Categories: Latest

ದಾವಣಗೆರೆ ಜಿಲ್ಲೆಯ ಜಿಮ್‌ಗಳ ಮೇಲೆ ಪೊಲೀಸರ ದಿಢೀರ್ ಪರಿಶೀಲನೆ: ಮಹಿಳಾ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ

ದಾವಣಗೆರೆ ನಗರದಲ್ಲಿ ಇತ್ತೀಚೆಗೆ ನಡೆದ ಜಿಮ್‌ಗೆ ಸಂಬಂಧಿಸಿದ ಘಟನೆಯ ಹಿನ್ನೆಲೆಯಲ್ಲಿ ಎಚ್ಚೆತ್ತಿರುವ ಜಿಲ್ಲಾ ಪೊಲೀಸ್ ಇಲಾಖೆ, ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿ ಜಿಲ್ಲೆಯಾದ್ಯಂತ ಜಿಮ್‌ಗಳಲ್ಲಿ ದಿಢೀರ್ ಪರಿಶೀಲನಾ ಕಾರ್ಯಾಚರಣೆ ಆರಂಭಿಸಿದೆ.

ಜಿಲ್ಲಾ ಪೊಲೀಸ್ ಅಧೀಕ್ಷಕ ಶೇಖರ್ ಹೆಚ್.ಟಿ., ಐಪಿಎಸ್ ಅವರ ಮಾರ್ಗದರ್ಶನ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪರಮೇಶ್ವರ ಹೆಗಡೆ ಅವರ ಉಸ್ತುವಾರಿಯಲ್ಲಿ ಈ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದೆ. ಡಿವೈಎಸ್ಪಿಗಳು ಮತ್ತು ಪೊಲೀಸ್ ನಿರೀಕ್ಷಕರ ನೇತೃತ್ವದಲ್ಲಿ ಮಹಿಳಾ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಒಳಗೊಂಡ ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ.

ಕಾರ್ಯಾಚರಣೆಯ ಮೊದಲ ಹಂತವಾಗಿ ಮಂಗಳವಾರ ಬೆಳಿಗ್ಗೆ ದಾವಣಗೆರೆ ನಗರದ ವಿವಿಧ ಜಿಮ್‌ಗಳಿಗೆ ಪೊಲೀಸ್ ತಂಡಗಳು ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದವು. ಈ ವೇಳೆ ಮಹಿಳಾ ಸದಸ್ಯರ ಸುರಕ್ಷತೆಗೆ ಕೈಗೊಂಡಿರುವ ಕ್ರಮಗಳು, ಸಿಸಿಟಿವಿ ಕ್ಯಾಮೆರಾಗಳ ಕಾರ್ಯನಿರ್ವಹಣೆ, ಸಿಬ್ಬಂದಿಯ ವರ್ತನೆ ಹಾಗೂ ಅಗತ್ಯ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಲಾಯಿತು.

ಜಿಮ್‌ಗೆ ಬರುವ ಮಹಿಳೆಯರೊಂದಿಗೆ ಗೌರವಯುತವಾಗಿ ವರ್ತಿಸಬೇಕು. ಯಾವುದೇ ರೀತಿಯ ಕಿರುಕುಳ, ಅನುಚಿತ ವರ್ತನೆ ಅಥವಾ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು ಎಂದು ಜಿಮ್ ಮಾಲೀಕರು ಮತ್ತು ಸಿಬ್ಬಂದಿಗೆ ಪೊಲೀಸರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮಹಿಳೆಯರ ಸುರಕ್ಷತೆಗೆ ಧಕ್ಕೆ ಉಂಟುಮಾಡುವ ಯಾವುದೇ ಘಟನೆ ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಸಿದೆ.

ಜಿಲ್ಲೆಯಾದ್ಯಂತ ಈ ವಿಶೇಷ ಪರಿಶೀಲನಾ ಕಾರ್ಯಾಚರಣೆ ಮುಂದುವರಿಯಲಿದ್ದು, ಮಹಿಳೆಯರಿಗೆ ಸುರಕ್ಷಿತ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್‌ಗಳ ಸಂಚಾರ, ಅಧಿಕಾರಿಗಳು ಮೌನ!?

ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…

1 day ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ

ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…

1 day ago

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

5 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

5 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

5 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

5 days ago