ಬಂಗಾರಪೇಟೆ: ಕರ್ನಾಟಕ ಸರ್ಕಾರ ಪ್ರಾಯೋಗಿಕವಾಗಿ ಜಾರಿಗೆ ತಂದಿರುವ ಗೃಹ ಆರೋಗ್ಯ ಯೋಜನೆ ಅನುಷ್ಠಾನ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ಬಂಗಾರಪೇಟೆಯ ಮಾಗೊಂದಿ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ
ಬಂಗಾರಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಬೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ರಾಜ್ಯವ್ಯಪ್ತಿ ಆರೋಗ್ಯ ಇಲಾಖೆ ನಿರಂತರ ತಪಾಸಣೆ ನಡೆಸುತ್ತಿದ್ದಾರೆ, ಹಲವು ಕಡೆ ಕಳಪೆ ನಕಲಿ ಗುಣಮಟ್ಟದ ಆನೇಕ ಬಗೆಯ ಕಳಪೆ ಔಷಧಿಗಳು ಸಿಕ್ಕಿರುವ ಮಾಹಿತಿ ಗಮನಕ್ಕ್ ಬಂದಿದೆ ಔಷಧಿ ಪರಿವೀಕ್ಷಕ ಅಧಿಕಾರಿಗಳ ತೀವ್ರ ಕೊರತೆ ಕರ್ನಾಟಕ ಎದುರಿಸುತ್ತಿದೆ. ಇದರ ಪರಿಣಾಮ, ಕಳಪೆ ಗುಣಮಟ್ಟದ ಔಷಧಿ ಪೂರೈಕೆ ಜಾಲವನ್ನು ನಿರ್ಮೂಲನೆ ಗೊಳಿಸುವ ಯತ್ನಕ್ಕೆ ತೊಂದರೆ ಉಂಟಾಗಿದ್ದು, ಇಲಾಖೆ ಈಗಾಗಲೇ ಇದರ ಬಗ್ಗೆ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಖಾಲಿ ಇರುವ ಔಷಧಿ ಪರಿವೀಕ್ಷಕ ಅಧಿಕಾರಿ ಗಳನ್ನು ನೇಮಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ, ಎಂದು ತಿಳಿಸಿದರು.
ಆರೋಗ್ಯ ಇಲಾಖೆಯಲ್ಲಿ ಸಿಬ್ಬಂದಿ ಮತ್ತು ಡಿ-ಗ್ರೂಪ್ ನೌಕರರ ಕೊರತೆ ಇದ್ದು ಹಾಗು ಸ್ಕ್ಯಾನಿಂಗ್ ಟೆಕ್ನಿಷಿಯನ್ ಗಳ ಕೊರತೆ ಸಹಾ ಇದ್ದು ಖಾಸಗಿ ಆಸ್ಪತ್ರೆ ಟಿಕ್ನಿಷಿಯನ್ ವಾರಕ್ಕೊಮ್ಮೆ ಸರ್ಕಾರಿ ಆಸ್ಪತ್ರೆಗೆ ಬೇಟಿ ನೀಡಿ ಕೆಲಸ ಮಾಡಲು ಇಚ್ಚಿಸಿದವರಿಗೆ ಒಳ್ಳೆಯ ಸಂಬಳ ನೀಡಲಾಗುವುದು ಇದರ ಬಗ್ಗೆ ಮುಖ್ಯಮಂತ್ರಿಗಳ ಬಳಿ ಚರ್ಚಿಸಿದ್ದೇನೆ, ಮುಖ್ಯಮಂತ್ರಿಗಳ ಅನುಮೋದನೆ ಸಿಕ್ಕ ಕೂಡಲೇ ಅಗತ್ಯವಿರುವ ಕಡೆಗಳಲ್ಲಿ ಕೂಡಲೇ ಸಿಬ್ಬಂದಿಗಳನ್ನು ನೇಮಕ ಮಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಂಗಾರಪೇಟೆ ಶಾಸಕರಾದ ಶ್ರೀ. ಎಸ್.ಎನ್.ನಾರಾಯಣಸ್ವಾಮಿ ಕೆ.ಎಂ , ಆಸ್ಪತ್ರೆಯ ಆಡಳಿತಾಧಿಕಾರಿ ಡಾಕ್ಟರ್ ಭಾರತಿ, ಡಾಕ್ಟರ ಸುಧಾಕರ್, ಮತ್ತು ಸಾರ್ವಜನಿಕರು ಹಾಜರಿದ್ದರು. ವರದಿ: ರೋಶನ್ ಜಮೀರ್
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…
ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…
ಜಮುಯಿ: ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ 10ನೇ ತರಗತಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯನ್ನು ರಸ್ತೆಯಲ್ಲಿ ಅಡ್ಡಗಟ್ಟಿ, ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ…
ಹೈದರಾಬಾದ್: ನಗರದ ಪ್ರಮುಖ ಐಟಿ ಹಬ್ ಮಾದಾಪುರದಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಪ್ರಿಯಕರನೊಂದಿಗೆ OYO…