ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತಹ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ಸಾರ್ವಜನಿಕರ ರಕ್ಷಣೆಗಾಗಿ ಕರ್ತವ್ಯ ನಿರ್ವಹಿಸಬೇಕಿದ್ದ ಪೊಲೀಸ್ ಅಧಿಕಾರಿಯೇ ಅಪ್ರಾಪ್ತ ಬಾಲಕರ ಮೇಲೆ ಅಮಾನುಷವಾಗಿ ವರ್ತಿಸಿದ ಆರೋಪದಡಿ ಬಂಧನಕ್ಕೊಳಗಾಗಿದ್ದಾನೆ. ಅಮೃತಹಳ್ಳಿ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ವಿರುದ್ಧ ದಾಖಲಾಗಿರುವ ಈ ಪ್ರಕರಣ ಇಡೀ ಪೊಲೀಸ್ ಇಲಾಖೆಗೆ ಕಳಂಕ ತಂದಿದೆ.
ಕೆಲ ತಿಂಗಳ ಹಿಂದೆ ಅಮೃತಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣದ ತನಿಖೆ ಸಂಬಂಧ ಕೆಲವು ಅಪ್ರಾಪ್ತ ಬಾಲಕರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಪಿಎಸ್‌ಐ ಪ್ರವೀಣ್ ಬಾಲಕರನ್ನು ಠಾಣೆಯಲ್ಲಿ ವಿಚಾರಣೆ ನಡೆಸುವ ಬದಲು ಖಾಸಗಿ ಸ್ಥಳವೊಂದಕ್ಕೆ ಕರೆದೊಯ್ದಿದ್ದಾನೆ ಎನ್ನಲಾಗಿದೆ. ಅಲ್ಲಿ ಬಾಲಕರ ಮೇಲೆ ಬೆಲ್ಟ್‌ನಿಂದ ಹಲ್ಲೆ ನಡೆಸಿ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಇದಷ್ಟೇ ಅಲ್ಲದೆ, ಓರ್ವ ಅಪ್ರಾಪ್ತ ಬಾಲಕನಿಂದ ಮತ್ತೊಬ್ಬ ಬಾಲಕನಿಗೆ ಅಸಭ್ಯವಾಗಿ ವರ್ತಿಸುವಂತೆ ಒತ್ತಾಯಿಸಿದ್ದಾನೆ ಎಂಬ ಮಾಹಿತಿಯೂ ತನಿಖೆಯಲ್ಲಿ ಹೊರಬಂದಿದೆ. ಈ ಸಂಪೂರ್ಣ ಘಟನೆಯನ್ನು ಆತ ತನ್ನ ಮೊಬೈಲ್‌ನಲ್ಲಿ ವಿಡಿಯೋ ಮಾಡಿ ಉಳಿಸಿಕೊಂಡಿದ್ದ ಎನ್ನಲಾಗಿದೆ. ಇತ್ತೀಚೆಗೆ ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಘಟನೆ ಹಿರಿಯ ಪೊಲೀಸ್ ಅಧಿಕಾರಿಗಳ ಗಮನಕ್ಕೆ ಬಂದ ಬಳಿಕ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ.
ಘಟನೆಯ ಕುರಿತು ತಕ್ಷಣ ಕ್ರಮ ಕೈಗೊಂಡ ಹಿರಿಯ ಅಧಿಕಾರಿಗಳು, ಪಿಎಸ್‌ಐ ಪ್ರವೀಣ್ ವಿರುದ್ಧ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಕಾಯ್ದೆ ಸೇರಿದಂತೆ ವಿವಿಧ ಕಾನೂನುಗಳಡಿ ಪ್ರಕರಣ ದಾಖಲಿಸಿದ್ದಾರೆ. ಬಳಿಕ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಪ್ರಕ್ರಿಯೆ ಆರಂಭಿಸಲಾಗಿದೆ.
ಈ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಕಾನೂನು ಪಾಲನೆ ಮಾಡಬೇಕಾದ ಅಧಿಕಾರಿಯೊಬ್ಬರು ಅಧಿಕಾರ ದುರುಪಯೋಗ ಮಾಡಿಕೊಂಡಿರುವುದು ಸಮಾಜದಲ್ಲಿ ಆತಂಕ ಮೂಡಿಸಿದೆ. ಪ್ರಕರಣದ ಕುರಿತು ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳು ಸವಿಸ್ತಾರ ತನಿಖೆ ನಡೆಸುತ್ತಿದ್ದಾರೆ.
ಯಲ್ಲಾಪುರ: 2001ರಲ್ಲಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು…
ಬೆಂಗಳೂರು–ಮೈಸೂರು ಸಂಪರ್ಕವನ್ನು ಸುಧಾರಿಸುವುದು ಹಾಗೂ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ರೂಪುಗೊಂಡಿದ್ದ ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (BMICP)…
ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…
ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…
ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…
ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…