Latest

ಅಂಕೋಲಾದಲ್ಲಿ ಖಾಸಗಿ ಬಸ್ ಅಪಘಾತ: ಹಳ್ಳಕ್ಕೆ ಬಿದ್ದು ಓರ್ವ ಸಾವು, ಹಲವರಿಗೆ ಗಾಯ

ಅಂಕೋಲಾ: ಬೆಳಗಾವಿಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಖಾಸಗಿ ಪ್ರಯಾಣಿಕ ಬಸ್‌ ಒಂದು ಸೋಮವಾರ ನಸುಕಿನಲ್ಲಿ ಭೀಕರ ಅಪಘಾತಕ್ಕೀಡಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ಅಗಸೂರಿನ ಸಮೀಪದ ಕಿರು ಸೇತುವೆಗೊಂದು ಡಿಕ್ಕಿ ಹೊಡೆದು ನೇರವಾಗಿ ಹಳ್ಳಕ್ಕೆ ಉರುಳಿದೆ.

ಸುಮಾರು ಈ ದುರಂತ ಸಂಭವಿಸಿದ್ದು, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 18 ಜನರಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದ ಪ್ರಯಾಣಿಕರಲ್ಲಿ ಬಹುಪಾಲು ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಆದರೆ ಐದು ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಕಾರವಾರ ಮತ್ತು ಮಂಗಳೂರಿನ ಆಸ್ಪತ್ರೆಗೆ ತುರ್ತಾಗಿ ರವಾನಿಸಲಾಗಿದೆ.

ಸ್ಥಳೀಯರು ಕೂಡಲೇ ರಕ್ಷಣಾ ಕಾರ್ಯಕ್ಕೆ ಧುಮುಕಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಅಂಕೋಲಾ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಅಂಕೋಲಾ ಠಾಣೆ ಪೊಲೀಸರು ಅಪಘಾತದ ನಿಖರ ಕಾರಣವನ್ನು ತಿಳಿದುಕೊಳ್ಳಲು ಮುಂದಾಗಿದ್ದಾರೆ.

ಬಸ್‌ನಲ್ಲಿ ತಾಂತ್ರಿಕ ದೋಷವಿತ್ತೆ ಅಥವಾ ಚಾಲಕನ ನಿರ್ಲಕ್ಷ್ಯ ಇದಕ್ಕೆ ಕಾರಣವೇ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಗ್ರಾಮಸ್ಥರ ಸಮಯೋಚಿತ ನೆರವಿಗೆ ಗಾಯಾಳುಗಳ ಜೀವ ಉಳಿಯಲು ಸಾಧ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

nazeer ahamad

Recent Posts

ಸಾಲ ಮರುಪಾವತಿ ಪ್ರಕರಣ: ಶಿರಸಿಯ ರವೀಶ ಹೆಗಡೆ ಭಟ್ಕಳ ಪೊಲೀಸರ ವಶಕ್ಕೆ

ಭಟ್ಕಳ: ಸಾಲ ಪಡೆದ ಹಣವನ್ನು ಮರುಪಾವತಿಸದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಶಿರಸಿ ಮೂಲದ ರವೀಶ ವೆಂಕಟ್ರಮಣ ಹೆಗಡೆ ಅವರನ್ನು ಭಟ್ಕಳ…

24 hours ago

52ರಲ್ಲೂ ಮಲೈಕಾ ಅರೋರಾ ಲವ್ ಲೈಫ್‌ ಸದ್ದು: ನಬೀಲ್ ನದ್ಲವಿ ಜೊತೆ ಫೋಟೋ ವೈರಲ್, ಹೊಸ ಸಂಬಂಧದ ಗುಸುಗುಸು!

ಮುಂಬೈ: ಬಾಲಿವುಡ್‌ನ ಫಿಟ್ನೆಸ್ ಹಾಗೂ ಫ್ಯಾಷನ್ ಐಕಾನ್ ಮಲೈಕಾ ಅರೋರಾ ತಮ್ಮ ವೈಯಕ್ತಿಕ ಜೀವನದ ವಿಚಾರವಾಗಿಯೂ ಆಗಾಗ್ಗೆ ಸುದ್ದಿಯಾಗುತ್ತಾರೆ. ಇದೀಗ…

1 day ago

ಬೈಕ್‌ಗೆ ಬೆಂಕಿ ಹಾಕಿದ್ದು ರಾಜಕೀಯ ದ್ವೇಷಕ್ಕಲ್ಲ; ಪತಿಯನ್ನೇ ಕೊಲ್ಲಲು ಪತ್ನಿಯ ಸಂಚು! 6 ಮಂದಿ ಬಂಧನ

ಚಂದ್ರಗಿರಿ (ತಿರುಪತಿ): ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಬೈಕ್‌ಗೆ ಬೆಂಕಿ ಹಚ್ಚಲಾಗಿದೆ ಎಂದು ಭಾವಿಸಲಾಗಿದ್ದ ಪ್ರಕರಣವೊಂದು ತನಿಖೆಯ ಬಳಿಕ ಬೇರೆಯದೇ ತಿರುವು…

1 day ago

ಪ್ರೀತಿಸಿ ಮದುವೆಯಾದ ಪತಿಯೇ ಪತ್ನಿಯ ಪಾಲಿಗೆ ಯಮನಾದ: 6 ದಿನದ ಹಸುಗೂಸಿನೊಂದಿಗೆ ಪರಾರಿ!

ದಾವಣಗೆರೆ: ಪ್ರೀತಿಸಿ ಮದುವೆಯಾದ ಪತಿಯೇ ಪತ್ನಿಯ ಸಾವಿಗೆ ಕಾರಣನಾದ ಆರೋಪ ಕೇಳಿಬಂದಿದ್ದು, ಮೃತದೇಹವನ್ನು ಪೊಲೀಸ್ ಠಾಣೆ ಬಳಿಯ ರಸ್ತೆಯಲ್ಲಿ ಬಿಟ್ಟು…

1 day ago

ಹಾಡಹಗಲೇ ಪಡಿತರ ಅಕ್ಕಿ ಸಾಗಾಟ: ಆಹಾರ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ..!

ಬಾಗಲಕೋಟೆ: ಬಡ ಹಾಗೂ ಅರ್ಹ ಫಲಾನುಭವಿಗಳಿಗೆ ವಿತರಿಸಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪಗಳು…

2 days ago

₹5 ಸಾವಿರಕ್ಕೆ ರೂಮ್‌ಗೆ ಬಂದ ಯುವತಿ; ಬಿಯರ್‌ನಲ್ಲಿ ಅಮಲು ಬೆರೆಸಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶಾಕ್!

ಪ್ರವಾಸಕ್ಕೆಂದು ಹೋಗಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹೋಟೆಲ್‌ನಲ್ಲಿ ಯುವತಿಯೊಬ್ಬಳ ಮೋಸದ ಜಾಲಕ್ಕೆ ಸಿಲುಕಿ ಹಣ ಹಾಗೂ ಚಿನ್ನ ಕಳೆದುಕೊಂಡಿರುವ ಘಟನೆ…

2 days ago