Latest

ಗೋ ಹತ್ಯೆ ಖಂಡಿಸಿ ಹಿಂದೂಪರ ಸಂಘಟನೆಗಳ ಪ್ರತಿಭಟನೆ.

ಮುಂಡಗೋಡ: ಪಟ್ಟಣದಲ್ಲಿ ಗೋ ಹತ್ಯೆ ನಡೆದಿದೆ ಎಂದು ಆರೋಪಿಸಿ ಹಿಂದೂಪರ ಸಂಘಟನೆ ಕಾಯಕರ್ತರು ಗುರುವಾರ ಮಸೀದಿ ಬಳಿ ಸೇರಿದ್ದರಿಂದ ಕೆಲಕಾಲ ಬಿಗುವಿನ ವಾತಾವ ರಣ ಸೃಷ್ಟಿಯಾಗಿತ್ತು ಮುನ್ನೆಚ್ಚರಿಕೆ ಕ್ರಮ ವಾಗಿ ಸಿಪಿಐ ರಂಗನಾಥ ನೀಲಮ್ಮನವರ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸಿದರು.

ಗೋಹತ್ಯೆ ನಡೆದ ಆರೋಪ : ಕಠಿಣ ಕ್ರಮಕ್ಕೆ ಆಗ್ರಹ
ಗೋ ಹತ್ಯೆ ಮಾಡಲಾಗಿದೆ ಎಂದು ಮಸೀದಿ ಹಿಂಬದಿ ಕಟ್ಟಡ ಪಕ್ಕದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನೊಬ್ಬ ಎಬಿವಿಪಿ ಹಾಗೂ ಹಿಂದೂಪರ ಸಂಘಟನೆಯವರಿಗೆ ಮಾಹಿತಿ ನೀಡಿದ ಕೆಲವೇ ನಿಮಿಷದಲ್ಲಿ ನೂರಾರು ಕಾರ್ಯಕರ್ತರು ಜಮಾಯಿಸಿದರು. ಸ್ಥಳಕ್ಕೆ ಸಿಪಿಐ ರಂಗನಾಥ್ ನೀಲಮ್ಮನವರ ಹಾಗೂ ಪಿಎಸ್‌ಐ ಪರಶುರಾಮ ಮಿರ್ಜಗಿ
ಭೇಟಿ ನೀಡಿದ ವೇಳೆ ಅಲ್ಲಿ ದನದ ಮಾಂಸ ಇಟ್ಟಿರುವುದು ಪತ್ತೆಯಾಗಿದ್ದು, ಮಾಂಸ ವಶಕ್ಕೆ ಪಡೆದು ಪಶು ಆಸ್ಪತ್ರೆಗೆ ಪರೀಕ್ಷೆಗೆ ಕಳಿಹಿಸಿದರು.

ಪ್ರತಿಭಟನೆ: ಈ ಮಧ್ಯೆ ಪ್ರಕರಣ ಖಂಡಿಸಿ ಬಿಜೆಪಿ, ಹಿಂದೂ ಜಾಗರಣ ವೇದಿಕೆ,ಎಬಿವಿಪಿ, ಬಜರಂಗದಳ ಹಾಗೂ ಶ್ರೀರಾಮ ಸೇನೆಯ ಕಾರ್ಯಕರ್ತರು ಶಿವಾಜಿ ಸರ್ಕಲ್‌ನಲ್ಲಿ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು. ಘಟನೆಗೆ ಕಾರಣರಾದವರನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ
ಕೈಗೊಳ್ಳಬೇಕು. ಆರೋಪಿಗಳನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ಪೋಲಿಸರಿಗೆ ಮನವಿ ಸಲ್ಲಿಸಿದರು. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ಮಂಡಳ ಅಧ್ಯಕ್ಷ ಮಂಜುನಾಥಪಾಟೀಲ, ಪ.ಪಂ ಸದಸ್ಯ ಫಣಿರಾಜ ಹದಳಗಿ, ಮುಖಂಡರಾದ ಪ್ರಕಾಶ ಬಡಿಗೇರ, ಶಂಕರ ಲಮಾಣಿ, ವಿಶ್ವನಾಥ ನಾಯರ್, ಅಯ್ಯಪ್ಪ ಭಜಂತ್ರಿ, ರಾಜೇಶ ರಾವ್, ಮಂಜುನಾಥ ಶೇಟ್, ಕೊಟ್ಟೆನ ಹಿರೇಮಠ, ತಂಗಮ್ಮ ಚಿನ್ನನ್, ಭರತ ಹದಳಗಿ ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.

ಇಬ್ಬರ ವಿರುದ್ಧ ಪ್ರಕರಣ ದಾಖಲು: ಘಟನೆಗೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಪಟ್ಟಣದ ದೇಶಪಾಂಡೆ ನಗರದ ಜಹೀರ ಆತ್ಮದ ಮೈನುದ್ದಿನ್ ಬೇಪಾರಿ(32) ಹಾಗೂ ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾರೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

17 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

1 day ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago