Latest

ವಿಜಯಪುರದಲ್ಲಿ ಪ್ರಹ್ಲಾದ್ ಜೋಶಿ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅವಘಡ

ಕಲಬುರಗಿಯಲ್ಲಿ ಸಂಕಲ್ಪ ಯಾತ್ರೆಯಲ್ಲಿ ಭಾಗಿಯಾಗಲು ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಬಿಎಸ್‌ ವೈ ಹೋದಾಗ ಪ್ಲಾಸ್ಟಿಕ್ ಚೀಲಗಳು ಹಾರಿ ಬಂದಿತ್ತು. ಇದೀಗ ಮತ್ತೊಂದು ಘಟನೆ ನಡೆದಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅವಘಡ ಸಂಭವಿಸಿದೆ. ವಿಜಯಪುರ ನಗರದ ಸೈನಿಕ ಶಾಲಾ ಆವರಣದಲ್ಲಿ ಹೆಲಿಕಾಪ್ಟರ್ ಚಕ್ರದ ಗಾಳಿಯ ರಭಸಕ್ಕೆ ಬ್ಯಾರಿಕೇಡ್ ನೆಲಕ್ಕುರುಳಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೆ ಸಚಿವ ಪ್ರಹ್ಲಾದ್ ಜೋಶಿ ಹೆಲಿಕಾಪ್ಟರ್ ಮೂಲಕ ವಿಜಯಪುರಕ್ಕೆ ಆಗಮಿಸುತ್ತಿದ್ದರು. ಆದ್ರೆ ಶಾಲಾ ಆವರಣದಲ್ಲಿ ಜೋಶಿ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅವಘಡ ಸಂಭವಿಸಿದೆ. ಹೆಲಿಕಾಪ್ಟರ್ ಚಕ್ರದ ಗಾಳಿಯ ರಭಸಕ್ಕೆ ಬ್ಯಾರಿಕೇಡ್ ನೆಲಕ್ಕುರುಳಿದೆ. ನೆಲಕ್ಕೆ ಬಿದ್ದ ಬ್ಯಾರಿಕೇಡ್​ಗಳನ್ನು ತಕ್ಷಣ ಪೊಲೀಸರು ಸರಿಪಡಿಸಿದ್ದಾರೆ. ಅದೃಷ್ಟವಶಾತ್ ಹೆಲಿಪ್ಯಾಡ್​​ನಲ್ಲಿ ಯಾವುದೇ ಅವಘಡ ಸಂಭವಿಸಿಲ್ಲ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago