ಧಾರವಾಡ: ಜಿಲ್ಲೆಯ ಕುಂದಗೋಳ ತಾಲೂಕಿನ ಗುಡಿಗೇರಿ ಗ್ರಾಮದ ಕೆಳಗಿನ ಬಸ್ ನಿಲ್ದಾಣದ ಸಮೀಪ ಅಕ್ರಮವಾಗಿ ಮಟ್ಕಾ (ಓಸಿ) ಸಂಖ್ಯೆಗಳನ್ನು ಬರೆಯುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ, ನಗದು ಹಣ ಸೇರಿದಂತೆ ದಂಧೆಗೆ ಬಳಸುತ್ತಿದ್ದ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಯನ್ನು ನಿಂಗಪ್ಪ ರಾಮಪ್ಪ ಭದ್ರಾಪೂರ್ ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿಯ ಆಧಾರದ ಮೇಲೆ ಜುಲೈ 24ರಂದು ದಾಳಿ ನಡೆಸಿದ ಗುಡಿಗೇರಿ ಠಾಣೆ ಪೊಲೀಸರು, ಆರೋಪಿಯನ್ನು ಸ್ಥಳದಲ್ಲೇ ವಶಕ್ಕೆ ಪಡೆದರು.
ಆರೋಪಿಯಿಂದ ₹1,500 ನಗದು ಹಾಗೂ ಓಸಿ ಬರೆಯಲು ಬಳಸುತ್ತಿದ್ದ ವಿವಿಧ ಸಾಮಗ್ರಿಗಳನ್ನು ಜಪ್ತಿ ಮಾಡಲಾಗಿದೆ. ಈ ಸಂಬಂಧ ಗುಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ.
ವರದಿ: ಶಿವರಾಜ್ ಪಿ.ಆರ್.
ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…
ಸೋನ್‌ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…
ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…
ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು…
ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ…
ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು…