Latest

ಚಾಮರಾಜನಗರದಲ್ಲಿ ಪೊಲೀಸರ ದಂಧೆ ಬಯಲು: ಉದ್ಯಮಿಯಿಂದ 3.7 ಲಕ್ಷ ವಸೂಲಿ ಮಾಡಿದ ಪಿಎಸ್‌ಐ ತಂಡ

ಚಾಮರಾಜನಗರ, ಜುಲೈ 28: ಅಧಿಕಾರದ ಸ್ಥಾನವನ್ನು ದುರುಪಯೋಗಪಡಿಸಿಕೊಂಡು ಉದ್ಯಮಿಯೊಬ್ಬರ ಬಳಿ ಹಣೆ ಹಾಕಿ ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡಿದ ಘಟನೆ ಚಾಮರಾಜನಗರದಲ್ಲಿ ಬೆಳಕಿಗೆ ಬಂದಿದೆ. ಸೈಬರ್ ಕ್ರೈಂ ಠಾಣೆಯ ಪಿಎಸ್‌ಐ ಅಯ್ಯನಗೌಡ ಸೇರಿದಂತೆ ಆರು ಮಂದಿ ಪೊಲೀಸರ ವಿರುದ್ಧ ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ತಮಿಳುನಾಡು ಮೂಲದ ಉದ್ಯಮಿ ಸಚ್ಚಿದಾನಂದ ಮೂರ್ತಿ ಎಂಬುವವರು ಈ ಪ್ರಕರಣದ ಹಿನ್ನೋಟದಲ್ಲಿ ಕಾಣಿಸಿಕೊಂಡಿದ್ದಾರೆ. ಆರೋಪಿಗಳಾದ ಸೈಯದ್ ಅನ್ಸಾರಿ ಮತ್ತು ಇಮ್ರಾನ್ ಅವರು ಈ ಉದ್ಯಮಿಗೆ ಕರೆಮಾಡಿ, “3 ಲಕ್ಷ ರೂಪಾಯಿ ಹೂಡಿಕೆಯಿಂದ ಒಂದು ತಿಂಗಳಲ್ಲಿ ಡಬ್ಬಲ್ ಮಾಡಿಸಬಹುದು” ಎಂದು ನಂಬಿಸಿ, ಜುಲೈ 26ರಂದು ಚಾಮರಾಜನಗರದ ಡೆಲ್ಲಿ ದರ್ಬಾರ್ ಹೋಟೆಲಿಗೆ ಕರೆಸಿದ್ದಾರೆ.

ಅನ್ಸಾರಿ ಹಾಗೂ ಇಮ್ರಾನ್ ಈ ಮಾಹಿತಿ ಸೈಬರ್ ಕ್ರೈಂ ಠಾಣೆಯ ಪಿಎಸ್‌ಐ ಅಯ್ಯನಗೌಡಗೆ ನೀಡಿದ್ದು, ತಕ್ಷಣವೇ ಅಯ್ಯನಗೌಡ ಅವರು ತಮಗೆ ಸಾಥ್ ನೀಡಿದ ಪೇದೆಗಳು – ಮೋಹನ್, ಮಹೇಶ್, ಬಸವಣ್ಣ, ರಮೇಶ್ ಅವರನ್ನು ಕರೆದುಕೊಂಡು ಡೆಲ್ಲಿ ದರ್ಬಾರ್ ಹೋಟೆಲ್‌ಗೆ ದಾಳಿ ಮಾಡಿದ್ದಾರೆ.

ಉದ್ಯಮಿಗೆ “ಇದು ಫ್ರಾಡ್ ಹೂಡಿಕೆ” ಎಂದು ಆರೋಪಿಸಿ, “ಮೇಲೆ ಕೇಸ್ ಹೋಯಿತಂದ್ರೆ ತಪ್ಪಿಸಲು ನಾಲ್ಕು ಲಕ್ಷ ಕೊಡು” ಎಂದು ಬೆದರಿಕೆ ಹಾಕಿದ್ದಾರೆ. ಹಣ ನೀಡಲು ಒಪ್ಪಿಕೊಳ್ಳದ ಸಚ್ಚಿದಾನಂದ ಅವರ ಬಳಿ ಇದ್ದ 3 ಲಕ್ಷ ರೂಪಾಯಿಗಳನ್ನು ಪಡೆದುಕೊಂಡು, ಜೊತೆಗೆ ಫೋನ್ ಪೇ ಮೂಲಕ 70 ಸಾವಿರ ರೂಪಾಯಿಗಳನ್ನು ಅನ್ಸಾರಿ ಖಾತೆಗೆ ಹಾಕಿಸಿಕೊಂಡಿದ್ದಾರೆ.

ಈ ಹಿನ್ನಲೆಯಲ್ಲಿ ಸಚ್ಚಿದಾನಂದ ಮೂರ್ತಿ ಅವರು ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದು, ತನಿಖೆ ಆರಂಭಿಸಿದ ಪೊಲೀಸರು ಅನ್ಸಾರಿ ಮತ್ತು ಇಮ್ರಾನ್ ಅವರನ್ನು ಬಂಧಿಸಿದ್ದಾರೆ. ಆದರೆ ಪ್ರಕರಣದ ಪ್ರಮುಖ ಆರೋಪಿಗಳಾದ ಪಿಎಸ್‌ಐ ಅಯ್ಯನಗೌಡ ಹಾಗೂ ಪೇದೆಗಳು – ಮೋಹನ್, ಬಸವಣ್ಣ, ರಮೇಶ್ ಪರಾರಿಯಾಗಿದ್ದಾರೆ.

ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ ಅವರು ಆರೋಪಿ ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡುವ ಆದೇಶ ಹೊರಡಿಸಿದ್ದಾರೆ. ಇದೀಗ ಪರಾರಿಯಾಗಿರುವ ಪೊಲೀಸ್ ಅಧಿಕಾರಿಗಳಿಗಾಗಿ ವಿಶೇಷ ತಂಡ ರಚಿಸಲಾಗಿದ್ದು, ಶೀಘ್ರದಲ್ಲೇ ಬಂಧಿಸಲು ಹುಡುಕಾಟ ಮುಂದುವರಿಸಲಾಗಿದೆ.

 

nazeer ahamad

Recent Posts

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

3 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

18 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

23 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago