ಬೆಳಗಾವಿ: ಅಥಣಿ ತಾಲೂಕಿನ ಗಾಂಧಿ ಮಾರ್ಕೆಟ್ ಪ್ರದೇಶದಲ್ಲಿರುವ ವೆಂಕಟೇಶ್ವರ ಲಾಡ್ಜ್‌ನಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಅಥಣಿ ಪೊಲೀಸರು ದಿಢೀರ್ ದಾಳಿ ನಡೆಸಿ, ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.

ಬಂಧಿತರನ್ನು ಲಾಡ್ಜ್ ಮ್ಯಾನೇಜರ್ ರುದ್ರಪ್ಪ ನಾವಲಗಿ ಹಾಗೂ ಶ್ರೀನಾಥ ವಾಘಮೋರೆ ಎಂದು ಗುರುತಿಸಲಾಗಿದೆ. ಆರೋಪಿಗಳು ಲಾಡ್ಜ್‌ಗೆ ಮಹಿಳೆಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸಲು ಅವಕಾಶ ಮಾಡಿಕೊಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

ದಾಳಿಯ ವೇಳೆ ಸ್ಥಳದಲ್ಲಿದ್ದ ಮಹಿಳೆಯರನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿರುವ ಪೊಲೀಸರು, ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಕ್ರಮ ಚಟುವಟಿಕೆಯ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Related News

error: Content is protected !!