ಮುಂಡಗೋಡ: ತಾಲೂಕಿನಲ್ಲಿ ಜುಲೈ ತಿಂಗಳಿನಲ್ಲಿ ಅಧಿಕ ಮಳೆಯಾಗಿದ್ದು, ತಾಲೂಕಿನ ಪ್ರಮುಖ ಬೆಳೆಯಾದ ಅಡಿಕೆ ಬೆಳೆಗೆ ಕೊಳೆ ರೋಗ ಕಾಣಿಸಿಕೊಳ್ಳುವ ಸಾಧ್ಯತೆಯಿದ್ದು ಕೊಳೆರೋಗವು ಪೈಟೋಪತೆರಾ ಎಂಬ ಶಿಲೀಂದ್ರದಿಂದ ಬರುವುದಾಗಿದ್ದು. ಗೊಂಚಲುಗಳ ಕಾಯಿಗಳ ಮೇಲೆ ಕಂದು ಬಣ್ಣದ ನೀರಿನಿಂದ ತೊಯ್ದಂತ ಚುಕ್ಕಿಗಳು ಕಂಡುಬಂದು ನಂತರ ಬಿಳಿ ಶಿಲೀಂದ್ರದ ಬೆಳವಣಿಗೆ ಕಾಣಿಸಿಕೊಂಡು ಕಾಯಿಗಳು ಕೊಳೆಯಲು ಪ್ರಾರಂಭಿಸಿ ಉದುರುತ್ತವೆ. ಗೊಂಚಲು ಬೋಳು ಬೋಳಾಗಿ ಕಪ್ಪಾಗಿ ಕಾಣುತ್ತದೆ. ಜೂನ್ ದಿಂದ ಸಪ್ಟಂಬರ್ ವರೆಗೆ ರೋಗ ಬಾಧೆ ತೀವ್ರವಾಗಿರುತ್ತದೆ. ರೋಗ ಹೆಚ್ಚಿನ ಪ್ರಮಾಣದಲ್ಲಿ ಕಂಡುಬಂದಲ್ಲಿ ಸುಳಿ ಕೂಡ ಕೊಳೆಯುವುದು ಕಂಡು ಬರುತ್ತದೆ.
ಅಡಿಕೆ ಕಾಯಿ ಕೊಳೆ ರೋಗ ನಿಯಂತ್ರಣಕ್ಕೆ ಈಗಾಗಲೇ ಶೇಕಡಾ 1 ರ ಬೋರ್ಡೋ ದ್ರಾವಣ ಸಿಂಪಡಣೆ ಮಾಡಿ 25 – 30 ದಿನಗಳಾಗಿದ್ದಲ್ಲಿ, ಮಳೆ ಕಡಿಮೆಯಾದಾಗ ಮುಂಜಾಗ್ರತೆಯ ದೃಷ್ಟಿಯಿಂದ ಮತ್ತೊಮ್ಮೆ ಬೋರ್ಡೋ ದ್ರಾವಣ ಸಿಂಪಡಿಸಬೇಕು. ಕೊಳೆ ರೋಗ ಕಾಣಿಸಿಕೊಂಡಲ್ಲಿ ತಕ್ಷಣದಲ್ಲಿ ಕೊಳೆ ರೋಗ ಪೀಡಿತ ಅಡಿಕೆ ಕಾಯಿಯನ್ನು ಆರಿಸಿ ತೋಟದಿಂದ ಹೊರ ಹಾಕಬೇಕು. ಕಾಯಿ ಕೊಳೆ ರೋಗ ಪೀಡಿತ ಅಡಿಕೆ ಗೊನೆಗಳಿಗೆ ಮತ್ತು ಕೆಳಭಾಗದ ಮೂರ್ನಾಲ್ಕು ಹೆಡೆಗಳಿಗೆ ಹಾಗೂ ಸುತ್ತಲಿನ 3-4 ಮರಗಳಿಗೆ ಮಾತ್ರ ಮೆಟಲಾಕ್ಸಿಲ್ + ಮ್ಯಾಂಕೊಜೆಬ್ (72 WP) ಇರುವ ಶಿಲೀಂದ್ರನಾಶಕವನ್ನು 2 ಗ್ರಾಂ ಅಥವಾ ಮೆಟಾಲಾಕ್ಸಿಲ್ 35 WS 1 ಗ್ರಾಂ ಪ್ರತಿ ಲೀಟರ್ ನೀರಿನ ಜೊತೆಗೆ ಅಂಟು ದ್ರಾವಣ 1 ಮಿ. ಲೀ. ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು ಮತ್ತು ಒಂದು ವಾರದೊಳಗೆ ಸದರಿ ತೋಟಕ್ಕೆ ಶೇಕಡ 1 ರ ಬೋರ್ಡೋ ದ್ರಾವಣ ಸಿಂಪಡಿಸುವುದರಿಂದ ಕೊಳೆ ರೋಗವನ್ನು ನಿಯಂತ್ರಿಸಬಹುದು ಎಂದು ತೋಟಗಾರಿಕೆ ಮಹಾವಿದ್ಯಾಲಯದ ರೋಗಶಾಸ್ತ್ರದ ವಿಜ್ಞಾನಿಗಳಾದ ಡಾ. ಪ್ರಸಾದ್ ಪಿ.ಎಸ್. ರವರು ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗೆ ಪಾಳಾ ಹೋಬಳಿ ಸಹಾಯಕ ತೋಟಗಾರಿಕೆ ಅಧಿಕಾರಿ ಶ್ರೀ ಕೆ.ಬಿ. ಪಠಾಣ (9740405821), ಮುಂಡಗೋಡ ಹೋಬಳಿ ಸಹಾಯಕ ತೋಟಗಾರಿಕೆ ಅಧಿಕಾರಿ ಶ್ರೀ ರಮೇಶ ಜಮಖಂಡಿ (9632841838) ಹಾಗೂ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಶ್ರೀ ಕೃಷ್ಣ ಕುಳ್ಳೂರ ರವರನ್ನು ಸಂಪರ್ಕಿಸಲು ಕೋರಲಾಗಿದೆ.
ವರದಿ: ಮಂಜುನಾಥ್ ಎಫ್.ಎಚ್ ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…