ಹುಬ್ಬಳ್ಳಿ: ಅಶೋಕ್ ನಗರದ ಉಪ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳು ಪರಸ್ಪರ ಜಗಳವಾಡಿ ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿರುವ ಇಬ್ಬರೂ ಕೈದಿಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೇ 1ರಂದು ಕಾರಾಗೃಹದ ಬ್ಯಾರಕ್ ಸಂಖ್ಯೆ 10ರಲ್ಲಿ ಈ ಘಟನೆ ನಡೆದಿದ್ದು, ವಿಚಾರಣಾಧೀನ ಕೈದಿಗಳಾದ ಶಿವಾನಂದ್ ಹುಲಜೋಗಿ ಮತ್ತು ಮೈಲಾರಿ ಭರಮಣ್ಣನವರ್ ನಡುವೆ ಮಾತಿನ ಗುದ್ದಾಟ ಉಂಟಾಗಿದ್ದು, ಅದು ಹಲ್ಲೆಗೆ ಮಾರ್ಪಟ್ಟಿದೆ. ಶಿವಾನಂದ್, ಉದ್ದೇಶಪೂರ್ವಕವಾಗಿ ಮೈಲಾರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ನಡೆಸಿ, ಬಲಭಾಗದ ಹುಬ್ಬಿಗೆ ಕಚ್ಚಿದ್ದಾನೆ ಎನ್ನಲಾಗಿದೆ.
ಈ ಘಟನೆಗೆ ಕೋಪಗೊಂಡ ಮೈಲಾರಿ ಕೂಡ ಪ್ರತಿಯಾಗಿ ಶಿವಾನಂದನನ್ನು ಕಚ್ಚಿದಿದ್ದಾನೆ. ಇಬ್ಬರಿಗೂ ತೀವ್ರ ರಕ್ತಸ್ರಾವವಾಗಿದ್ದು, ತಕ್ಷಣ ವೈದ್ಯಕೀಯ ನೆರವಿಗಾಗಿ ಅವರನ್ನು ಕರ್ನಾಟಕ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (KIMS)ಗೆ ಕರೆದೊಯ್ಯಲಾಯಿತು.
ಈ ಬಗ್ಗೆ ಉಪ ಕಾರಾಗೃಹದ ಅಧೀಕ್ಷಕ ಉಳವಪ್ಪ ಹೊಸೂರು ಮಾಹಿತಿ ನೀಡಿದ್ದು, ಘಟನೆಯ ಕುರಿತಾಗಿ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆಯೆಂದಿದ್ದಾರೆ. ಘಟನೆಯ ಹಿನ್ನೆಲೆ ತಿಳಿದುಕೊಳ್ಳಲು ಹೆಚ್ಚಿನ ತನಿಖೆ ನಡೆಯುತ್ತಿದೆ. ವರದಿ: ಶಿವರಾಜ್ ಪಿ.ಆರ್.
ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ…
ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…