ಬೆಳಗಾವಿ: ಅಥಣಿ ತಾಲೂಕಿನ ಗಾಂಧಿ ಮಾರ್ಕೆಟ್ ಪ್ರದೇಶದಲ್ಲಿರುವ ವೆಂಕಟೇಶ್ವರ ಲಾಡ್ಜ್‌ನಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಅಥಣಿ ಪೊಲೀಸರು ದಿಢೀರ್ ದಾಳಿ ನಡೆಸಿ, ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.
ಬಂಧಿತರನ್ನು ಲಾಡ್ಜ್ ಮ್ಯಾನೇಜರ್ ರುದ್ರಪ್ಪ ನಾವಲಗಿ ಹಾಗೂ ಶ್ರೀನಾಥ ವಾಘಮೋರೆ ಎಂದು ಗುರುತಿಸಲಾಗಿದೆ. ಆರೋಪಿಗಳು ಲಾಡ್ಜ್‌ಗೆ ಮಹಿಳೆಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸಲು ಅವಕಾಶ ಮಾಡಿಕೊಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.
ದಾಳಿಯ ವೇಳೆ ಸ್ಥಳದಲ್ಲಿದ್ದ ಮಹಿಳೆಯರನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿರುವ ಪೊಲೀಸರು, ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಕ್ರಮ ಚಟುವಟಿಕೆಯ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…
ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…
ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…
ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…
ಪಾವಗಡ: ಕರ್ನಾಟಕ ಮತ್ತು ಆಂಧ್ರಪ್ರದೇಶದ ವಿವಿಧ ದೇವಸ್ಥಾನಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದು, ಅವರಿಂದ 21…
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ 2026–27ನೇ ಸಾಲಿನಲ್ಲಿ ಸರ್ಕಾರದಿಂದ ವಿತರಿಸಲಾಗಿರುವ ಶೂ ಮತ್ತು ಸ್ಯಾಂಡಲ್‌ಗಳ…