ಬೆಂಗಳೂರಿನ ಜಯನಗರದಲ್ಲಿ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಬಳಸಿ ಹಣದ ಬೇಡಿಕೆ ಇಟ್ಟ ಆರೋಪದಡಿ ಸಾಧನಾ ಶೆಟ್ಟಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಕಾರ್ತಿಕ್ ಎಂಬಾತ ಜಯನಗರದಲ್ಲಿ ಮೇಕಪ್ ಕ್ಲಿನಿಕ್ ನಡೆಸುತ್ತಿದ್ದು, ಆತ ವಿವಾಹಿತನಾಗಿದ್ದಾನೆ. ಕ್ಲಿನಿಕ್ ಪ್ರಚಾರಕ್ಕಾಗಿ ಇನ್‌ಸ್ಟಾಗ್ರಾಮ್ ಮೂಲಕ ಹುಡುಕಾಟ ನಡೆಸಿದ ವೇಳೆ ಸಾಧನಾ ಶೆಟ್ಟಿ ಪರಿಚಯವಾಗಿದ್ದಳು. ಬಳಿಕ 2024ರ ಆಗಸ್ಟ್ ತಿಂಗಳಲ್ಲಿ ಜಯನಗರದ ಕಫೆಯಲ್ಲಿ ಇಬ್ಬರೂ ಭೇಟಿಯಾಗಿ ಕ್ಲಿನಿಕ್ ಪ್ರಚಾರದ ಕುರಿತು ಮಾತುಕತೆ ನಡೆಸಿದ್ದಾರೆ. ಈ ಪರಿಚಯವು ಕ್ರಮೇಣ ಆತ್ಮೀಯತೆಯಾಗಿ, ನಂತರ ವೈಯಕ್ತಿಕ ಸಂಬಂಧಕ್ಕೆ ತಿರುಗಿದೆಯೆಂದು ಹೇಳಲಾಗಿದೆ.
ಈ ಸಂಬಂಧದ ವೇಳೆ ತೆಗೆದ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಆಧಾರವಾಗಿಟ್ಟುಕೊಂಡು, ಕಾರ್ತಿಕ್ ಪತ್ನಿ ಹಾಗೂ ಕುಟುಂಬ ಸದಸ್ಯರಿಗೆ ಕಳುಹಿಸುವುದಾಗಿ ಸಾಧನಾ ಶೆಟ್ಟಿ ಬೆದರಿಕೆ ಹಾಕಿ ಸುಮಾರು ಒಂದೂವರೆ ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದಾಳೆ ಎಂದು ಆರೋಪಿಸಲಾಗಿದೆ.
ಈ ಬೆದರಿಕೆಯಿಂದ ಭಯಗೊಂಡ ಕಾರ್ತಿಕ್, ಈಗಾಗಲೇ 5 ಲಕ್ಷ ರೂಪಾಯಿ ನಗದು, 35 ಸಾವಿರ ಮೌಲ್ಯದ ಉಂಗುರ, 70 ಸಾವಿರ ಬೆಲೆಯ ಚಿನ್ನದ ಸರ ಹಾಗೂ ಸುಮಾರು 1.5 ಲಕ್ಷ ಮೌಲ್ಯದ ಐಫೋನ್ ಅನ್ನು ನೀಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇಷ್ಟಕ್ಕೇ ತೃಪ್ತಿಪಡದ ಸಾಧನಾ ಶೆಟ್ಟಿ, ಮತ್ತೊಮ್ಮೆ ಹೆಚ್ಚಿನ ಹಣಕ್ಕಾಗಿ ಒತ್ತಡ ಹಾಕಿ, ಹಣ ನೀಡದಿದ್ದಾಗ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಕಾರ್ತಿಕ್ ಪತ್ನಿಗೆ ಕಳುಹಿಸಿ ಕುಟುಂಬ ಕಲಹಕ್ಕೆ ಕಾರಣವಾಗಿದ್ದಾಳೆ ಎಂಬ ಆರೋಪವೂ ಕೇಳಿಬಂದಿದೆ.
ಇದಲ್ಲದೆ, ಕ್ಲಿನಿಕ್ ಬಳಿ ಬಂದು ಗಲಾಟೆ ಮಾಡಿ, ಸಂಬಂಧಿತ ಡೇಟಾವನ್ನು ಪೆನ್‌ಡ್ರೈವ್ ಸೇರಿದಂತೆ ತನ್ನ ತಾಯಿ ಮತ್ತು ಸ್ನೇಹಿತರ ಮೊಬೈಲ್‌ಗಳಲ್ಲಿ ಸಂಗ್ರಹಿಸಿದ್ದೇನೆ ಎಂದು ಬೆದರಿಕೆ ಹಾಕಿದ್ದಾಳೆ ಎಂಬುದೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಪ್ರಸ್ತುತ ಕಾರ್ತಿಕ್ ನೀಡಿದ ದೂರಿನ ಮೇರೆಗೆ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…