ಹುಬ್ಬಳ್ಳಿ ನಗರದ ಘಂಟಿಕೇರಿ ಪೊಲೀಸ್ ಠಾಣೆಯಲ್ಲಿ ರಕ್ಷಕರಾಗಿರಬೇಕಾದ ಪೊಲೀಸ್ ಸಿಬ್ಬಂದಿಯೊಬ್ಬನ ವಿರುದ್ಧ ಅಸಹ್ಯ ಮತ್ತು ಆತಂಕಕಾರಿ ಆರೋಪ ಕೇಳಿಬಂದಿದೆ. ಕಾನ್‌ಸ್ಟೇಬಲ್ ಹಜರತ್ ಮಿಟ್ಟೇಖಾನ್ ಎಂಬಾತನು 6 ವರ್ಷದ ಪುಟ್ಟ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಹಿನ್ನೆಲೆಯಲ್ಲಿ ಇದೀಗ ಆತ ಕಾನೂನು ಉಲ್ಲಂಘನೆಯ ಗಂಭೀರ ಆರೋಪ ಎದುರಿಸುತ್ತಿದ್ದಾನೆ.
ಬಾಲಕಿಯ ತಂದೆಯ ದೂರಿನ ಪ್ರಕಾರ, ಅವರು ಕೆಲ ದಿನಗಳ ಹಿಂದೆ ಅವರ ಪತ್ನಿಯನ್ನು ಪರಿಚಯಿಸುವ ಸಂದರ್ಭದಲ್ಲಿಯೇ ಹಜರತ್ ಅವರನ್ನು ಭೇಟಿಯಾಗಿದ್ದರು. ಬಳಿಕ ಹಜರತ್ ಮಿಟ್ಟೇಖಾನ್ ಅವರ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಲ್ಲದೆ, ತಮ್ಮ 6 ವರ್ಷದ ಮಗಳ ಜೊತೆ ಅಶ್ಲೀಲವಾಗಿ ವರ್ತಿಸಿದ್ದಾನೆ ಎಂದು ಅವರು ಆರೋಪಿಸಿದ್ದಾರೆ.
ಈ ವಿಷಯ ತಿಳಿದ ತಕ್ಷಣವೇ ಬಾಲಕಿಯ ತಂದೆ ಘಂಟಿಕೇರಿ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ತನಿಖೆ ಆರಂಭಿಸಿದ್ದಾರೆ.
ಈ ಪ್ರಕರಣವು ನಗರದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಸಾರ್ವಜನಿಕರು ಮತ್ತು ಮಕ್ಕಳ ಹಕ್ಕು ರಕ್ಷಣಾ ಸಂಘಟನೆಗಳು ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ. ರಕ್ಷಕರ ಹತ್ತಿರವೂ ಮಕ್ಕಳಿಗೆ ಸುರಕ್ಷತೆ ಇಲ್ಲದಂತಾಗುತ್ತಿರುವ ಈ ಘಟನೆ, ಪೊಲೀಸ್ ಇಲಾಖೆ ಸಹಿತ ಸಮಾಜವನ್ನು ಆತ್ಮಪರಿಶೀಲನೆಗೆ ಮಾಡಿದೆ.
ಸದ್ಯ ಪ್ರಕರಣದ ಮುಂದಿನ ತನಿಖೆ ನಡೆಯುತ್ತಿದ್ದು, ಹೆಚ್ಚಿನ ವಿವರಗಳು ಹೊರ ಬರುವ ನಿರೀಕ್ಷೆಯಿದೆ.
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…