ಉತ್ತರ ಪ್ರದೇಶದ ಬರೇಲಿಯಲ್ಲಿ ಪೊಲೀಸರು ನಡೆಸಿದ ಏಕಾಏಕಿ ದಾಳಿಯಲ್ಲಿ, ಪ್ರಭಾವಶಾಲಿ ರಾಜಕೀಯ ನಾಯಕರೊಂದಿಗಿನ ಸಂಪರ್ಕ ಹೊಂದಿರುವ ಹೋಟೆಲ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಬೆಳಕಿಗೆ ಬಂದಿದೆ. ಕಳೆದ ಕೆಲ ದಿನಗಳಿಂದ ಶಂಕೆ ವ್ಯಕ್ತವಾಗುತ್ತಿದ್ದ ಹಿನ್ನೆಲೆ, ಪೊಲೀಸರು ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ್ದಾರೆ.
ದಾಳಿಯಲ್ಲಿ ಹೋಟೆಲ್‌ನೊಳಗೆ ಅಕ್ರಮವಾಗಿ ವಾಸ್ತವ್ಯ ಹೊಂದಿದ್ದ ಏಳು ಮಹಿಳೆಯರು ಹಾಗೂ ಮೂವರು ಯುವಕರನ್ನು ಬಂಧಿಸಲಾಗಿದೆ. ಬಂಧಿತ ಮಹಿಳೆಯರು ಪಶ್ಚಿಮ ಬಂಗಾಳ, ಜಾರ್ಖಂಡ್, ಲಕ್ನೋ, ಬುಡೌನ್ ಮತ್ತು ರಾಜಸ್ಥಾನ ರಾಜ್ಯಗಳಿಗೆ ಸೇರಿದವರಾಗಿದ್ದಾರೆ ಎಂದು ತಿಳಿದು ಬಂದಿದೆ.
ಪೊಲೀಸರ ಪ್ರಕಾರ, ಈ ಜಾಲವನ್ನು ಚಲಾಯಿಸುತ್ತಿದ್ದ ಪ್ರಮುಖ ಮಾಫಿಯಾ ಗುಂಪು ಇನ್ನೂ ಪತ್ತೆಯಾಗಿಲ್ಲ. ದಂಧೆಯ ಹಿಂದೆ ಇರುವ ಬೃಹತ್ ನೆಟ್‌ವರ್ಕ್ ಹಾಗೂ ಹೋಟೆಲ್ ಮಾಲಿಕನ ಪಾತ್ರದ ಬಗ್ಗೆ ತನಿಖೆ ಮುಂದುವರಿಸಲಾಗಿದ್ದು, ಪ್ರಮುಖ ಆರೋಪಿಗಳನ್ನು ಬಂಧಿಸಲು ವಿಶೇಷ ತಂಡವನ್ನು ರಚಿಸಲಾಗಿದೆ.
ಈ ಬೆಳವಣಿಗೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಹುಟ್ಟಿಸಿರುವುದು ಹಾಗೂ ಬಿಜೆಪಿ ನಾಯಕರ ಹೋಟೆಲ್ ಎಂಬ ಮಾಹಿತಿಯು ಪ್ರಕರಣಕ್ಕೆ ಮತ್ತಷ್ಟು ತೀವ್ರತೆ ನೀಡಿದೆ.
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…
ಮೈಸೂರು: ನಕಲಿ ದಾಖಲೆಗಳ ಆಧಾರದಲ್ಲಿ ನೋಂದಣಿ ಮಾಡಿಕೊಂಡು ತೆರಿಗೆ ವಂಚನೆ ಮಾಡುತ್ತಿದ್ದ ದುಬಾರಿ ಕಾರುಗಳ ಮೇಲೆ ಸಾರಿಗೆ ಇಲಾಖೆಯ ಅಧಿಕಾರಿಗಳು…
ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯಲ್ಲಿ ಗಾಂಜಾ ಬೆಳೆದಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಜಮೀನಿನಲ್ಲಿ ಸುಮಾರು 17 ಕಿಲೋಗ್ರಾಂ…
ರಾಜ್ಯ ಸರ್ಕಾರ ಓಲಾ, ಉಬರ್ ಹಾಗೂ ರ‍್ಯಾಪಿಡೋ ಸೇರಿದಂತೆ ಎಲ್ಲ ಬೈಕ್ ಟ್ಯಾಕ್ಸಿ ಸೇವೆಗಳನ್ನು ಬೆಂಗಳೂರಿನಲ್ಲಿ ರ‍್ಯಾಪಿಡೋ ಚಾಲಕನಿಂದ ಮಹಿಳೆಯ…
ಪುತ್ತೂರು, ಜೂನ್ 16 – ಪುತ್ತೂರು ಹೊರವಲಯದ ಚಿಕ್ಕಪುತ್ತೂರಿನಲ್ಲಿ ಏಳು ತಿಂಗಳ ಗರ್ಭಿಣಿಯಾಗಿದ್ದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ…
ಕೋಲಾರ್ (ಜೂನ್ 16): ನಗರದ ಸಹಕಾರ ನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ಕೇಂದ್ರವೊಂದರಲ್ಲಿ ಭಾನುವಾರ ರಾತ್ರಿ ಸಂಭವಿಸಿದ…