Categories: CrimeLatest

ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು: ಖಾಸಗಿ ಆಸ್ಪತ್ರೆ ಸಿಬ್ಬಂದಿ ವಶಕ್ಕೆ

ಬೆಂಗಳೂರು: ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು ಮಾಡಿದ್ದ ಆರೋಪದ ಮೇಲೆ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಹೆಣ್ಣೂರು–ಬಾಗಲೂರು ಮುಖ್ಯರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ 36 ವರ್ಷದ ಮಹಿಳಾ ಸಿಬ್ಬಂದಿಯನ್ನು ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ.

ಶಸ್ತ್ರಚಿಕಿತ್ಸೆ ವೇಳೆ ಕಾಣೆಯಾದ ಆಭರಣ

ಯಲಹಂಕ ನಿವಾಸಿ ಶ್ರೀನಿವಾಸ್ ಅವರು ಮೇ 1ರಂದು ತಮ್ಮ ಪತ್ನಿ ಸ್ವಪ್ನಾ ಅವರನ್ನು ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದರು. ಮೇ 2ರ ಮುಂಜಾನೆ ಆಪರೇಷನ್ ಥಿಯೇಟರ್‌ಗೆ ಕರೆದೊಯ್ಯುವ ಮುನ್ನ ನರ್ಸಿಂಗ್ ಸಿಬ್ಬಂದಿ ಆಭರಣಗಳನ್ನು ತೆಗೆಯುವಂತೆ ಸೂಚಿಸಿದ್ದರು.

ಈ ಹಿನ್ನೆಲೆಯಲ್ಲಿ ಸ್ವಪ್ನಾ ಅವರು 65 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ, 9 ಗ್ರಾಂ ತೂಕದ ಕಿವಿಯೋಲೆಗಳು ಹಾಗೂ 10 ಗ್ರಾಂ ತೂಕದ ಬೆಳ್ಳಿ ಕಾಲುಗಜ್ಜೆಗಳನ್ನು ಹ್ಯಾಂಡ್‌ಬ್ಯಾಗ್‌ನಲ್ಲಿ ಇಟ್ಟು ವಾರ್ಡ್‌ನ ಕಪಾಟಿನೊಳಗೆ ಇರಿಸಿದ್ದರು.

ಆದರೆ ಶಸ್ತ್ರಚಿಕಿತ್ಸೆ ಮುಗಿದ ಬಳಿಕ ಮಧ್ಯಾಹ್ನ ಸುಮಾರು 2.45ರ ವೇಳೆಗೆ ಕಪಾಟು ಪರಿಶೀಲಿಸಿದಾಗ ಸುಮಾರು ₹9.68 ಲಕ್ಷ ಮೌಲ್ಯದ ಆಭರಣಗಳು ಕಾಣೆಯಾಗಿದ್ದವು.

ಸಿಸಿ ಕ್ಯಾಮೆರಾದಿಂದ ಬಯಲಾಯ್ತು ಕಳವು

ಘಟನೆ ಬಳಿಕ ಆಸ್ಪತ್ರೆ ಸಿಬ್ಬಂದಿಯನ್ನು ಪ್ರಶ್ನಿಸಿದರೂ ಸಮರ್ಪಕ ಉತ್ತರ ಸಿಗದ ಕಾರಣ ಶ್ರೀನಿವಾಸ್ ಹೆಣ್ಣೂರು ಪೊಲೀಸರಿಗೆ ದೂರು ನೀಡಿದ್ದರು.

ದೂರಿನ ಆಧಾರದಲ್ಲಿ ಆಸ್ಪತ್ರೆಯ ಸಿಸಿ ಕ್ಯಾಮೆರಾ ದೃಶ್ಯಗಳು ಹಾಗೂ ಇತರೆ ಮಾಹಿತಿಗಳನ್ನು ಪರಿಶೀಲಿಸಿದ ಪೊಲೀಸರು, ಇತ್ತೀಚೆಗೆ ಕೆಲಸಕ್ಕೆ ಸೇರಿದ್ದ ಮಹಿಳಾ ಸಿಬ್ಬಂದಿಯ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ವಿಚಾರಣೆ ವೇಳೆ ಆರೋಪಿ ಕಳವು ಮಾಡಿರುವುದನ್ನು ಒಪ್ಪಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳವು ಮಾಡಿದ ಚಿನ್ನಾಭರಣಗಳನ್ನು ಆರೋಪಿ ಬೇರೆಡೆ ಅಡಮಾನ ಇಟ್ಟಿರುವುದು ಪತ್ತೆಯಾಗಿದ್ದು, ಅವುಗಳನ್ನು ವಶಕ್ಕೆ ಪಡೆಯುವ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

16 minutes ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

3 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

8 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

23 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago