Latest

ಪೂರ್ವ ಮುಂಗಾರು ಮಳೆ: ಅಧಿಕಾರಿ, ಸಿಬ್ಬಂದಿ ಕೇಂದ್ರ ಸ್ಥಾನವನ್ನು ಬಿಡದಂತೆ ಜಿಲ್ಲಾಧಿಕಾರಿ ವಾರ್ನಿಂಗ್.

ಧಾರವಾಡ: ಮುಂಗಾರು ಮುನ್ಸೂಚನೆಯ ಹಿನ್ನೆಲೆದಲ್ಲಿ ಜಿಲ್ಲೆಯಾದ್ಯಂತ ಭಾರಿ ಮಳೆಯ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಇಂತಹ ಸಂದರ್ಭದಲ್ಲಿ ಯಾವುದೇ ಅತಿರಿಕ್ತ ಅನಾಹುತಗಳನ್ನು ತಡೆಯಲು ಮುನ್ನೆಚ್ಚರಿಕೆಯ ಕ್ರಮವಾಗಿ ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಎಲ್ಲಾ ಸರ್ಕಾರಿ ಇಲಾಖೆಗಳಿಗೆ ಕಟ್ಟುನಿಟ್ಟಾದ ಸೂಚನೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಸಂಭವಿಸಬಹುದಾದ ಮಳೆ, ಗಾಳಿ ಮತ್ತು ಪ್ರವಾಹದಿಂದ ಉಂಟಾಗುವ ಅನಾಹುತಗಳಿಗೆ ತಕ್ಷಣ ಸ್ಪಂದನೆ ನೀಡುವಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ. “ಯಾವುದೇ ಕಾರಣಕ್ಕೂ ತಮ್ಮ ಕಾರ್ಯಕ್ಷೇತ್ರವನ್ನು ಬಿಟ್ಟು ಹೋಗಬಾರದು. ತುರ್ತು ಪರಿಸ್ಥಿತಿಯಲ್ಲಿ ಮಾತ್ರ ಜಿಲ್ಲಾಧಿಕಾರಿಗಳ ಪೂರ್ವಾನುಮತಿಯನ್ನು ಪಡೆದು ರಜೆ ತೆಗೆದುಕೊಳ್ಳಬೇಕು,” ಎಂದು ಅವರು ಎಚ್ಚರಿಸಿದ್ದಾರೆ.

ಅಲ್ಲದೆ, ಮಳೆಯಿಂದಾಗಿ ಹಾನಿಗೆ ಒಳಗಾಗುವ ಸಾರ್ವಜನಿಕ ಮೂಲಭೂತ ಸೌಕರ್ಯಗಳನ್ನು ತುರ್ತಾಗಿ ಮರುಸ್ಥಾಪಿಸಲು ಕ್ರಮ ಕೈಗೊಳ್ಳಬೇಕೆಂದು ಇಲಾಖಾಧಿಕಾರಿಗಳಿಗೆ ದಿವ್ಯಪ್ರಭು ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಕುರಿತು ಸಭೆ ನಡೆಸಿ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದ್ದಾರೆ.

ಹವಾಮಾನ ಇಲಾಖೆ ವರದಿಯ ಪ್ರಕಾರ, ಮುಂದಿನ ಕೆಲವು ದಿನಗಳಲ್ಲಿ ಧಾರವಾಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುವ ಸಂಭವವಿರುವ ಹಿನ್ನೆಲೆಯಲ್ಲಿ, ನಿರಂತರ ವೀಕ್ಷಣೆಯೊಂದಿಗೆ ತುರ್ತು ಪರಿಸ್ಥಿತಿಗೆ ಸಿದ್ಧವಾಗುವಂತೆ ಎಲ್ಲಾ ಇಲಾಖೆಗಳಿಗೂ ಸೂಚಿಸಲಾಗಿದೆ.

ಇಂತಹ ಸಂದರ್ಭಗಳಲ್ಲಿ ಸರಕಾರದ ಯಂತ್ರಾಂಗದ ಚುರುಕಾದ ಕಾರ್ಯಕ್ಷಮತೆ ಜನಜೀವನ ರಕ್ಷಿಸುವಲ್ಲಿ ಬಹುಮುಖ್ಯವಾಗಿರುವುದರಿಂದ ಎಲ್ಲ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಣೆಗೆ ತಕ್ಷಣ ಸ್ಪಂದಿಸಬೇಕಾಗಿದೆ. ವರದಿ: ಶಿವರಾಜ್ ಪಿ.ಆರ್.

nazeer ahamad

Recent Posts

ಮನೆ ಬಳಕೆಗೆ ಸಿಗದ ಗೃಹಬಳಕೆಯ ಸಿಲಿಂಡರ್‌ಗಳು ಹೋಟೆಲ್‌ಗಳಲ್ಲಿ , ಅಧಿಕಾರಿಗಳ ನಿರ್ಲಕ್ಷ್ಯ

ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ…

3 hours ago

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

8 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

8 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

8 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

9 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

9 hours ago