ಕಲಬುರಗಿಯಲ್ಲಿ ಸಂಕಲ್ಪ ಯಾತ್ರೆಯಲ್ಲಿ ಭಾಗಿಯಾಗಲು ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಬಿಎಸ್ ವೈ ಹೋದಾಗ ಪ್ಲಾಸ್ಟಿಕ್ ಚೀಲಗಳು ಹಾರಿ ಬಂದಿತ್ತು. ಇದೀಗ ಮತ್ತೊಂದು ಘಟನೆ ನಡೆದಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅವಘಡ ಸಂಭವಿಸಿದೆ. ವಿಜಯಪುರ ನಗರದ ಸೈನಿಕ ಶಾಲಾ ಆವರಣದಲ್ಲಿ ಹೆಲಿಕಾಪ್ಟರ್ ಚಕ್ರದ ಗಾಳಿಯ ರಭಸಕ್ಕೆ ಬ್ಯಾರಿಕೇಡ್ ನೆಲಕ್ಕುರುಳಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೆ ಸಚಿವ ಪ್ರಹ್ಲಾದ್ ಜೋಶಿ ಹೆಲಿಕಾಪ್ಟರ್ ಮೂಲಕ ವಿಜಯಪುರಕ್ಕೆ ಆಗಮಿಸುತ್ತಿದ್ದರು. ಆದ್ರೆ ಶಾಲಾ ಆವರಣದಲ್ಲಿ ಜೋಶಿ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅವಘಡ ಸಂಭವಿಸಿದೆ. ಹೆಲಿಕಾಪ್ಟರ್ ಚಕ್ರದ ಗಾಳಿಯ ರಭಸಕ್ಕೆ ಬ್ಯಾರಿಕೇಡ್ ನೆಲಕ್ಕುರುಳಿದೆ. ನೆಲಕ್ಕೆ ಬಿದ್ದ ಬ್ಯಾರಿಕೇಡ್ಗಳನ್ನು ತಕ್ಷಣ ಪೊಲೀಸರು ಸರಿಪಡಿಸಿದ್ದಾರೆ. ಅದೃಷ್ಟವಶಾತ್ ಹೆಲಿಪ್ಯಾಡ್ನಲ್ಲಿ ಯಾವುದೇ ಅವಘಡ ಸಂಭವಿಸಿಲ್ಲ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್‌ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್‌ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್‌ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…