ಭಾರತದ ನಿಜವಾದ ಶಕ್ತಿ ಮತ್ತು ಆತ್ಮವನ್ನು ಥಡೆಯುವ ಭಯೋತ್ಪಾದಕರ ಕೃತ್ಯವನ್ನು ಪ್ರಧಾನಿ ನರೇಂದ್ರ ಮೋದಿ ತೀವ್ರವಾಗಿ ಖಂಡಿಸಿದ್ದಾರೆ. ಬಿಹಾರದ ಮಧುಬನಿಯಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಸಂಭವಿಸಿದ ಭೀಕರ ದಾಳಿಯ ವಿರುದ್ಧ ಕಿಡಿಕಾರಿದರು.
“ಇದು ಪ್ರವಾಸಿಗರ ವಿರುದ್ಧ ನಡೆದ ದಾಳಿ ಅಲ್ಲ, ಇದು ಭಾರತ ದೇಶದ ಆತ್ಮದ ಮೇಲೆ ಮಾಡಲಾದ ಕ್ರೂರ ಹಲ್ಲೆ,” ಎಂದು ಪ್ರಧಾನಿಯವರು ಎಚ್ಚರಿಕೆಯ ಸಂದೇಶವೊಂದನ್ನು ಭಯೋತ್ಪಾದಕರಿಗೆ ಕಳಿಸಿದರು. “ಅಮಾಯಕ ಜನರನ್ನು ನಿರ್ದಯವಾಗಿ ಕೊಂದು ಭಯಹುಟ್ಟಿಸಿರುವ ಉಗ್ರರು ತಪ್ಪಿಸಿಕೊಳ್ಳಲಾರರು. ಅವರನ್ನು ಹುಡುಕಿ ಹುಡುಕಿ ಹೊಡೆಯುವುದು ನಮ್ಮ ಸಂಕಲ್ಪ. ದೇಶದ ಶತ್ರುಗಳಿಗೆ ತಕ್ಕ ಪಾಠ ಕಲಿಸಿಯೇ ತೀರುತ್ತೇವೆ,” ಎಂದು ಅವರು ಉಗ್ರರ ವಿರುದ್ಧ ಕಠಿಣ ನಿಲುವು ಪ್ರಕಟಿಸಿದರು.
ದೇಶದ ಎಲ್ಲಾ ನಾಗರಿಕರಿಗೆ ಗೌರವ ನೀಡುವುದು ಸರ್ಕಾರದ ಆದ್ಯ ಕರ್ತವ್ಯ ಎಂದು ಮೋದಿ ಪುನರುಚ್ಛರಿಸಿದರು. “ಕನ್ನಡಿಗರು ಸೇರಿದಂತೆ ಭಾರತದ ವಿವಿಧೆಡೆಯಿಂದ ಬಂದಿರುವ ಅಮಾಯಕರನ್ನು ಈ ಭಯೋತ್ಪಾದಕರು ಗುರಿಯಾಗಿಸಿದ್ದಾರೆ. ಇದು ಸಹಿಸಿಕೊಳ್ಳಲಾಗದು,” ಎಂದ ಅವರು, ಭದ್ರತಾ ಪಡೆಗಳು ಈಗಾಗಲೇ ಕಾರ್ಯಪ್ರವೃತ್ತವಾಗಿವೆ ಎಂಬ ಭರವಸೆಯನ್ನು ಜನತೆಗೆ ನೀಡಿದರು.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…