ಗೌರಿಬಿದನೂರು: ತಾಲೂಕಿನ ಅಲ್ಲೀಪುರದಿಂದ ಅಕ್ರಮವಾಗಿ ಗೋಮಾಂಸವನ್ನು ಸಾಗಿಸುತ್ತಿದ್ದ ಕ್ವಾಲೀಸ್ ವಾಹನವನ್ನು ಮತ್ತು ಗೋಮಾಂಸವನ್ನು ಮಂಚೇನಹಳ್ಳಿ ಪೊಲೀಸರು ವಶಪಡಿಸಿಕೊಂಡು ಮುಂದಿನ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.
ತಮಗೆ ದೊರೆದ ಖಚಿತ ಮಾಹಿತಿಯನ್ನು ಆಧರಿಸಿ ಮಂಚೇನಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಪಿ. ಮೂರ್ತಿ ತಮ್ಮ ಸಿಬ್ಬಂದಿಯೊಂದಿಗೆ ಅಲ್ಲೀಪುರ ಪುಲಗಾನಹಳ್ಳಿ ರಸ್ತೆಯಲ್ಲಿ ವಾಹನಗಳನ್ನು ತಪಾಸಣೆ ಮಾಡುತ್ತಿದ್ದ ಸಂಧರ್ಭದಲ್ಲಿ, ಪೊಲೀಸರನ್ನು ಕಂಡ ಅಕ್ರಮ ಗೋಮಾಂಸ ಸಾಗಾಣಿಕೆದಾರರು ವಾಹನವನ್ನು ಬಿಟ್ಟು ಪರಾರಿಯಾಗಿದ್ದಾರೆ. ಪೊಲೀಸರು ವಾಹನವನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಿದಾಗ ವಾಹನದಲ್ಲಿ ಸುಮಾರು ಸಾವಿರದ ಇನ್ನೂರು ಕೇಜಿ ಗೋಮಾಂಸ ಪತ್ತೆಯಾಗಿದ್ದು, ಪೊಲೀಸರು ಕೇಸ್ ದಾಖಲಿಸಿಕೊಂಡು ಮುಂದಿನ ಕ್ರಮಕ್ಕೆ ಮುಂದಾಗಿದ್ದಾರೆ.
ಕಾರ್ಯಾಚರಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಗೋಪಾಲ್, ಶಿವಶಂಕರ್ ಹಾಗೂ ಸಿಬ್ಬಂದಿಗಳಾದ ಸಂತೋಷ್ ರಮೇಶ್ ಪಾಲ್ಗೊಂಡಿದ್ದರು. ವರದಿ :ಅವಿನಾಶ್
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…
ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…