Latest

ಹನಿಟ್ರ್ಯಾಪ್‌ ಕೃತ್ಯದಲ್ಲಿ ಪೊಲೀಸ್ ಸಿಬ್ಬಂದಿಯು ಕೈಜೋಡು.! ಪಿರಿಯಾಪಟ್ಟಣದಲ್ಲಿ ಖಾಕಿ‌ಗೆ ಕಳಂಕ.

ಮೈಸೂರು ಜಿಲ್ಲೆ, ಪಿರಿಯಾಪಟ್ಟಣ: ಜನರ ರಕ್ಷಣೆಗಾಗಿ ನಿಯೋಜಿತ ಪೊಲೀಸ್ ಸಿಬ್ಬಂದಿಯೊಬ್ಬನೇ ಹನಿಟ್ರ್ಯಾಪ್ ಪ್ರಕರಣದಲ್ಲಿ ಭಾಗಿಯಾಗಿರುವ ಶೋಕಾಂತಿಕ ಘಟನೆ ಪಿರಿಯಾಪಟ್ಟಣದಲ್ಲಿ ನಡೆದಿದೆ. ಈ ಸಂಗತಿಗೆ ಸ್ಥಳೀಯರು ಮಾತ್ರವಲ್ಲದೆ ಪೊಲೀಸ್ ಇಲಾಖೆಯನ್ನೂ ನಡುಗಿಸಿಕೊಂಡಿದೆ.

ಕಂಪಲಾಪುರದ ನಿವಾಸಿ ದಿನೇಶ್ ಕುಮಾರ್ ಎಂಬುವವರನ್ನು ಟಾರ್ಗೆಟ್ ಮಾಡಿಕೊಂಡು, ಹನಿಟ್ರ್ಯಾಪ್ ಮೂಲಕ ಹಣ ಸುಲಿಗೆ ಮಾಡಲು ಆರೋಪಿಗಳು ಸಂಘಟಿತ ರೂಪದಲ್ಲಿ ಕಾರ್ಯಾಚರಣೆ ನಡೆಸಿದ್ದರು. ಯುವತಿಯ ಸಹಾಯದಿಂದ ಸ್ನೇಹ ಸ್ಥಾಪಿಸಿ, ಬಳಿಕ ಆತನ ಗೌಪ್ಯತೆ ದುರ್ಬಳಕೆ ಮಾಡಿ ಹಣ ಬೇಡಿಕೆ ಇಟ್ಟಿದ್ದಾರೆ.

ಆಘಾತಕಾರಿ ಸಂಗತಿಯೆಂದರೆ, ಈ ಕೃತ್ಯದಲ್ಲಿ ಪಿರಿಯಾಪಟ್ಟಣ ಠಾಣೆಯ ಶಿವಣ್ಣ ಎಂಬ ಪೊಲೀಸ್ ಸಿಬ್ಬಂದಿಯೂ ಭಾಗಿಯಾಗಿರುವುದು. ಈತನೊಂದಿಗೆ ಎ1 ಮೂರ್ತಿ ಮತ್ತು ಇನ್ನೂ ಮೂವರು ಆರೋಪಿಗಳಿವೆ ಎಂದು ಪೊಲೀಸರು ದೃಢಪಡಿಸಿದ್ದಾರೆ.

ಪಿರಿಯಾಪಟ್ಟಣ ಠಾಣೆಯ ಇನ್ಸ್‌ಪೆಕ್ಟರ್ ದೀಪಕ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು, ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಬಳಿಕ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಪ್ರಕರಣವು ಪೊಲೀಸ್ ಇಲಾಖೆಯ ನೈತಿಕತೆ ಹಾಗೂ ಶಿಸ್ತುಬದ್ಧತೆಯ ಮೇಲೆ ಗಂಭೀರ ಪ್ರಶ್ನೆ ಎಬ್ಬಿಸಿದ್ದು, ಸಾರ್ವಜನಿಕರ ನಂಬಿಕೆ ಮೇಲೆ ಬಿರುಕು ಬಿಟ್ಟಿದೆ. “ಪೊಲೀಸರೇ ತಪ್ಪುಮಾರ್ಗ ಹಿಡಿದರೆ, ಕಾನೂನು ವ್ಯವಸ್ಥೆ ಎಲ್ಲಿ ನಿಲ್ಲುತ್ತದೆ?” ಎಂಬ ಆತಂಕ ಜನರಲ್ಲಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದ್ದು, ಘಟನೆಯ ಹಿಂದಿನ ನಿಜವಾದ ಹಿನ್ನೆಲೆ ಬಹುಷಃ ತನಿಖೆಯಲ್ಲಿ ಬೆಳಕಿಗೆ ಬರಲಿದೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

1 day ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

2 days ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

3 days ago