Crime

ಬಿಜೆಪಿ ನಾಯಕರ ಹೋಟೆಲ್‌ನಲ್ಲಿ ವೇಶ್ಯಾವಾಟಿಕೆ ದಂಧೆ ಬಹಿರಂಗ.!

ಉತ್ತರ ಪ್ರದೇಶದ ಬರೇಲಿಯಲ್ಲಿ ಪೊಲೀಸರು ನಡೆಸಿದ ಏಕಾಏಕಿ ದಾಳಿಯಲ್ಲಿ, ಪ್ರಭಾವಶಾಲಿ ರಾಜಕೀಯ ನಾಯಕರೊಂದಿಗಿನ ಸಂಪರ್ಕ ಹೊಂದಿರುವ ಹೋಟೆಲ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಬೆಳಕಿಗೆ ಬಂದಿದೆ. ಕಳೆದ ಕೆಲ ದಿನಗಳಿಂದ ಶಂಕೆ ವ್ಯಕ್ತವಾಗುತ್ತಿದ್ದ ಹಿನ್ನೆಲೆ, ಪೊಲೀಸರು ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ್ದಾರೆ.

ದಾಳಿಯಲ್ಲಿ ಹೋಟೆಲ್‌ನೊಳಗೆ ಅಕ್ರಮವಾಗಿ ವಾಸ್ತವ್ಯ ಹೊಂದಿದ್ದ ಏಳು ಮಹಿಳೆಯರು ಹಾಗೂ ಮೂವರು ಯುವಕರನ್ನು ಬಂಧಿಸಲಾಗಿದೆ. ಬಂಧಿತ ಮಹಿಳೆಯರು ಪಶ್ಚಿಮ ಬಂಗಾಳ, ಜಾರ್ಖಂಡ್, ಲಕ್ನೋ, ಬುಡೌನ್ ಮತ್ತು ರಾಜಸ್ಥಾನ ರಾಜ್ಯಗಳಿಗೆ ಸೇರಿದವರಾಗಿದ್ದಾರೆ ಎಂದು ತಿಳಿದು ಬಂದಿದೆ.

ಪೊಲೀಸರ ಪ್ರಕಾರ, ಈ ಜಾಲವನ್ನು ಚಲಾಯಿಸುತ್ತಿದ್ದ ಪ್ರಮುಖ ಮಾಫಿಯಾ ಗುಂಪು ಇನ್ನೂ ಪತ್ತೆಯಾಗಿಲ್ಲ. ದಂಧೆಯ ಹಿಂದೆ ಇರುವ ಬೃಹತ್ ನೆಟ್‌ವರ್ಕ್ ಹಾಗೂ ಹೋಟೆಲ್‌ ಮಾಲಿಕನ ಪಾತ್ರದ ಬಗ್ಗೆ ತನಿಖೆ ಮುಂದುವರಿಸಲಾಗಿದ್ದು, ಪ್ರಮುಖ ಆರೋಪಿಗಳನ್ನು ಬಂಧಿಸಲು ವಿಶೇಷ ತಂಡವನ್ನು ರಚಿಸಲಾಗಿದೆ.

ಈ ಬೆಳವಣಿಗೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಹುಟ್ಟಿಸಿರುವುದು ಹಾಗೂ ಬಿಜೆಪಿ ನಾಯಕರ ಹೋಟೆಲ್ ಎಂಬ ಮಾಹಿತಿಯು ಪ್ರಕರಣಕ್ಕೆ ಮತ್ತಷ್ಟು ತೀವ್ರತೆ ನೀಡಿದೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

14 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

1 day ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

1 day ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago