ಬೆಳಗಾವಿ: ನಗರದ ಕೃಷ್ಣದೇವರಾಯ ವೃತ್ತದಲ್ಲಿ ಸ್ಥಳಿಯ ಯೂನಿಕ್ ಶಾಪ್‌ನಲ್ಲಿ ಶನಿವಾರ ತಡರಾತ್ರಿ ಅಹಿತಕರ ಘಟನೆ ನಡೆದಿದೆ. ರಾತ್ರಿ 12 ಗಂಟೆ ನಂತರವೂ ಶಾಪ್ ಓಪನ್ ಇಟ್ಟಿದ್ದ ಮಾಲೀಕನ ವಿರುದ್ಧ ಪೊಲೀಸರಿಂದ ಕಠಿಣ ಕ್ರಮ ಕೈಗೊಳ್ಳಲಾಗಿದೆ.
ಮಾಹಿತಿಯ ಪ್ರಕಾರ, ನಿಗದಿತ ಸಮಯ ಮೀರಿದರೂ ಅಂಗಡಿ ತೆರೆದಿದ್ದ ಕಾರಣ ಮಾರ್ಕೆಟ್ ಪೊಲೀಸ್ ಠಾಣೆಯ ಸಿಬ್ಬಂದಿ ದಿಢೀರ್ ದಾಳಿ ನಡೆಸಿದರು. ಈ ವೇಳೆ ಅಂಗಡಿಗೆ ಸೇರಿದ ಕೆಲ ಗ್ರಾಹಕರು ಅಚಾನಕ್ ಪೊಲೀಸರ ಆಗಮನದಿಂದ ಗಾಬರಿಗೊಂಡು ಓಡಿ ಹೋಗಿದ್ದಾರೆ. ಸ್ಥಳದಲ್ಲಿದ್ದ ಶಾಪ್ ಮಾಲೀಕನಿಗೆ ಲಾಠಿಯಿಂದ ಬಿಸಿ ಮುಟ್ಟಿಸಿದ ಘಟನೆ ನಡೆದಿದೆ.
ಪೋಲೀಸರ ತೀವ್ರ ಕ್ರಮಕ್ಕೆ ಗುರಿಯಾದ ಮಾಲೀಕನ ವಿರುದ್ಧ ಈಗಾಗಲೇ ಕಾನೂನು ಕ್ರಮ ಆರಂಭವಾಗಿದ್ದು, ಸಂಬಂಧಿಸಿದ ಶಾಖೆಯಲ್ಲಿ ಪ್ರಕರಣ ದಾಖಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕಾನೂನು ಮೀರಿ ವ್ಯಾಪಾರ ಮಾಡುತ್ತಿರುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜಾರಿಯಲ್ಲಿದೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…