ಬಳ್ಳಾರಿ: ನಗರದ ಹೊರವಲಯದಲ್ಲಿರುವ ಪ್ರತಿಷ್ಠಿತ ಖಾಸಗಿ ಕಾಲೇಜಿನ ಉಪನ್ಯಾಸಕನೊಬ್ಬ ತಾನು ಮದುವೆಯಾಗಿಲ್ಲ ಎಂದು ನಂಬಿಸಿ ವಿದ್ಯಾರ್ಥಿನಿಯೊಂದಿಗೆ ಆತ್ಮೀಯತೆ ಬೆಳೆಸಿ, ಬಳಿಕ ಅತ್ಯಾಚಾರ ಎಸಗಿ ವಂಚಿಸಿರುವ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದಾನೆ.
ಬಂಧಿತ ಆರೋಪಿಯನ್ನು ಮೂಲತಃ ಆಂಧ್ರ ಪ್ರದೇಶದ ರವಿಕಿರಣ್ (43) ಎಂದು ಗುರುತಿಸಲಾಗಿದೆ. ಆತ ತಾಳೂರು ರಸ್ತೆಯ ಶ್ರೀಧರಗಡ್ಡೆ ಗ್ರಾಮ ಸಮೀಪದ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ 2025ರ ಜೂನ್ 2ರಿಂದ ಸಸ್ಯಶಾಸ್ತ್ರ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದನು.
ಆರೋಪಿ ವಿದ್ಯಾರ್ಥಿನಿಯೊಂದಿಗೆ ಸಲುಗೆ ಬೆಳೆಸಿಕೊಂಡು, ನಗರದ ಹೊರವಲಯದಲ್ಲಿ ಕಾರಿನಲ್ಲೇ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಅಲ್ಲದೆ, ಘಟನೆಯ ವೇಳೆ ಫೋಟೋಗಳನ್ನು ತೆಗೆದು, ಅವುಗಳನ್ನು ಬಹಿರಂಗಪಡಿಸುವುದಾಗಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ವಿದ್ಯಾರ್ಥಿನಿಯ ಪೋಷಕರು ಆರೋಪಿಸಿದ್ದಾರೆ.
ಈ ಸಂಬಂಧ ವಿದ್ಯಾರ್ಥಿನಿಯ ಪೋಷಕರು ನೀಡಿದ ದೂರಿನ ಮೇರೆಗೆ ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಳಿಕ ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪ್ರಕರಣದ ಕುರಿತು ಮಹಿಳಾ ಠಾಣೆ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…
ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…
ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…
ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…
ತಮಿಳುನಾಡಿನ ಚೆನ್ನೈನಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆಗೈದು, ಆಕೆಯ ದೇಹದ ಭಾಗಗಳನ್ನು ಬಳಸಿ ಬಿರಿಯಾನಿ ತಯಾರಿಸಿರುವ ಆರೋಪ ಕೇಳಿಬಂದಿದ್ದು, ಇಡೀ ಪ್ರಕರಣವೇ…
ಚನ್ನರಾಯಪಟ್ಟಣ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕುಟುಂಬಸ್ಥರು…