Latest

ಅಡಿಕೆ ಬೆಳೆಗೆ ಅಂಟಿದ ಕೊಳೆ ರೋಗ; ಮುನ್ನೆಚ್ಚರಿಕೆ ವಹಿಸಲು ಸೂಚನೆ.

ಮುಂಡಗೋಡ: ತಾಲೂಕಿನಲ್ಲಿ ಜುಲೈ ತಿಂಗಳಿನಲ್ಲಿ ಅಧಿಕ ಮಳೆಯಾಗಿದ್ದು, ತಾಲೂಕಿನ ಪ್ರಮುಖ ಬೆಳೆಯಾದ ಅಡಿಕೆ ಬೆಳೆಗೆ ಕೊಳೆ ರೋಗ ಕಾಣಿಸಿಕೊಳ್ಳುವ ಸಾಧ್ಯತೆಯಿದ್ದು ಕೊಳೆರೋಗವು ಪೈಟೋಪತೆರಾ ಎಂಬ ಶಿಲೀಂದ್ರದಿಂದ ಬರುವುದಾಗಿದ್ದು. ಗೊಂಚಲುಗಳ ಕಾಯಿಗಳ ಮೇಲೆ ಕಂದು ಬಣ್ಣದ ನೀರಿನಿಂದ ತೊಯ್ದಂತ ಚುಕ್ಕಿಗಳು ಕಂಡುಬಂದು ನಂತರ ಬಿಳಿ ಶಿಲೀಂದ್ರದ ಬೆಳವಣಿಗೆ ಕಾಣಿಸಿಕೊಂಡು ಕಾಯಿಗಳು ಕೊಳೆಯಲು ಪ್ರಾರಂಭಿಸಿ ಉದುರುತ್ತವೆ. ಗೊಂಚಲು ಬೋಳು ಬೋಳಾಗಿ ಕಪ್ಪಾಗಿ ಕಾಣುತ್ತದೆ. ಜೂನ್ ದಿಂದ ಸಪ್ಟಂಬರ್ ವರೆಗೆ ರೋಗ ಬಾಧೆ ತೀವ್ರವಾಗಿರುತ್ತದೆ. ರೋಗ ಹೆಚ್ಚಿನ ಪ್ರಮಾಣದಲ್ಲಿ ಕಂಡುಬಂದಲ್ಲಿ ಸುಳಿ ಕೂಡ ಕೊಳೆಯುವುದು ಕಂಡು ಬರುತ್ತದೆ.
ಅಡಿಕೆ ಕಾಯಿ ಕೊಳೆ ರೋಗ ನಿಯಂತ್ರಣಕ್ಕೆ ಈಗಾಗಲೇ ಶೇಕಡಾ 1 ರ ಬೋರ್ಡೋ ದ್ರಾವಣ ಸಿಂಪಡಣೆ ಮಾಡಿ 25 – 30 ದಿನಗಳಾಗಿದ್ದಲ್ಲಿ, ಮಳೆ ಕಡಿಮೆಯಾದಾಗ ಮುಂಜಾಗ್ರತೆಯ ದೃಷ್ಟಿಯಿಂದ ಮತ್ತೊಮ್ಮೆ ಬೋರ್ಡೋ ದ್ರಾವಣ ಸಿಂಪಡಿಸಬೇಕು. ಕೊಳೆ ರೋಗ ಕಾಣಿಸಿಕೊಂಡಲ್ಲಿ ತಕ್ಷಣದಲ್ಲಿ ಕೊಳೆ ರೋಗ ಪೀಡಿತ ಅಡಿಕೆ ಕಾಯಿಯನ್ನು ಆರಿಸಿ ತೋಟದಿಂದ ಹೊರ ಹಾಕಬೇಕು. ಕಾಯಿ ಕೊಳೆ ರೋಗ ಪೀಡಿತ ಅಡಿಕೆ ಗೊನೆಗಳಿಗೆ ಮತ್ತು ಕೆಳಭಾಗದ ಮೂರ್ನಾಲ್ಕು ಹೆಡೆಗಳಿಗೆ ಹಾಗೂ ಸುತ್ತಲಿನ 3-4 ಮರಗಳಿಗೆ ಮಾತ್ರ ಮೆಟಲಾಕ್ಸಿಲ್‌ + ಮ್ಯಾಂಕೊಜೆಬ್ (72 WP) ಇರುವ ಶಿಲೀಂದ್ರನಾಶಕವನ್ನು 2 ಗ್ರಾಂ ಅಥವಾ ಮೆಟಾಲಾಕ್ಸಿಲ್ 35 WS 1 ಗ್ರಾಂ ಪ್ರತಿ ಲೀಟರ್ ನೀರಿನ ಜೊತೆಗೆ ಅಂಟು ದ್ರಾವಣ 1 ಮಿ. ಲೀ. ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು ಮತ್ತು ಒಂದು ವಾರದೊಳಗೆ ಸದರಿ ತೋಟಕ್ಕೆ ಶೇಕಡ 1 ರ ಬೋರ್ಡೋ ದ್ರಾವಣ ಸಿಂಪಡಿಸುವುದರಿಂದ ಕೊಳೆ ರೋಗವನ್ನು ನಿಯಂತ್ರಿಸಬಹುದು ಎಂದು ತೋಟಗಾರಿಕೆ ಮಹಾವಿದ್ಯಾಲಯದ ರೋಗಶಾಸ್ತ್ರದ ವಿಜ್ಞಾನಿಗಳಾದ ಡಾ. ಪ್ರಸಾದ್ ಪಿ.ಎಸ್.‌ ರವರು ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗೆ ಪಾಳಾ ಹೋಬಳಿ ಸಹಾಯಕ ತೋಟಗಾರಿಕೆ ಅಧಿಕಾರಿ ಶ್ರೀ ಕೆ.ಬಿ. ಪಠಾಣ (9740405821), ಮುಂಡಗೋಡ ಹೋಬಳಿ ಸಹಾಯಕ ತೋಟಗಾರಿಕೆ ಅಧಿಕಾರಿ ಶ್ರೀ ರಮೇಶ ಜಮಖಂಡಿ (9632841838) ಹಾಗೂ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಶ್ರೀ ಕೃಷ್ಣ ಕುಳ್ಳೂರ ರವರನ್ನು ಸಂಪರ್ಕಿಸಲು ಕೋರಲಾಗಿದೆ.

ವರದಿ: ಮಂಜುನಾಥ್ ಎಫ್.ಎಚ್ 
ಭ್ರಷ್ಟರ ಬೇಟೆ

Recent Posts

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

14 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

19 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

2 days ago