬಳು ತನ್ನ ಶಾಲಾ ದಿನಗಳ ಸ್ನೇಹಿತನ ನೆರವಿನಿಂದ ಹತ್ಯೆ ಮಾಡಿರುವ ಘಟನೆ…

9 hours ago

ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ತೊಂದರೆ ಆಗಿದೆ: ಅರ್ಹರಿಗೆ ಮಾತ್ರ ಸೌಲಭ್ಯ ನೀಡಲು ಪರಿಷ್ಕರಣೆ – ಡಿಕೆಶಿ

ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಮೇಲೆ ಆರ್ಥಿಕ ಒತ್ತಡ ಉಂಟಾಗಿರುವುದು ನಿಜ ಎಂದು ಉಪಮುಖ್ಯಮಂತ್ರಿ ಡಿ.ಕೆ.…

9 hours ago

ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ; ಬೇಸತ್ತು ಚರಂಡಿ ಸ್ವಚ್ಛಗೊಳಿಸಿದ ಮಹಿಳೆ.

ಕೊಟ್ಟೂರು:- ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಾಳು ಗ್ರಾಮದ ದುಮ್ಮಾಡಿ ಕೆಂಚಮ್ಮ ಎಂಬ ಮಹಿಳೆಯೋರ್ವರು ತಮ್ಮ…

23 hours ago

ಬಸವನ ಬಾಗೇವಾಡಿಯಲ್ಲಿ ಅಕ್ರಮ LPG ರೀಫಿಲ್ಲಿಂಗ್ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…

1 day ago

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

2 days ago