Categories: CrimeLatest

ರೌಡಿಶೀಟರ್‌ಗಳು ಮತ್ತು ಮೀಟರ್ ಬಡ್ಡಿ ದಂಧೆಕೋರರಿಗೆ ಪೊಲೀಸರ ಶಾಕ್; ಮನೆಗಳ ಮೇಲೆ ದಿಢೀರ್ ದಾಳಿ!

ಮುಂಡಗೋಡ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮೀಟರ್ ಬಡ್ಡಿ ದಂಧೆ ಹಾಗೂ ಸಮಾಜಘಾತಕ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಬುಧವಾರ ಮುಂಜಾನೆ ಮುಂಡಗೋಡದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಅವರ ನಿರ್ದೇಶನದಂತೆ ಹಾಗೂ ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ್ ಅವರ ನೇತೃತ್ವದಲ್ಲಿ ಮುಂಡಗೋಡ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಶೀಟರ್‌ಗಳು ಮತ್ತು ಅಕ್ರಮ ಬಡ್ಡಿ ವ್ಯವಹಾರ ನಡೆಸುತ್ತಿರುವವರ ಮನೆಗಳ ಮೇಲೆ ದಿಢೀರ್ ದಾಳಿ ನಡೆಸಿ ಶೋಧನೆ ಮಾಡಲಾಯಿತು.

ಮಾನ್ಯ ನ್ಯಾಯಾಲಯದ ಆದೇಶ ಪಡೆದು ಬೆಳಿಗ್ಗೆ 7 ಗಂಟೆಯಿಂದ ಆರಂಭವಾದ ಕಾರ್ಯಾಚರಣೆಯಲ್ಲಿ ಮುಂಡಗೋಡ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಮೇಶ ಹಾನಾಪುರ, ಪೊಲೀಸ್ ಉಪನಿರೀಕ್ಷಕ ಮಂಜುನಾಥ ಗೌಡ ಹಾಗೂ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು. ಒಟ್ಟು 14 ಮಂದಿಯ ಮನೆಗಳನ್ನು ಶೋಧನೆಗೆ ಒಳಪಡಿಸಿ ಪರಿಶೀಲನೆ ನಡೆಸಲಾಯಿತು.

ಕಿರಣ ಸೋಳಂಕಿ, ಮಂಜು ನವಲೆ, ಮಲ್ಲಿಕಜಾನ್ ಅಲಿಯಾಸ್ ಜಹೀರ್ ಶೇಖ್, ಮಹಮ್ಮದ್ ಸಾದೀಕ್ ಗಾಜೀಪೂರ, ವಾಸಿಂಖಾನ್ ಬೆಂಡಿಗೇರಿ, ಮಕ್ಖುಲ್ ಅಹಮದ್ ಯಳ್ಳೂರು, ಮದುಸಿಂಗ್ ರಜಪೂತ್, ಮಂಜುನಾಥ ಹೋಟಕರ್ ಅಲಿಯಾಸ್ ಶೇರಖಾನೆ, ಮಹಮ್ಮದ್ ಇಬ್ರಾಹಿಂ ಅಲಿಯಾಸ್ ರಫಿಕ್ ಜಮಖಂಡಿ, ಹರುಣ ಶೇಖ್, ಮಹಮ್ಮದ್ ಯೂಸುಫ್ ಗಡವಾಲೆ, ಮಹಮ್ಮದ್ ಇಸ್ಮಾಯಿಲ್ ಪಾನಾವಾಲೆ, ಸಂಜು ನವಲೆ ಹಾಗೂ ತೌಸಿಫ್ ಅಹಮದ್ ಪಣಿಬಂದ ಅವರ ಮನೆಗಳನ್ನು ಪರಿಶೀಲಿಸಲಾಯಿತು.

ಮೀಟರ್ ಬಡ್ಡಿ ದಂಧೆಯ ಪ್ರಮುಖ ಆರೋಪಿ ಜಮೀರ್ ಅಹ್ಮದ್ ಹ ತ್ಯೆ ಪ್ರಕರಣದ ಬಳಿಕ ಮುಂಡಗೋಡದಲ್ಲಿ ಅಕ್ರಮ ಬಡ್ಡಿ ವ್ಯವಹಾರಗಳ ವಿರುದ್ಧ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ನಿಲುವು ತಾಳಿದ್ದು, ಇತ್ತೀಚೆಗೆ ಕೆಲ ರೌಡಿಶೀಟರ್‌ಗಳನ್ನು ಗಡಿಪಾರು ಮಾಡಲಾಗಿದ್ದು, ಇಂದು ಮನೆ ಶೋಧನೆ ನಡೆಸುವ ಮೂಲಕ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವವರಿಗೆ ಪೊಲೀಸ್ ಇಲಾಖೆ ಎಚ್ಚರಿಕೆಯ ಸಂದೇಶ ರವಾನಿಸಿದೆ.

ಮುಂದಿನ ದಿನಗಳಲ್ಲಿಯೂ ರೌಡಿಶೀಟರ್‌ಗಳು, ಅಕ್ರಮ ಬಡ್ಡಿ ವ್ಯವಹಾರ ನಡೆಸುವವರು ಹಾಗೂ ಸಮಾಜಘಾತಕ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಭ್ರಷ್ಟರ ಬೇಟೆ

Recent Posts

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

14 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

19 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

2 days ago