Latest

ಲಂಚದ ಆಸೆಗೆ ಬಿದ್ದ ಪೊಲೀಸರು ಠಾಣೆ ಬಿಟ್ಟು ದೌಡು.

ಗುತ್ತಿಗೆದಾರ ಪ್ರಕಾಶ್ ಎಂಬುವರ ಮೇಲೆ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಈ ಪ್ರಕರಣದಲ್ಲಿ ತ್ವರಿತವಾಗಿ ದೋಷಾರೋಪ ಪಟ್ಟಿ ಸಲ್ಲಿಸಲು ಹಾಗೂ ಪ್ರಕಾಶ್ ಅವರ ತಂದೆ ತಾಯಿ ಹಾಗೂ ಸಂಬಂಧಿಕರ ಹೆಸರು ಸೇರಿಸದೇ ಇರಲು ಐದು ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮೂರು ಲಕ್ಷ ರೂ. 65 ಸಾವಿರ ರೂ.ಗಳನ್ನು ಹೆಡ್ ಕಾನ್‌ಸ್ಟೇಬಲ್ ರವಿ ಮೂಲಕ ಸ್ವೀಕರಿಸಿದ್ದರು.
ಆ ಬಳಿಕ ಮತ್ತೆ ಐದು ಲಕ್ಷ ರೂ. ಲಂಚ ನಿಡುವಂತೆ ಇನ್‌ಸ್ಪೆಕ್ಟರ್ ಪ್ರವೀಣ್ ಪರಮೇಶ್ವರಪ್ಪ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಈ ಹಣವನ್ನು ನೀಡದಿದ್ದಕ್ಕೆ ಗುತ್ತಿಗೆದಾರ ಪ್ರಕಾಶ್ ಅವರ ಪೋಷಕರಿಗೆ ಹಾಗೂ ಬಾಮೈದನಿಗೆ ನೋಟಿಸ್ ನೀಡಿ ವಿಚಾರಣೆಗೆ ಬರುವಂತೆ ಸೂಚಿಸಿದ್ದಾರೆ. ಲಂಚಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ದಾಖಲೆಗಳನ್ನು ಸಂಗ್ರಹಿಸಿದ್ದಾರೆ. ಲಂಚ ನೀಡಲು ಇಷ್ಟವಿಲ್ಲದ ಕಾರಣ ಗುತ್ತಿಗೆದಾರನ ಸಂಬಂಧಿಯೊಬ್ಬರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ.
ಲಂಚ ತರುವಂತೆ ಕರೆ ಮಾಡಿ ಹೇಳಿದ್ದ ಪೇದೆ ರವಿ ಕುಮಾರ್, ಇನ್‌ಸ್ಪೆಕ್ಟರ್ ಪ್ರವೀಣ್ ಪರಮೇಶ್ವರಪ್ಪ ಇದ್ದಾರೆ ಎಂದು ಚಿಕ್ಕಜಾಲ ಪೊಲೀಸ್ ಠಾಣೆ ಬಳಿ ಕರೆಸಿಕೊಂಡಿದ್ದಾನೆ. ಲಂಚದ ಹಣ ಸ್ವೀಕರಿಸಿ ಇನ್ನೇನು ಲೋಕಾ ಬಲೆಗೆ ಬೀಳುವ ಮುನ್ನ ಕಾನ್‌ಸ್ಟೇಬಲ್ ರವಿ ಎಚ್ಚೆತ್ತುಕೊಂಡಿದ್ದಾನೆ. ಲಂಚ ಕೊಡಲು ಹೋಗಿದ್ದ ವ್ಯಕ್ತಿಗೆ ಬಂದ ಕರೆಯ ನಂಬರ್ ನ್ನು ಟ್ರೂ ಕಾಲರ್ ಆಪ್ ನಲ್ಲಿ ನೋಡಿ ಎಸಿಬಿ ಪೊಲೀಸ್ ಎಂದು ಹೆದರಿ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಅಚ್ಚರಿ ಏನೆಂದರೆ ಈ ಲಂಚ ಸ್ವೀಕರಿಸುವ ಮುನ್ನವೇ ಪೋನ್ ಪೇ ಮೂಲಕ ಹತ್ತು ಸಾವಿರ ಲಂಚದ ಹಣವನ್ನು ಮೂರನೇ ವ್ಯಕ್ತಿಯ ಮೊಬೈಲ್ ಗೆ ಹಾಕಿಸಿಕೊಂಡು ಲಂಚ ಪಡೆದುಕೊಂಡಿದ್ದ. ಸಾಕ್ಷಾಧಾರಗಳನ್ನು ಪರಿಶೀಲಿಸಿದ ಲೋಕಾಯುಕ್ತ ಪೊಲೀಸರು ಕಾನ್‌ಸ್ಟೇಬಲ್ ರವಿಯನ್ನು ಬಂಧಿಸಿದ್ದಾರೆ. ಕಾನ್‌ಸ್ಟೇಬಲ್ ಬಂಧನ ಆಗುತ್ತಿದ್ದಂತೆ ಪೊಲೀಸ್ ಇನ್‌ಸ್ಪೆಕ್ಟರ್ ಪ್ರವೀಣ್ ಪರಮೇಶ್ವರಪ್ಪ ಅವರ ಎರಡು ಮೊಬೈಲ್ ನಂಬರ್ ಸ್ವಿಚ್ ಆಫ್ ಆಗಿದ್ದು ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಪ್ರವೀಣ್ ಅವರು ನಿರೀಕ್ಷಣಾ ಜಾಮೀನು ಪಡೆಯುವ ಸಲುವಾಗಿ ಠಾಣೆಗೆ ಹಾಜರಾಗದೇ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ; ಬೇಸತ್ತು ಚರಂಡಿ ಸ್ವಚ್ಛಗೊಳಿಸಿದ ಮಹಿಳೆ.

ಕೊಟ್ಟೂರು:- ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಾಳು ಗ್ರಾಮದ ದುಮ್ಮಾಡಿ ಕೆಂಚಮ್ಮ ಎಂಬ ಮಹಿಳೆಯೋರ್ವರು ತಮ್ಮ…

7 hours ago

ಬಸವನ ಬಾಗೇವಾಡಿಯಲ್ಲಿ ಅಕ್ರಮ LPG ರೀಫಿಲ್ಲಿಂಗ್ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…

14 hours ago

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

2 days ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

2 days ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

3 days ago